ವಿಶಿಷ್ಟ ಪೊಲೀಸ್ ಸ್ಟೋರಿಯಲ್ಲಿ ವಸಿಷ್ಠ
Team Udayavani, Dec 4, 2020, 3:57 PM IST
ವಸಿಷ್ಠ ಸಿಂಹ ಸಿನಿಮಾ ಮೇಲೆ ಸಿನಿಮಾ ಮಾಡುತ್ತಾ ಬಿಝಿಯಾಗುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ಸಿನಿಮಾ ಮಾಡುತ್ತಿರುವ ವಸಿಷ್ಠ ಈಗಕನ್ನಡದಲ್ಲೊಂದು ಹೊಸ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಆ ಚಿತ್ರದ ಮುಹೂರ್ತ ನಡೆದಿದೆ.
“ಜನರತ್ನ ಪ್ರೊಡಕ್ಷನ್ಸ್’ ನಡಿಯಲ್ಲಿ ಜನಾರ್ದನ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವಚನ್ ಈ ಚಿತ್ರದ ನಿರ್ದೇಶಕರು. ಈ ಚಿತ್ರದಲ್ಲಿ ಇಬ್ಬರು ಹೀರೋಗಳು. ವಸಿಷ್ಠ ಜೊತೆಗೆ ಕಿಶೋರ್‌ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತನಿಖೆಯ ಹಾದಿಯಲ್ಲಿ ಸಾಗುವ ಈ ಸಿನಿಮಾದಲ್ಲಿ ಇಬ್ಬರ ನಡುವೆ ಶೀತಲ ಸಮರ ನಡೆಯುತ್ತದೆ. ನೈಜ ಘಟನೆಗಳನ್ನು ಮಿಶ್ರಣ ಮಾಡಿ ಸಾಗುವ ಈ ಚಿತ್ರದಲ್ಲಿ ಎರಡೂ ಪಾತ್ರಗಳು ಪ್ರಮುಖವಾಗಿರುತ್ತವೆ ಎಂಬುದು ನಿರ್ದೇಶಕ ವಚನ್ ಅವರ ಮಾತು. ನಾಯಕ ವಸಿಷ್ಠ ಅವರಿಗೆ ಈ ಚಿತ್ರದ ಮೇಲೆ ವಿಶ್ವಾಸವಿದೆ. ಅದಕ್ಕೆಕಾರಣ ಸಿನಿಮಾದಕಥೆ ಹಾಗೂ ನಿರ್ದೇಶಕರ ನಿರೂಪಣಾ ಶೈಲಿ.”ಎಲ್ಲಾ ಸ್ನೇಹಿತರು ಸೇರಿಕೊಂಡು ಒಂದೊಳ್ಳೆಯ ಸಿನಿಮಾಮಾಡಬೇಕೆಂದು ಹೊರಟಿದ್ದೇವೆ. ಸಿನಿಮಾವನ್ನು ಪ್ರೀತಿಸುವ ಎಲ್ಲರೂ ಒಂದಾಗಿರುವುದರಿಂದ ಸಿನಿಮಾ ಚೆನ್ನಾಗಿ ಮೂಡಿಬರುತ್ತದೆ ಎಂಬ ವಿಶ್ವಾಸವಿದೆ’ ಎನ್ನುತ್ತಾರೆ ವಸಿಷ್ಠ.
ಇದನ್ನೂ ಓದಿ : ವರ್ಷಾಂತ್ಯದಲ್ಲಿ ಸಿನಿಮಾ ಕ್ಯೂ
ಚಿತ್ರದಲ್ಲಿ ಚಿಕ್ಕಣ್ಣ, ಧರ್ಮಣ್ಣ, ಸುಮನ್, ಪ್ರಕಾಶ್ ತುಮ್ಮಿನಾಡು ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ನಾಲ್ಕು ಹಾಡುಗಳಿಗೆ ಅನೂಪ್ ಸೀಳಿನ್ ಸಂಗೀತ ನೀಡಲಿದ್ದಾರೆ. ಮಾಸ್ತಿ ಸಂಭಾಷಣೆ ಬರೆದರೆ, ನವೀನ್‌ಕುಮಾರ್ ಛಾಯಾಗ್ರಹಣ ಮತ್ತು ಹರೀಶ್‌ಕೊಮ್ಮೆ ಸಂಕಲನವಿದೆ. ಬೆಂಗಳೂರು, ತುಮಕೂರು, ಮೈಸೂರು, ಮಡಿಕೇರಿ ಸುತ್ತಮುತ್ತ ಮತ್ತು ವಿದೇಶಗಳಲ್ಲಿಯೂ ಶೂಟಿಂಗ್ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.