ಸುವರ್ಣ ಸುಂದರಿ
ಗ್ಯಾಂಗ್‌ಸ್ಟಾರ್ ಕಾಮಿಡಿಯಲ್ಲಿ ವೀರೇಂದ್ರ ಶೆಟ್ಟಿ
Team Udayavani, Oct 4, 2019, 5:05 AM IST
ಇಲ್ಲಿಯವರೆಗೆ ಕನ್ನಡ ವ್ಯಾಕರಣ ಮತ್ತು ಸಾಹಿತ್ಯದಲ್ಲಿ ಕೇಳುತ್ತಿದ್ದ “ಸವರ್ಣ ದೀರ್ಘ ಸಂಧಿ’ಯ ಹೆಸರು ಈಗ ಗಾಂಧಿನಗರದಲ್ಲೂ ಕೇಳಿಬರುತ್ತಿದೆ. ಹೌದು, ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಸವರ್ಣ ದೀರ್ಘ ಸಂಧಿ’ ಚಿತ್ರ ತೆರೆಗೆ ಬರೋದಕ್ಕೆ ಸಿದ್ಧವಾಗುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಹಾಡುಗಳು ಹೊರಬಂದಿವೆ.
ಬಹಳ ದಿನಗಳ ನಂತರ ಮೆಲೋಡಿ ಮಾಂತ್ರಿಕ ಮನೋಮೂರ್ತಿ “ಸವರ್ಣ ದೀರ್ಘ ಸಂಧಿ’ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದು, ಚಿತ್ರದ ಹಾಡುಗಳು ನಿಧಾನವಾಗಿ ಸಿನಿಪ್ರಿಯರನ್ನು ಸೆಳೆಯುತ್ತಿವೆ.
ಇತ್ತೀಚೆಗೆ ನಡೆದ ಸಮಾರಂಭದಲ್ಲಿ ನಿರ್ದೇಶಕ ಯೋಗರಾಜ್ ಭಟ್, ಪತ್ರಕರ್ತ ಅಜಿತ್ ಹನುಮಕ್ಕನವರ್, ಸಾಹಿತಿ ಜಯಂತ ಕಾಯ್ಕಿಣಿ ಮೊದಲಾದ ಗಣ್ಯರ ಸಮ್ಮುಖದಲ್ಲಿ “ಸವರ್ಣ ದೀರ್ಘ ಸಂಧಿ’ಯ ಹಾಡುಗಳು ಹೊರಬಂದವು.
ಈ ಹಿಂದೆ ತುಳು ಭಾಷೆಯಲ್ಲಿ “ಚಾಲಿ ಪೋಲೀಲು’ ಎನ್ನುವ ಕಾಮಿಡಿ ಚಿತ್ರವನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ನಿರ್ದೇಶಕ ವೀರೇಂದ್ರ ಶೆಟ್ಟಿ “ಸವರ್ಣ ದೀರ್ಘ ಸಂಧಿ’ ಚಿತ್ರದಲ್ಲಿ ತೆರೆಮುಂದೆ ನಾಯಕನಾಗಿ ಮತ್ತು ತೆರೆಹಿಂದೆ ನಿರ್ದೇಶಕನಾಗಿ ಡಬಲ್ ರೋಲ್ ಪ್ಲೇ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಚಿತ್ರದ ನಾಯಕ ನಟ ಕಂ ನಿರ್ದೇಶಕ ವೀರೇಂದ್ರ ಶೆಟ್ಟಿ, “ಕನ್ನಡದಲ್ಲಿ ಹೊಸಥರದ ಚಿತ್ರವನ್ನು ಮಾಡುವ ಯೋಚನೆಯಲ್ಲಿದ್ದಾಗ ಈ ಕಥೆ ಹೊಳೆಯಿತು. ಇದೊಂದು ಕಾಮಿಡಿ, ರೌಡಿಸಂ ಕಥಾಹಂದರವಿರುವ ಚಿತ್ರ. ಚಿತ್ರದ ಕಥೆ ವಿಭಿನ್ನವಾಗಿರುವುದರಿಂದ, ಅದಕ್ಕೆ ತಕ್ಕಂತೆ ಹಾಡುಗಳು ಕೂಡ ವಿಭಿನ್ನವಾಗಿ ಮೂಡಿಬಂದಿವೆ. ಸದ್ಯ ಚಿತ್ರದ ಪ್ರಮೋಶನಲ್ ಕೆಲಸಗಳು ನಡೆಯುತ್ತಿದ್ದು, ಇದೇ ಅಕ್ಟೋಬರ್ 18ರಂದು ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಪ್ಲಾನ್ ಹಾಕಿಕೊಂಡಿದ್ದೇವೆ. ಈಗಾಗಲೇ ಚಿತ್ರದ ಟೈಟಲ್, ಪೋಸ್ಟರ್, ಟೀಸರ್ ಎಲ್ಲದಕ್ಕೂ ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದ್ದು, ಇದೇ ರೀತಿಯಲ್ಲಿ ಚಿತ್ರವನ್ನು ಸ್ವೀಕರಿಸುವರೆಂಬ ವಿಶ್ವಾಸವಿದೆ’ ಎಂದರು.
ಹಾಡುಗಳ ಬಗ್ಗೆ ಮಾತನಾಡಿದ ಸಂಗೀತ ನಿರ್ದೇಶಕ ಮನೋಮೂರ್ತಿ, “ಚಿತ್ರದ ಕಥೆ ಚೆನ್ನಾಗಿದೆ. ಈ ಚಿತ್ರದಲ್ಲಿ ಸಂಗೀತ ನಿರ್ದೇಶಕನ ಜೊತೆ ನಿರ್ಮಾಪಕನ ಜವಾಬ್ದಾರಿ ಕೂಡ ವಹಿಸಿಕೊಂಡಿದ್ದೇನೆ. ಸುಮಾರು ಎಂಟು ತಿಂಗಳ ಸಮಯದಲ್ಲಿ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಪ್ರೇಕ್ಷಕರಿಗೂ ಚಿತ್ರ ಇಷ್ಟವಾಗುತ್ತದೆ ಎಂಬ ನಿರೀಕ್ಷೆ ಇದೆ’ ಎಂದರು.
“ಸವರ್ಣ ದೀರ್ಘ ಸಂಧಿ’ ಚಿತ್ರದಲ್ಲಿ ವೀರೇಂದ್ರ ಶೆಟ್ಟಿ ಅವರಿಗೆ ನವನಟಿ ಕೃಷ್ಣಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರವಿ ಭಟ್, ಪದ್ಮಜಾ ರಾವ್ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಸಮಾರಂಭದಲ್ಲಿ ಅತಿಥಿಗಳಾಗಿ ಹಾಜರಿದ್ದ ನಿರ್ದೇಶಕ ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ಅಜಿತ್ ಹನುಮಕ್ಕನವರ್ ಚಿತ್ರದ ಬಗ್ಗೆ ಮಾತನಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ಜಿ. ಎಸ್. ಕಾರ್ತಿಕ ಸುಧನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.