ಮಣ್ಣಿನ ಮೇಲೊಂದು ಮರವಾಗಿ


Team Udayavani, Aug 20, 2017, 6:00 AM IST

maravagi.jpg

ಗಾಢ ನಿದ್ರೆಯಲ್ಲಿದ್ದೆ. ಆಗ ಕೇಳಿಸಿತು ಈ ಕೂಗು. ನಾನು ಕಣ್ಣುಜ್ಜಿಕೊಂಡೆ. ಕಾಂಕ್ರೀಟ್‌ ಕಾಡಿನಲ್ಲಿ ಕೋಗಿಲೆ ಬಂದು ಕೂಗುವುದುಂಟೆ? ಒಳ್ಳೆಯ ಕನಸೇ ಬಿದ್ದಿದೆ ಎಂದು ಮಗ್ಗುಲಾದೆ. ಅರೆ! ಮತ್ತೆ ಕುಹು ಕುಹೂ… ಏನಾದರಾಗಲಿ ನೋಡೇಬಿಡುವ ಎಂದು ಮೆಲ್ಲಗೆ ಕಿಟಕಿಯ ಪರದೆ ಸರಿಸಿದರೆ ಆ ಹಸಿರು ಎಲೆಗಳ ಮಧ್ಯೆ ಕಾಣಿಸಿಯೇಬಿಟ್ಟಿತು ಆ ಕೋಗಿಲೆ. 

ಸಂಜೆ ಆಫೀಸಿನಿಂದ ಬಂದು “ಉಸ್ಸಪ್ಪಾ’ ಎಂದು ಮನೆ ಬಾಗಿಲು ಬಡಿಯಬೇಕು. ಯಾರೋ ನನ್ನನ್ನೇ ನೋಡುತ್ತಿ¨ªಾರೆ ಅನಿಸಿತು. ಯಾರಿರಬಹುದು? ಎಂದು ತಲೆ ಎತ್ತಿದರೆ ಅದೇ ಹಸಿರು ಎಲೆಗಳ ಮಧ್ಯೆ ಒಂದು ಪುಟ್ಟ ಗೂಬೆ. ಮನೆಯ ಗೇಟಿನ ಮೇಲೆ ಸರಿಯಾಗಿ ಹೆಂಗಳೆಯರ ಹಣೆಯ ಮೇಲೆ ಸರಿದಾಡುವ ಮುಂಗುರುಳಿನಂತೆ ಒಂದು ಕೊಂಬೆ ಆಡುತ್ತಿತ್ತು. ಅದೇ ಕೊಂಬೆಯಲ್ಲಿ ಈಗ ಗೂಬೆ ಮರಿ. ಅದು ನನ್ನನ್ನೂ ನಾನು ಅದನ್ನೂ ನೋಡುತ್ತ ಸಾಕಷ್ಟು ಹೊತ್ತಾಯಿತು. ಗೂಬೆ ಕೂಡಾ ಇಷ್ಟು ಮು¨ªಾಗಿರುತ್ತದಾ ಎಂದು ಅದನ್ನೇ ಕಣ್ಣು-ಬಾಯಿ ಬಿಟ್ಟುಕೊಂಡು ನೋಡಿದೆ. 

ಇನ್ನೊಮ್ಮೆ ಮಹಡಿಯ ಮೇಲೆ ಅಡ್ಡಾಡುತ್ತಿ¨ªೆ. ನೋಡಿದರೆ ಒಂದು ಉನ್ಮಾದದ ಕೂಗು. ಅದೂ ಆ ಮರದಿಂದಲೇ. ಮರದ ರೆಂಬೆ ಕೊಂಬೆಗಳ ಕಡೆ ಕಣ್ಣಾಡಿಸಿದರೆ… ಓಹ್‌ ! ಅಲ್ಲಿ ಅಳಿಲುಗಳ ಸುರತ-
ಹೆಂಚಿನಾ ಮನೆ ಕಾಣೋ, ಕಂಚಿನ ಕದ ಕಾಣೋ 
ನಿಂತಾಡೋವೆರಡು ಗಿಣಿ ಕಾಣೋ | ಅಣ್ಣಯ್ಯ 
ಅದೇ ಕಾಣೋ ನನ್ನ ತವರುಮನೆ|| 
ತವರನ್ನು ಬಿಟ್ಟುಕೊಡಲಾಗದೆ ಕಣ್ಣೀರು ತುಂಬಿಕೊಂಡು ಗಂಡನ ಲೋಕಕ್ಕೆ ಪ್ರವೇಶ ಪಡೆದ ಹೆಣ್ಣುಮಕ್ಕಳಿಗೆ ಇದು ಎದೆಯೊಳಗಿನ ಹಾಡು. ತಮ್ಮ ಮನೆ ಹಾದು ಹೋಗುವವರಿಗೆಲ್ಲ ತಮ್ಮ ತವರ ಗುರುತು, ಅಲ್ಲಿರುವ ಮನೆಯ ಗುರುತನ್ನು ಹೇಳಿ ಅಲ್ಲಿಗೆ ಹೋಗಿ ಬನ್ನಿ ಎನ್ನುತ್ತಿದ್ದರು. 

ಥೇಟ್‌, ಹೀಗೆಯೇ ಆಗಿ ಹೋಗಿತ್ತು. ಸರಿಸುಮಾರು 25 ವರ್ಷಗಳ ಹಿಂದೆ ಪುಟ್ಟ ಸಸಿಯೊಂದನ್ನು ಹಿಡಿದು ಬಂದಾಗ ಅವಳ ಕಣ್ಣಾಲಿಗಳು ತುಂಬಿದ್ದವು. ಸೆರಗಿನಿಂದ ಕಣ್ಣು ಒರೆಸಿಕೊಳ್ಳುತ್ತಲೇ ಆಕೆ ಮನೆಯ ಮುಂದೆ ಪುಟ್ಟ  ಪಾತಿ ತೋಡಿ ಅಲ್ಲಿ ಆ ಸಸಿ ನೆಟ್ಟಳು. ಆಮೇಲೆ ಗಂಡನ ಜೊತೆ ಹೊರಟುಹೋದಳು. ಅವಳು ನನ್ನ ತಂಗಿ.  

ಅದು ಕಣ್ಣುಬಿಟ್ಟಿತು. ಮೊದಲು ಎರಡು ಎಲೆ, ನಂತರ ಮತ್ತೆರಡು ಹೀಗೆ ಗುಣಾಕಾರ ಮಾಡುತ್ತಾ ಮಾಡುತ್ತಲೇ, ನಾವು ನೋಡನೋಡುತ್ತಿದ್ದಂತೆಯೇ ಅದು ಹೆಮ್ಮರವಾಗಿ ಬೆಳೆದು ಹೋಯ್ತು. ಬಹುಶ‌ಃ ಈಗ ಅವಳು ಅಲ್ಲಿ ತನ್ನ ಮನೆ ಹಾದು ಹೋಗುವವರಿಗೆ ಹಾಗೇ ಹೇಳುತ್ತಿರಬಹುದು- ಒಂದು ಮಹಡಿಯ ಮನೆ, ನೆಲಕೆ ಇನ್ನೂ ಕೆಂಪು ಬಣ್ಣ, ಎಲ್ಲರಂತಹದ್ದೇ ಬಾಗಿಲು, ಮನೆಯ ಮುಂದೆ ಮಾತ್ರ ದೊಡ್ಡ ಮರ…

ಅಷ್ಟು ಸಾಕು ಗುರುತಿಗೆ. 
ಲಂಬಾಣಿಗರ ಹಾಡುಗಳನ್ನೊಮ್ಮೆ ನೀವು ಕೇಳಬೇಕು. ಅಲ್ಲಿ ಮರ-ಗಿಡ-ಕಲ್ಲು-ಮುಳ್ಳು ಎಲ್ಲವೂ ಹಾಡಾಗಿ ಹೊಮ್ಮಿಬಿಡುತ್ತದೆ. ಲಂಬಾಣಿಯರದ್ದು ನಿರಂತರ ಚಲಿಸುವುದೇ ಬದುಕು. ತವರಿನಿಂದ ಹೊರಟ ಹೆಣ್ಣು ಮತ್ತೆ ತನ್ನ ತವರಿನವರನ್ನು ಬದುಕಿನಲ್ಲಿ ಕಾಣುತ್ತಾಳೆ ಎನ್ನುವ ಖಾತರಿಯೇ ಇಲ್ಲ. ಹಾಗಾಗಿ, ಆಕೆ ಮದುವೆಯಾಗಿ ಗಂಡನ ಜೊತೆ ಹೆಜ್ಜೆ ಹೊರಗಿಟ್ಟಾಗ ಅಳುವಿನ ಅಲೆಯೇ ಎದ್ದೇಳುತ್ತದೆ. ಅದು ಅಡಗುವ ಅಲೆಯಲ್ಲ, ಉಬ್ಬರಿಸಿ, ಉಬ್ಬರಿಸಿ ಭೋರ್ಗರೆವ ಅಳು. ಆಗಲೇ ಆಕೆಗೆ ತಾನು ಹಾಲುಂಡ ತವರು, ಅಲ್ಲಿ ಹಬ್ಬಿದ ಬಳ್ಳಿ, ತಾನು ಎಡವಿದ ಕಲ್ಲೂ, ಕಾಲಿಗೆ ಹೊಕ್ಕ ಮುಳ್ಳು ಎಲ್ಲವೂ ತವರ ನೆನಪಾಗಿ ನಿಲ್ಲುತ್ತದೆ. ಆಗಲೇ ಆಕೆ ಕಲ್ಲನ್ನೂ, ಮುಳ್ಳನ್ನೂ, ಗಿಳಿಯನ್ನೂ, ಎಲೆಯನ್ನೂ ಹೀಗೆ ಕಂಡ ಕಂಡ¨ªೆಲ್ಲಕ್ಕೂ ಹೆಸರಿಟ್ಟು ಅಳುತ್ತಾಳೆ. ಅವಳ ಹೃದಯ ಹಾರೈಸುತ್ತದೆ “ಹಬ್ಟಾಲಿ ಅವರ ರಸಬಳ್ಳಿ’
ಆದರೆ, ನಮಗೆ ಮಾತ್ರ ಅವಳು ಹೊರಟುಹೋದಳು ಎಂದು ಅನಿಸಲೇ ಇಲ್ಲ. ಯಾಕೆಂದರೆ, ಅವಳು ನಮ್ಮ ಮನೆಯ ಮುಂದೆ ಸಸಿಯಾಗಿ ಇದ್ದೇ ಇದ್ದಳು. ಯಾವಾಗ ಅದು ಅವಳಾಗಿ ಹೋಯಿತೋ ಮನೆಯವರೆಲ್ಲರೂ ಅದರ ಆರೋಗ್ಯ ವಿಚಾರಿಸಿಕೊಂಡರು. ಅಕ್ಕ ಪಕ್ಕದ ಮನೆಯವರೂ ಬಂದು ಮಾತಾಡಿಸುತ್ತಿ¨ªಾರೇನೋ ಎನ್ನುವಂತೆ ಅದು ಎಲೆ ಅರಳಿಸುವುದನ್ನೂ ನೋಡುತ್ತ ನಿಂತರು. ಊರಲ್ಲಿಲ್ಲದಾಗ ಅವರೇ ನೀರೆರೆದರು. ರಸ್ತೆಯಲ್ಲಿ ಹಸು ಓಡಾಡುತ್ತದೆ ಎಂದು ಖುದ್ದು ಕಾರ್ಪೊರೇಟರ್‌ ಅಮ್ಮನೇ ಬಂದು ಅದಕ್ಕೆ ಬಿದಿರ ರಕ್ಷಣೆ ಕೊಡಿಸಿದರು.

ಗಿಡವಾಗಿರುವಾಗಲೇ ಅದನ್ನು ಬಗ್ಗಲು ಕುಗ್ಗಲು ಬಿಡಲಿಲ್ಲ. ಹಾಗಾಗಿ, ಅದು ಮರವೇ ಆಯಿತು. ಅದು ಮನೆಯವರಿಗೂ ಬೀದಿಯವರಿಗೂ ಎಂದೂ ಮರ ಅನ್ನಿಸಲೇ ಇಲ್ಲ. ಅದು ಸಾûಾತ್‌ ಅವಳೇ ಎನ್ನುವಂತೆ ಅದರ ಜೊತೆ ಮಾತಿಗೆ ನಿಂತರು. ಪಕ್ಕಾ ಜಾನಪದ ಕಥೆಗಳ “ಚೆಲುವಿ’ಯಂತೆ. ಅವಳೇ ಮರವಾಗಿ ಹೋಗುವ ಮರವೇ ಜೀವ ತಳೆದು ಅವಳಾಗುವ ಅಚ್ಚರಿಯಂತೆ.

ನಾನು ಕ್ಯೂಬಾಕ್ಕೆ ಹೋದಾಗ ಒಂದು ಪುಟ್ಟ ಅಚ್ಚರಿ. ಅಲ್ಲಿಯ ಮನೆ ತಲುಪಿಕೊಂಡವನೇ ಸೂಟ್‌ಕೇಸ್‌ ತೆರೆದೆ. ಅರೆ! ಅಲ್ಲೊಂದು ಪುಟ್ಟ ಗೊಂಬೆ. ಒಂದು ಪೆನ್ಸಿಲ್, ಒಂದು ರಬ್ಬರ್‌. ಇದೇನಪ್ಪಾ ಎಂದು ನೋಡಿದರೆ ಆಗಿನ್ನೂ ಅಕ್ಷರ ಲೋಕಕ್ಕೆ ಕಾಲಿಟ್ಟಿದ್ದ ಮಗಳು ತನ್ನ ಪೆನ್ಸಿಲ್, ರಬ್ಬರ್‌ ಅನ್ನೇ ನನ್ನ ಸೂಟ್‌ಕೇಸ್‌ ಒಳಗೆ ಸೇರಿಸಿದ್ದಳು- ತನ್ನ ನೆನಪಿಗಾಗಿ. ಆ ಪುಟ್ಟ ಗೊಂಬೆ, ಆ ರಬ್ಬರ್‌, ಆ ಪೆನ್ಸಿಲ್‌ ನಾನು ಹೋದ ದಿನದಿಂದ ಹಿಂದಿರುಗುವವರೆಗೂ ನನ್ನ ಹಾಸಿಗೆಯ ಮೇಲೇ ಇತ್ತು. ನಾನು ಅಷ್ಟು ದಿನ ಇದ್ದರೂ ಒಬ್ಬನೇ ಅನಿಸಲೇ ಇಲ್ಲ. ನಾನು ಅದರೊಂದಿಗೆ ಮಾತನಾಡುತ್ತಲೇ ಇ¨ªೆ. 
ಆ ನಂತರ ನಮ್ಮ ಬದುಕಿನಲ್ಲಿ ನೂರೆಂಟು ಘಟನೆಗಳು ನಡೆದು ಹೋಗಿವೆ. ನಾನು ಇಲ್ಲಿ , ಅವಳು ಮುಂಬೈನಲ್ಲಿ. ಆದರೆ ಈಗಲೂ ನಾನು ಯಾವುದೇ ಊರಿಗೆ ಬಟ್ಟೆ ಪ್ಯಾಕ್‌ ಮಾಡಿದೆ ಎಂದರೆ ಅದರೊಳಗೆ ಒಂದು ಪುಟ್ಟ ಗೊಂಬೆ, ಇÇÉಾ ಮಗಳು ಹಸ್ತಾಕ್ಷರ ಹಾಕಿದ ಪುಸ್ತಕ, ಇಲ್ಲ ಅವಳು ಗೀಚಿದ ರೇಖೆಗಳು ಜೊತೆಯಾಗುತ್ತವೆ. ಅದು ನನ್ನೊಡನೆ ಮಾತನಾಡುತ್ತಲೇ ಇರುತ್ತದೆ.

ಈಗ ಈ ಮರ… “ಎದೆ ಎದೆಗಳ ನಡುವೆ ಇರುವ ಸೇತುವೆಗಳು ಮುರಿದಿವೆ’ ಎನ್ನುವುದನ್ನು ಸುಳ್ಳು ಮಾಡಲೋ ಎಂಬಂತೆ ಈ ಮರ ನಮ್ಮ ಮನೆ ಅಂಗಳದಲ್ಲಿ ಅರಳಿದರೂ ಇಡೀ ರಸ್ತೆಯನ್ನೇ ಆವರಿಸಿ ಅಕ್ಕಪಕ್ಕದ ಎದುರು ಹೀಗೆ ಎÇÉಾ ಮನೆಗೂ ಮುತ್ತಿಡುತ್ತದೆ. ಇಡೀ ರಸ್ತೆಯಲ್ಲಿ ಒಂದು ದೊಡ್ಡ ಛತ್ರಿ ಹರಡಿಕೊಂಡಂತೆ. ಹಸಿರಿನ ಚಪ್ಪರ. 

ಕಾಂಕ್ರೀಟ್‌ ಕಟ್ಟಡಗಳ ಮಧ್ಯೆ ಹುಟ್ಟಿ, ಅಲ್ಲಿಯೇ ಬೆಳೆದು, ಕಟ್ಟಡ ಅಲ್ಲದೆ ಬೇರೆ ಗೊತ್ತಿಲ್ಲದ ನನಗೆ ಬೆಂಗಳೂರು ಈಗ ಆಕಾಶ ನೋಡುವ ಅವಕಾಶವನ್ನೂ ಕಿತ್ತುಕೊಳ್ಳುತ್ತಿದೆ. 45- 50 ಹೀಗೆ ಎತ್ತರೆತ್ತರದ ಬಹುಮಹಡಿಗಳೇ ನಿಂತು ಅದರ ಸಂದಿಯಿಂದ ಒಂದಿಷ್ಟು ಆಗಸ ಹುಡುಕಿಕೊಳ್ಳುವ ಕಾಲ ಬಂದಿದೆ. ಇನ್ನು ರಾತ್ರಿ ಚುಕ್ಕಿಗಳನ್ನು ಆಯ್ದುಕೊಳ್ಳುವುದೋ… ಸಾಧ್ಯವಿಲ್ಲದ ಮಾತು. ಇಂಥ ಸಮಯದಲ್ಲಿ ನನಗೆ ಋತುವಿನ ಪುಳಕವನ್ನು ಕೊಟ್ಟದ್ದು ಈ ಮರ. ವಸಂತ, ಗ್ರೀಷ್ಮ, ಶಿಶಿರ ಎಲ್ಲವನ್ನೂ ನಾನು ಖಚಿತವಾಗಿ ಹೇಳಬÇÉೆ. ನೆನಪಿಡಿ ಆ ಋತುಗಳು ಕೊಡುವ ಪುಳಕದ ಸಮೇತ. 

ವಸಂತ ಪುಟ್ಟ ಮೊಗ್ಗಾಗಿ, ಹಸಿರು ಎಲೆಯಾಗಿ, ಬಿಳಿಯ ಹೂವಾಗಿ, ಕಡುಹಸಿರು ಕಾಯಾಗಿ ಹರಡಿನಿಲ್ಲುವ ಸಡಗರಕ್ಕೆ ಪದಗಳ ಹೊಂದಿಸುವುದೇ ಕಷ್ಟ. ವಸಂತವನ್ನು ಆ ಮರ ಸಂಭ್ರಮಿಸುವ ಪರಿ ನೋಡಬೇಕು. “ಘಲ್ಲು ಘÇÉೆನುತಾ ಗೆಜ್ಜೆ ಘಲ್ಲು ತಾದಿನತ…’ ಎನ್ನುವ ಸಂಭ್ರಮ ಗೊತ್ತಾದದ್ದೇ ಇಲ್ಲಿ. ವಸಂತ ಬರುತ್ತಿದೆ ಎನ್ನುವುದನ್ನು ಒಂದು ಮಣ ಕಂಬಳಿ ಹುಳುಗಳೂ, ಕಣ್ಣಿಗೆ ಕಾಣದಷ್ಟು ಚಿಕ್ಕ ಸೊಳ್ಳೆಗಳೂ, ಹೊಂಗೆಯ ಕಂಪೂ ಸಾರಿಬಿಡುತ್ತದೆ. ಆ ದಿನಗಳಲ್ಲಿ ಟಾರಿನ ರಸ್ತೆ ಮುಚ್ಚಿಹೋಗುವಂತೆ, ಇಲ್ಲ ಬಿಳಿ ಹಚ್ಚಡ ಹೊದಿಸಿ ಹೋಗಿ¨ªಾರೆ ಎನ್ನುವಂತೆ, ಅಥವಾ “ಮಡಿಕೇರಿ ಮೇಲ್‌ ಮಂಜು’ ಎನ್ನುವಂತೆ ಹೂಗಳು ಒಂದಿಷ್ಟಾದರೂ ನೆಲ ಕಾಣುವ ಅವಕಾಶ ಕೊಟ್ಟರೆ ಹೇಳಿ. ಇದನ್ನು ನೋಡಲೆಂದೇ ಆ ರಸ್ತೆ ಈ ರಸ್ತೆಯಿಂದೆಲ್ಲ ಜನ ಬರುತ್ತಾರೆ. ಕಸ ಗುಡಿಸಲು ಬರುವ ಕೆಲಸಗಾರಳಿಗೂ ಅದನ್ನು ಗುಡಿಸಿ ಹಾಕಲು ಮನಸ್ಸು ಒಪ್ಪುವುದಿಲ್ಲ. ಹಾಗಾಗಿ, ಅವಳೂ ತನ್ನ ಗುತ್ತಿಗೆಯ ಇತರೆ ಎÇÉಾ ರಸ್ತೆ ಮುಗಿಸಿ ಮಧ್ಯಾಹ್ನ ಮಾಡಿಯೇ ಬರುತ್ತಾಳೆ. 

ಮಾಗಿ ಮಾಗಿಯ ಮಧ್ಯೆ ಮೌನವೇ ಸರದಾರ ಎನ್ನುವಂತೆ ಅಂತಹ ಹಾಡುಗಬ್ಬದ ಈ ಮರ ಮಾಗಿ ಬರುತ್ತಿದ್ದಂತೆ ತನ್ನ ಒಂದು ಎಲೆಯನ್ನೂ ಉಳಿಸಿಕೊಳ್ಳದೆ ಬೋಳಾಗಿ ಬಿಡುತ್ತದೆ. 

ಅವಳು ಇಲ್ಲಿ ಮರವಾಗಿ¨ªಾಳೆ. ತವರು ಬಿಟ್ಟು ಹೋದ ತಂಗಿ ಇಲ್ಲಿ ಪ್ರತೀ ಋತುವಿಗೂ ತನ್ನ ಗುರುತು ಕಾಣುವಂತೆ ಮಾಡಿ ಹೋಗಿ¨ªಾಳೆ. ಒಂದು ಪುಟ್ಟ ಸಸಿ ಕೋಗಿಲೆಗೂ, ಅಳಿಲಿಗೂ, ಗೂಬೆ ಮರಕುಟಿಗಕ್ಕೂ ದಾರಿ ಮಾಡಿದೆ. ಬೆಳಗ್ಗೆ ಎಂಪಿ-3 ಹಾಡುಗಳಿಗೆ ಮೊರೆ ಹೋಗುವುದು ನಿಲ್ಲಿಸಿದ್ದೇನೆ. ಏಕೆಂದರೆ ಹಕ್ಕಿಯ ಕುಕಿಲು ಅನಾಯಾಸವಾಗಿ ಸಿಕ್ಕುತ್ತಿದೆ. ಬೇಸಿಗೆ ಬಂದರೆ ಸಾಕು ದಾರಿಯಲ್ಲಿ ಹಾದು ಹೋಗುವ ರಂಗೋಲಿ ಹುಡುಗಿ, ನಿಂಬೆ ಹಣ್ಣು ಮಾರುವ ಆ ಹೆಂಗಸು, ಕತ್ತರಿ ಹರಿತ ಮಾಡಿಕೊಡುವ ಕಲಾಯಿ ಹುಡುಗ, ಕಡಲೆಪುರಿ ಹೊತ್ತು ತರುವ ಬೊಚ್ಚುಬಾಯಿಯ ಅಜ್ಜ, ಮನೆ ಮನೆ ಬಾಗಿಲು ತಟ್ಟುವ ಸೇಲ್ಸ… ಗರ್ಲ್ಗಳು, ವೋಟರ್‌ ಐಡಿ, ಜನಗಣತಿ, ಶಾಲೆಗೆ ಸೇರಿಸಿ- ಹೀಗೆ ಗಣತಿಗೆ ಬರುವ ಮೇಷ್ಟ್ರುಗಳ ದಂಡು, ನನಗೆ ವೋಟ್‌ ಕೊಡಿ ಎಂದು ಮೈಗಿಯುವ ಅಭ್ಯರ್ಥಿಗಳು, ದಿನವಿಡೀ ಸುತ್ತಿ ಬಳಲಿದ ಉರ್ಬೆ, ಓಲಾ ಡ್ರೈವರ್‌ಗಳು ಒಂದು ಪುಟ್ಟ ನಿ¨ªೆ ತೆಗೆಯಲು, ಆ ಕೊನೆಯ  ಮನೆಯಲ್ಲಿ ಗಾರೆ ಕೆಲಸ ಮಾಡುತ್ತಿರುವವರ ಬುತ್ತಿ ಗಂಟು ಸಹ ಇಲ್ಲಿಯೇ ಬಿಚ್ಚಿಕೊಳ್ಳುತ್ತದೆ. 

ಹೆಣ್ಣಾಗಿ ಹುಟ್ಟೋಕಿಂತ ಮಣ್ಣಾಗಿ ಹುಟ್ಟಿದರೆ 
ಮಣ್ಣಿನ ಮೇಲೊಂದು ಮರವಾಗಿ / ಹುಟ್ಟಿದರೆ 
ಪುಣ್ಯವಂತರಿಗೆ ನೆರಳಾದೆ
ನಮಗೋ ಇಲ್ಲಿ ಆಕೆ ಹೆಣ್ಣಾಗಿ ಹುಟ್ಟಿದ್ದರಿಂದಲೇ ಈ ಮಣ್ಣಲ್ಲಿ ಸಸಿ ನೆಡುವ ಹುಕಿ ಬಂತು ಅನಿಸುತ್ತದೆ. ಆ ಮರವೂ ಸಹ ಎಕ್ಕುಂಡಿ ಹೇಳುವಂತೆ, ದೂರದಲಿ ಇದ್ದವರ ಹತ್ತಿರಕೆ ತರಬೇಕು, ಎರಡು ದಂಡೆಗೂ ಉಂಟಲ್ಲ ಎರಡು ತೋಳು ಎನ್ನುವಂತೆ ಎಲ್ಲರನ್ನೂ ಹುಡುಕಿ ಹುಡುಕಿ ತನ್ನೆಡೆಗೆ ತರುತ್ತಿದೆ. ಮರವೇ ಈಗ ಸೇತುವೆಯಾಗಿ ನಮ್ಮನ್ನೂ ಅವಳನ್ನೂ ಬಂಧಿಸಿದೆ. 

ಆಗೋ ನೋಡಿ, ಆಗಲೇ ಆ ಮರದ ಕೆಳಗೆ ಒಂದು ಜೋಡಿ ನಿಂತಿದೆ. ಕಣ್ಣಲ್ಲಿ ಕಾಮನೆ. ಪಿಸು ಪಿಸು ಮಾತು ನಡೆಸುತ್ತಿದೆ. 
ಹೌದಲ್ಲಾ ಮರದ ಮೇಲಲ್ಲ, ಮರದಡಿಯೂ ವಸಂತ !  

– ಜಿ. ಎನ್‌. ಮೋಹನ್‌

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

256

ಶಾಲ್ಮಲಾ ನಮ್ಮ ಶಾಲ್ಮಲಾ!

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.