ಸಿನೆಮಾ ಸಮಾಚಾರ: ಬಹುಭಾಷಾ ಪರಿಣತ!

Team Udayavani, Aug 13, 2017, 6:05 AM IST

12-SUPLY-1.jpg

ಎರಡು ವರ್ಷಗಳಾಗಿದ್ದವು ಪ್ರಣೀತಾ ಅಭಿನಯದ ಕನ್ನಡ ಚಿತ್ರವೊಂದು ಬಿಡುಗಡೆಯಾಗಿ. ಅಜೇಯ್‌ ರಾವ್‌ ಅಭಿನಯದ ಸೆಕೆಂಡ್‌ ಹ್ಯಾಂಡ್‌ ಲವರ್‌ ಚಿತ್ರದ ಇಬ್ಬರು ನಾಯಕಿಯರ ಪೈಕಿ ಒಬ್ಬರಾಗಿ ಕಾಣಿಸಿಕೊಂಡಿದ್ದೇ ಕೊಂಡಿದ್ದು, ಆ ನಂತರ ಅವರು ಯಾವೊಂದು ಕನ್ನಡ ಚಿತ್ರದಲ್ಲೂ ನಟಿಸಿರಲಿಲ್ಲ. ಈಗ ಎರಡು ವರ್ಷಗಳ ನಂತರ ಪ್ರಣೀತಾ ಅಭಿನಯದ ಮಾಸ್‌ ಲೀಡರ್‌ ಚಿತ್ರ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅವರು ಶಿವರಾಜಕುಮಾರ್‌ ಅವರಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಸಮಯದಲ್ಲಿ ಪ್ರಣೀತಾ ಯಾಕೆ ಯಾವೊಂದು ಚಿತ್ರದಲ್ಲೂ ನಟಿಸಲಿಲ್ಲ ಎಂಬ ಪ್ರಶ್ನೆಯೊಂದು ಸ್ವಾಭಾವಿಕವಾಗಿ ಬರಬಹುದು. “ನಾನ್ಯಾವತ್ತೂ ದೊಡ್ಡ ಚಿತ್ರ ಅಥವಾ ಸಣ್ಣ ಚಿತ್ರ ಎಂದು ನೋಡಿಲ್ಲ, ಕಥೆ ಮತ್ತು ತಂಡ ಇಷ್ಟವಾದರೆ ಮಾತ್ರ ಸಿನೆಮಾ ಒಪ್ಪುತ್ತೇನೆ’ ಎಂದು ಪ್ರಣೀತಾ ಬಹಳ ಹಿಂದೆ ಹೇಳಿಕೊಂಡಿದ್ದರು. ಈಗಲೂ ಅದನ್ನೇ ರೂಢಿಸಿಕೊಂಡು ಬರುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿಲ್ಲ ಎಂದು ಹೇಳಬಹುದೇನೋ.

ಅದಕ್ಕೆ ಸರಿಯಾಗಿ, ಕನ್ನಡದಲ್ಲಿ ಯಾವೊಂದು ಚಿತ್ರದಲ್ಲಿ ಪ್ರಣೀತಾ ನಟಿಸದಿದ್ದರೂ, ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಪ್ರಣೀತಾ ಬಿಝಿಯಾಗಿದ್ದರು. ಈಗೊಂದೆರೆಡು ವರ್ಷಗಳನ್ನೇ ನೋಡಿ, ತಮಿಳಿನಲ್ಲಿ ಜೆಮಿನಿ ಗಣೇಶನುಂ ಸುರುಳಿ ರಾಜನುಂ, ಎನಕ್ಕು ವಾಯ್ತಾ ಅಡಿಮೈಗಳ್‌, ತೆಲುಗಿನಲ್ಲಿ ಬ್ರಹ್ಮೋತ್ಸವಂ, ಡೈನಮೇಟ್‌, ಮಾಸ್‌ ಮುಂತಾದ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

“ತಮಿಳು, ತೆಲುಗಿನಲ್ಲಿ ಅದೆಷ್ಟೇ ಚಿತ್ರಗಳಲ್ಲಿ ನಟಿಸಿದರೂ, ಕನ್ನಡ ಚಿತ್ರರಂಗವನ್ನು ಬಿಟ್ಟು ಹೋಗುವುದಿಲ್ಲ’ ಎನ್ನುತ್ತಾರೆ ಪ್ರಣೀತಾ. ಈ ಎರಡು ವರ್ಷಗಳಲ್ಲಿ ಅವರು ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸದಿರುವ ಕುರಿತು, ಹಲವು ಜನ ಅವರನ್ನು ಪ್ರಶ್ನೆ ಮಾಡಿದ್ದಾರಂತೆ. ಅದಕ್ಕೆ ಪ್ರಣೀತಾ ತಲೆಕೆಡಿಸಿಕೊಳ್ಳುವುದಿಲ್ಲ. ಏಕೆಂದರೆ, ವಾಪಸು ಬರುವುದಕ್ಕೆ ತಾನೆಲ್ಲೂ ಹೋಗಿಯೇ ಇರಲಿಲ್ಲ ಎಂಬ ಅಭಿಪ್ರಾಯ ಅವರದು. ಯಾವುದೇ ಭಾಷೆಯಲ್ಲಿ ನಟಿಸಿದರೂ, ತನ್ನ ಮೊದಲ ಆದ್ಯತೆ ಕನ್ನಡ ಮತ್ತು ಯಾವುದೇ ಭಾಷೆಯಲ್ಲಿ ನಟಿಸಿದರೂ, ವಾಪಸು ಬರುವುದು ಬೆಂಗಳೂರಿಗೆ ಎಂಬುದು ಪ್ರಣೀತಾ ಉತ್ತರ.

ಹಾಗಾದರೆ, ಪ್ರಣೀತಾ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸುತ್ತಾರಾ? ಈ ಪ್ರಶ್ನೆಗೆ ಈಗಲೇ ಉತ್ತರ ಹೇಳುವುದು ಕಷ್ಟ. ಕಾರಣ, ಅದೇ ಕಥೆ ಮತ್ತು ತಂಡ. ಅವೆರಡೂ ಇಷ್ಟವಾದರೆ ಪ್ರಣೀತಾ ಇನ್ನಷ್ಟು ಚಿತ್ರಗಳಲ್ಲಿ ನಟಿಸಬಹುದು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

11

Kannada Rajyotsava: ನಿಂತ ನೆಲವೇ ಕರ್ನಾಟಕ!

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.