ಡಿಂಪಲ್‌ ಕ್ವೀನ್‌ ರಚಿತಾ


Team Udayavani, Feb 2, 2020, 5:04 AM IST

kat-26

ನಟ ಕಂ ರಾಜಕಾರಣಿ ನಿಖೀಲ್‌ ಕುಮಾರಸ್ವಾಮಿ ಜೊತೆ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ ನಂತರ ನಿಖೀಲ್‌ ಕುಮಾರ್‌ ಮತ್ತು ರಚಿತಾ ರಾಮ್‌ ನಡುವಿನ ಸ್ನೇಹ ಹಲವರ ಅನುಮಾನಕ್ಕೆ ಕಾರಣವಾಗಿತ್ತು.

ಸಾಮಾನ್ಯವಾಗಿ ಸೆಲೆಬ್ರಿಟಿಗಳ ಮದುವೆ ಮೊದಲಾದ ಖಾಸಗಿ ವಿಚಾರಗಳ ಬಗ್ಗೆ ಜನ ಸಾಮಾನ್ಯರ ಮಧ್ಯೆ ಒಂದಷ್ಟು ಚರ್ಚೆಗಳು ಆಗುತ್ತಲೇ ಇರುತ್ತದೆ. ಅದರಲ್ಲೂ ಸಿನಿಮಾ ತಾರೆಯರು ಅಂದ್ರೆ ಕೇಳಬೇಕಾ? ಇನ್ನೂ ಕೊಂಚ ಹೆಚ್ಚಾಗಿಯೇ ಸಿನಿಮಾ ಮಂದಿಯ ಬಗ್ಗೆ ಅಂತೆ-ಕಂತೆ ಮಾತುಗಳು ಹರಿದಾಡುತ್ತಿರುತ್ತವೆ. ಕೆಲವೊಮ್ಮೆ ಈ ಮಾತುಗಳು ತಾರೆಯರಿಗೆ ತೀರಾ ರಿಕಿರಿಯನ್ನುಂಟುಮಾಡುತ್ತವೆ. ಈಗ ಸ್ಯಾಂಡಲ್‌ವುಟ್‌ ನಟಿ ರಚಿತಾ ರಾಮ್‌ಗೂ ಹೋದಲ್ಲಿ, ಬಂದಲ್ಲಿ ಇಂಥದ್ದೇ ಅನುಭವವಾಗುತ್ತಿದೆಯಂತೆ.

ಹೌದು, ನಟ ಕಂ ರಾಜಕಾರಣಿ ನಿಖೀಲ್‌ ಕುಮಾರಸ್ವಾಮಿ ಜೊತೆ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ ನಂತರ ನಿಖೀಲ್‌ ಕುಮಾರ್‌ ಮತ್ತು ರಚಿತಾ ರಾಮ್‌ ನಡುವಿನ ಸ್ನೇಹ ಹಲವರ ಅನುಮಾನಕ್ಕೆ ಕಾರಣವಾಗಿತ್ತು. ನಿಖೀಲ್‌ ಕುಮಾರ್‌ ಮತ್ತು ರಚಿತಾರಾಮ್‌ ಹೊರಗಡೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದದ್ದು, ಇವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎಂಬ ಗುಸುಗುಸು ಚಿತ್ರರಂಗದಲ್ಲಿ ಮತ್ತು ಸಿನಿಪ್ರಿಯರಲ್ಲಿ ಹರಿದಾಡುವಂತೆ ಮಾಡಿತ್ತು. ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಇದರ ಬಗ್ಗೆ ಕಾಮೆಂಟ್ಸ್‌ ಮಾಡಲು ಶುರುಮಾಡಿದ್ದರು. ಅಲ್ಲದೆ ಎಲ್ಲೇ ಹೋದ್ರೂ, ಜನರು ಮತ್ತು ಮಾಧ್ಯಮಗಳು ಕೂಡ ರಚಿತಾ ಹತ್ತಿರ ಮದುವೆ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದರು.

ಹೀಗೆ ತಮ್ಮ ಮದುವೆ ಬಗ್ಗೆ ಹೋದಲ್ಲಿ, ಬಂದಲ್ಲಿ ಕೇಳಿಬರುತ್ತಿದ್ದ ಪ್ರಶ್ನೆಗಳ ಬಗ್ಗೆ ಇದೀಗ ರಚಿತಾ ರಾಮ್‌ ಒಂದಷ್ಟು ಸ್ಪಷ್ಟನೆ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದ ತಮ್ಮ ಮದುವೆ ಊಹಾಪೋಹಗಳಿಗೆ ರಚಿತಾ ರಾಮ್‌ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

“”ಈ ನಡುವೆ ಫೇಸ್‌ಬುಕ್‌, ಇನ್ಸ್ಟಾ ಗ್ರಾಮ್, ಟ್ವೀಟ್ಟರ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಸ್ಪಷ್ಟನೆ ಕೊಡಲು ಬಯಸುತ್ತೇನೆ. ನನ್ನ ಸಿನಿಮಾಗಳ ಕುರಿತಾದ ವಿಷಯಗಳಾಗಲಿ ಅಥವಾ ವೈಯಕ್ತಿಕ ವಿಷಯಗಳಾಗಲಿ ನನ್ನ ಅಧಿಕೃತ ಖಾತೆಯಲ್ಲಿ ಪೋಸ್ಟ್‌ ಮಾಡಿದರೆ ಮಾತ್ರ ಅದು ಸತ್ಯವೆಂದು ಪರಿಗಣಿಸಿ. ಮನರಂಜನೆಗಾಗಿ ಸುಳ್ಳು ವದಂತಿಗಳಗಳನ್ನು ಸೃಷ್ಟಿ ಮಾಡಿದರೆ ಖುಷಿ ಉಂಟಾಗಬಹುದು. ಆದರೆ, ಅದರಿಂದ ನನಗೆ ಹಾಗೂ ವದಂತಿಗಳಲ್ಲಿ ಸಿಲುಕಿದ ಸಂಬಂಧಪಟ್ಟ ವ್ಯಕ್ತಿಗಳಿಗೆ ಬೇಸರ ಉಂಟಾಗುತ್ತದೆ ಎಂಬ ವಿಷಯ ಅರ್ಥ ಮಾಡಿಕೊಂಡರೆ ಉತ್ತಮ” ಎಂದು ಅಭಿಮಾನಿಗಳಿಗೆ ಕೋರಿಕೊಂಡಿದ್ದಾರೆ.

ಅಲ್ಲದೆ ತಮ್ಮ ಮದುವೆಯ ಬಗ್ಗೆ ಪ್ರಸ್ತಾಪಿಸಿರುವ ರಚಿತಾ ರಾಮ್‌, “ಅತಿ ಮುಖ್ಯವಾದ ಸಂಗತಿ ಏನೆಂದರೆ, ಸದ್ಯಕ್ಕೆ ನನ್ನ ಮದುವೆ ನಿಶ್ಚಯವಾಗಿಲ್ಲ. ನಾನು ಮದುವೆಯಾಗುವ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ತಿಳಿಸಿ ಎಲ್ಲರ ಸಮ್ಮುಖದಲ್ಲಿ ಗುರು ಹಿರಿಯರ ಆಶೀರ್ವಾದದೊಂದಿಗೆ ಆಗುತ್ತೇನೆ. ಸುಳ್ಳು ವದಂತಿಗಳನ್ನು ನಂಬಿ ವೈಯಕ್ತಿಕ ವಿಚಾರಗಳ ಬಗ್ಗೆ ನಗೆಪಾಟಲು ಮಾಡಬೇಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ’ ಎಂದು ಸೋಶಿಯಲ್‌ ಮೀಡಿಯಾಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಮತ್ತೂಂದೆಡೆ ನಿಖೀಲ್‌ ಕುಮಾರ್‌ ಅವರ ನಿಶ್ಚಿತಾರ್ಥದ ಸುದ್ದಿಯೂ ಹೊರಬಿದ್ದಿದ್ದು, ಕಳೆದ ಕೆಲ ತಿಂಗಳಿನಿಂದ ರಚಿತಾ ಬಗ್ಗೆ ಹರಿದಾಡುತ್ತಿದ್ದ ಗಾಸಿಪ್‌ಗ್ಳಿಗೆ ಇನ್ನಾದರೂ ತೆರೆ ಬೀಳುತ್ತದೆಯಾ ನೋಡಬೇಕು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.