ಹೊಸ ಜೋಶ್‌ನಲ್ಲಿ ಮಿಲನ ಸಿನಿಮಾಯಾನ

Team Udayavani, Feb 9, 2020, 1:04 PM IST

edition-tdy-5

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಬೃಂದಾವನ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಸಿನಿಪ್ರಿಯರಿಗೆ ಪರಿಚಯವಾದ ಚೆಲುವೆ ಮಿಲನ ನಾಗರಾಜ್‌. ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು ಏಳು ವರ್ಷಗಳ ಯಶಸ್ವಿ ಸಿನಿ ಜರ್ನಿಯನ್ನು ಪೂರೈಸಿರುವ ಮಿಲನ, ಕನ್ನಡದ ಜೊತೆ ತಮಿಳು ಹಾಗೂ ಮಲಯಾಳಂ ಚಿತ್ರರಂಗವನ್ನೂ ಸ್ಪರ್ಶಿಸಿ ಬಂದಿದ್ದಾರೆ.

ಏಳು ವರ್ಷಗಳಲ್ಲಿ ಹತ್ತಕ್ಕೂ ಹೆಚ್ಚಿನ ಚಿತ್ರಗಳಲ್ಲಿ , ವಿವಿಧ ರೀತಿಯ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವಾಕೆ ಮಿಲನ. ಈ ವರ್ಷ ಒಂದರ ಹಿಂದೊಂದು ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರುವ ಯೋಜನೆಯಲ್ಲಿದ್ದಾರೆ. ಇದೇ ವರ್ಷದ ಆರಂಭದಲ್ಲಿ ಮಿಲನ ಅಭಿನಯಿಸಿದ್ದ ಲವ್‌ ಮಾಕ್ಟೇಲ್‌ ಚಿತ್ರ ಬಿಡುಗಡೆಯಾಗಿದೆ. ಇನ್ನೊಂದು ವಿಶೇಷವೆಂದರೆ, ಮದರಂಗಿ ಕೃಷ್ಣ ನಿರ್ದೇಶಕನಾಗಿ ಮತ್ತು ನಾಯಕನಾಗಿ ಅಭಿನಯಿಸಿರುವ ಲವ್‌ ಮಾಕ್ಟೇಲ್‌ ಚಿತ್ರದಲ್ಲಿ ಮಿಲನ ನಾಗರಾಜ್‌ ಡಬಲ್‌ ರೋಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಲವ್‌ ಮಾಕ್ಟೇಲ್‌ ಚಿತ್ರದಲ್ಲಿ ತೆರೆಯ ಮುಂದೆ ನಾಯಕಿಯಾಗಿ ಕಾಣಿಸಿಕೊಂಡಿದ್ದ ಮಿಲನ, ತೆರೆ ಹಿಂದೆ ಈ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕಿಯಾಗಿಯೂ ಕಾಣಿಸಿಕೊಂಡಿದ್ದರು. ಒಟ್ಟಾರೆ ಇಲ್ಲಿಯವರೆಗೆ ನಾಯಕ ನಟಿಯಾಗಿ ಚಿತ್ರರಂಗದ ಮಂದಿಗೆ ಮತ್ತು ಪ್ರೇಕ್ಷಕರಿಗೆ ಪರಿಚಿತರಾಗಿದ್ದ ಮಿಲನ ನಾಗರಾಜ್‌ ಈ ಚಿತ್ರದ ಮೂಲಕ ನಿರ್ಮಾಪಕಿಯಾಗಿಯೂ ಬಡ್ತಿ ಪಡೆದುಕೊಂಡಿದ್ದಾರೆ.

ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವಂತೆಯೇ ಫೆಬ್ರವರಿ ಮೊದಲ ವಾರ ಮಿಲನ ಅಭಿನಯದ ಮತ್ತೂಂದು ಚಿತ್ರ ಮತ್ತೆ ಉದ್ಭವ ಕೂಡ ಬಿಡುಗಡೆಯಾಗಿದೆ. ಈ ಚಿತ್ರ ಕೂಡ ಒಳ್ಳೆಯ ಓಪನಿಂಗ್‌ ಪಡೆದುಕೊಂಡಿದ್ದು, ಚಿತ್ರಕ್ಕೆ ಮತ್ತು ಮಿಲನ ಪಾತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಈಗಾಗಲೇ ಮಿಲನ ನಟಿಸಿರುವ ವರ್ಜಿನ್‌ ಚಿತ್ರ ಕೂಡ ಬಿಡುಗಡೆಗೆ ರೆಡಿಯಾಗಿದ್ದು, ಶೀಘ್ರದಲ್ಲಿಯೇ ಈ ಚಿತ್ರ ಕೂಡ ತೆರೆಕಾಣಲು ಸಜ್ಜಾಗುತ್ತಿದೆ. ಇದರೊಂದಿಗೆ ತಮಿಳಿನ ಒಂದು ಚಿತ್ರವೂ ಬಿಡುಗಡೆಗೆ ರೆಡಿಯಾಗಿದೆ.

“ಈ ವರ್ಷದಲ್ಲಿ ಏನಿಲ್ಲವೆಂದರೂ ನಾನು ನಟಿಸಿದ ಐದಾರು ಸಿನಿಮಾಗಳಲ್ಲಿ ಪರದೆ ಮೇಲೆ ಕಾಣಿಸಿಕೊಳ್ಳಲಿದ್ದೇನೆ” ಎನ್ನುವ ಮಿಲನ ನಾಗರಾಜ್‌, “ಸದ್ಯಕ್ಕೆ ಕೈಯಲ್ಲಿರುವ ಸಿನಿಮಾಗಳು ಬಿಡುಗಡೆಯಾಗುವವರೆಗೆ ಯಾವ ಹೊಸ ಸಿನಿಮಾಗಳನ್ನೂ ನಾನು ಒಪ್ಪಿಕೊಳ್ಳುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ, ನಾನು ಈ ವರ್ಷ ಬ್ಯುಸಿಯಾಗಿದ್ದು ನಿಜ. ಹಾಗಂತ ಈಗ ಬರುವ ಕಥೆಗಳನ್ನೆಲ್ಲ ಸುಮ್ಮನೆ ಒಪ್ಪಿಕೊಳ್ಳಲ್ಲ. ತುಂಬಾನೇ ಚ್ಯೂಸಿಯಾಗಿದ್ದೇನೆ. ಸದ್ಯ ನಾನು ನಟಿಸಿರುವ ಎಲ್ಲಾ ಚಿತ್ರಗಳ ಮೇಲೂ ನಿರೀಕ್ಷೆ ಹೆಚ್ಚಿದೆ. ನಟನೆ ಜೊತೆಯಲ್ಲಿ ಮುಂದೆ ಕೂಡ ನಿರ್ಮಾಣ ಮಾಡುವ ಬಗ್ಗೆ ಯೋಚಿಸುತ್ತೇನೆ. ನಮ್ಮದೇ ಮಗುವನ್ನು ಎಷ್ಟು ಮುದ್ದಾಗಿ, ಜೋಪಾನವಾಗಿ ಬೆಳೆಸುತ್ತೇವೋ, ಅಷ್ಟೇ ಜೋಪಾನವಾಗಿ, ಎಚ್ಚರಿಕೆಯಿಂದ ಸಿನಿಮಾ ನಿರ್ಮಾಣ ಮಾಡಬೇಕು” ಎನ್ನುತ್ತಾರೆ ಮಿಲನ. ಹೊಸ ಜೋಶ್‌ನಲ್ಲಿ ಸಾಲು ಸಾಲು ಸಿನಿಮಾಗಳ ಮೂಲಕ ಬರುತ್ತಿರುವ ಮಿಲನ ಎಷ್ಟರ ಮಟ್ಟಿಗೆ ಪ್ರೇಕ್ಷಕ ಪ್ರಭುಗಳ ಮನ ಗೆಲ್ಲಲಿದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

256

ಶಾಲ್ಮಲಾ ನಮ್ಮ ಶಾಲ್ಮಲಾ!

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.