ಕಿರಿಕ್ ಹುಡುಗಿಯ ಲೆಕ್ಕ ಇಲ್ಲ ಪಕ್ಕಾ
Team Udayavani, Jan 26, 2020, 4:51 AM IST
ಅದೇನೋ ಗೊತ್ತಿಲ್ಲ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ನಟಿ ರಶ್ಮಿಕಾ ಮಂದಣ್ಣ ಆರಂಭದಿಂದಲೂ ತಮ್ಮ ಸಿನಿಮಾಗಳಿಗಿಂತ, ಬೇರೆ ಬೇರೆ ವಿಷಯಗಳಿಗೆ ಸುದ್ದಿಯಾಗಿದ್ದೇ ಹೆಚ್ಚು. ನಟ ಕಂ ನಿರ್ದೇಶಕ ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕಪ್, ಅದಾದ ಬಳಿಕ ತೆಲುಗಿನಲ್ಲಿ ನಟ ವಿಜಯ ದೇವರಕೊಂಡ ಜೊತೆಗಿನ ಗಾಸಿಪ್, ಸಂಭಾವನೆ ವಿಚಾರದಲ್ಲಿ ನಿರ್ಮಾಪಕರ ಜೊತೆ ಕ್ಯಾತೆ ತೆಗೆದಿದ್ದು, ಕೆಲ ಚಿತ್ರಗಳ ಚಿತ್ರೀಕರಣಕ್ಕೆ ಚಿತ್ರತಂಡದ ಜೊತೆ ಸರಿಯಾಗಿ ಸಹಕರಿಸದಿರುವುದು, “ಕನ್ನಡ ಬರಲ್ಲ’ ಅಂಥ ಸಂದರ್ಶನದಲ್ಲಿ ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದು, ಹೀಗೆ ಸದ್ಯ ಚಿತ್ರರಂಗದಲ್ಲಿ ಅನೇಕರಿಂದ ಕಿರಿಕ್ ಹುಡುಗಿ ಅಂತಾನೇ ಕರೆಸಿಕೊಳ್ಳುತ್ತಿರುವ ರಶ್ಮಿಕಾ ಮಂದಣ್ಣ, ಇದೀಗ ಐಟಿ ವಿಷಯಕ್ಕೆ ಮತ್ತೆ ಕಳೆದ ಕೆಲ ದಿನಗಳಿಂದ ಸುದ್ದಿಯಾಗಿದ್ದಾರೆ.
ಕನ್ನಡದ ಜೊತೆ ತೆಲುಗು ಚಿತ್ರರಂಗದಲ್ಲೂ ಸ್ಟಾರ್ ನಟಿಯಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ, ಕೆಲ ದಿನಗಳ ಹಿಂದಷ್ಟೇ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ತಾನು ಪಡೆಯುತ್ತಿರುವ ಸಂಭಾವನೇ ತೀರಾ ಕಡಿಮೆಯಿದ್ದು, ನನ್ನ ಬಳಿ ಉಳಿತಾಯದ ಹಣವೇ ಇಲ್ಲ’ ಎಂದು ಹೇಳಿಕೆ ನೀಡಿ ಅನೇಕರ ಹುಬ್ಬೇರುವಂತೆ ಮಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಆದಾಯ ತೆರಿಗೆ ಇಲಾಖೆ ರಶ್ಮಿಕಾ ಮಂದಣ್ಣ ಅವರ ನಿವಾಸ ಮತ್ತು ಅವರ ಕುಟುಂಬದ ಒಡೆತನದಲ್ಲಿರುವ ಕಟ್ಟಡಗಳ ಮೇಲೆ ಲಗ್ಗೆ ಇಟ್ಟಿದೆ. ಸುಮಾರು ಒಂದಿಡೀ ದಿನ ರಶ್ಮಿಕಾ ಮಂದಣ್ಣ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿ-ಪಾಸ್ತಿ, ಆದಾಯದ ಮೂಲಗಳ ಮಾಹಿತಿಯನ್ನು ಕಲೆ ಹಾಕಿರುವ ಆದಾಯ ತೆರಿಗೆ ಅಧಿಕಾರಿಗಳು, ಒಂದಷ್ಟು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡು ಮುಂದಿನ ವಿಚಾರಣೆಗೆ ಹಾಜರಾಗುವಂತೆ ರಶ್ಮಿಕಾ ಮತ್ತು ತಂದೆ ಮದನ್ ಮಂದಣ್ಣ ಅವರಿಗೆ ಸಮನ್ಸ್ ನೀಡಿ ತೆರಳಿದ್ದರು.
ಅದರಂತೆ ಮೈಸೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಗೆ ಆಗಮಿಸಿದ ರಶ್ಮಿಕಾ ಅವರನ್ನು ಅಧಿಕಾರಿಗಳು 3 ಗಂಟೆಗಳ ಕಾಲ ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ. ಬಳಿಕ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಗತ್ಯ ಇದ್ದಲ್ಲಿ ಮತ್ತೆ ವಿಚಾರಣೆಗೆ ಆಗಮಿಸಬೇಕು ಎನ್ನುವ ಸೂಚನೆಯೊಂದಿಗೆ ಕಳುಹಿಸಿದ್ದಾರೆ. ಮೂಲಗಳ ಪ್ರಕಾರ ರಶ್ಮಿಕಾ ಮಂದಣ್ಣ ತೋರಿಸಿರುವ ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿಯನ್ನು ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಸದ್ಯದ ಮಟ್ಟಿಗೆ ಇದು ರಶ್ಮಿಕಾಗೆ ತೂಗುಕತ್ತಿಯಾದಂತಿರುವುದು ಸುಳ್ಳಲ್ಲ. ಒಟ್ಟಾರೆ ರಶ್ಮಿಕಾ ಮಂದಣ್ಣ ಆದಾಯ ವಿಷಯದಲ್ಲಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದಾರಾ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.