ರಶ್ಮಿಕಾಳ ಪ್ರೇಮಾಯಣ
Team Udayavani, Nov 24, 2019, 5:03 AM IST
ನಟಿ ರಶ್ಮಿಕಾ ಮಂದಣ್ಣ ಸದ್ಯ ಕನ್ನಡ ಚಿತ್ರರಂಗಕ್ಕಿಂತ, ತೆಲುಗು ಚಿತ್ರರಂಗದಲ್ಲೆ ಹೆಚ್ಚು ಬ್ಯುಸಿಯಾಗಿರುವ ನಟಿ. ಆದರೆ, ಇತ್ತೀಚೆಗೆ ಸಿನಿಮಾಗಳು ಮಾತ್ರವಲ್ಲದೆ, ಸಿನಿಮಾದಿಂದ ಹೊರತಾಗಿರುವ ಅನೇಕ ವಿಷಯಗಳಿಗೂ ರಶ್ಮಿಕಾ ಆಗಾಗ್ಗೆ ಸುದ್ದಿಯಾಗುತ್ತಿರುತ್ತಾರೆ. ಅದರಲ್ಲೂ ಗೀತಾಗೋವಿಂದಂ ಮತ್ತು ಡಿಯರ್ ಕಾಮ್ರೆಡ್ ಚಿತ್ರಗಳ ನಂತರ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಡುವೆ ಏನೋ ನಡೆಯುತ್ತಿದೆ ಎಂಬ ಗುಸುಗುಸು ತೆಲುಗು ಚಿತ್ರರಂಗದಲ್ಲಿ ಹರಿದಾಡುತ್ತಿದೆ.
ಅದರಲ್ಲೂ ಕೆಲ ತಿಂಗಳ ಹಿಂದಷ್ಟೇ ತೆಲುಗಿನ ಕೆಲ ಮಾಧ್ಯಮಗಳು ಮಾಡಿದ ವರದಿಯಂತೂ, ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ದೊಡ್ಡ ಮಟ್ಟದಲ್ಲಿ ಹರಿದಾಡಲು ಕಾರಣವಾಗಿತ್ತು. ಆದರೆ, ಈ ಬಗ್ಗೆ ಎಲ್ಲೂ ಬಾಯಿಬಿಡದ ರಶ್ಮಿಕಾ ಈಗ, ತಮ್ಮ ಬಗ್ಗೆ ಹರಿದಾಡುತ್ತಿರುವ ಗಾಸಿಪ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ಹೌದು, ನಾನು ಪ್ರೀತಿಸುತ್ತಿರುವುದು ನಿಜ’ ಎಂದು ಹೇಳಿದ್ದಾರೆ.
ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ಮನಬಿಚ್ಚಿ ಮಾತನಾಡಿದ ರಶ್ಮಿಕಾ, ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. “ಹೌದು, ನಾನು ಪ್ರೀತಿಸುತ್ತಿರುವುದು ನಿಜ. ಆದರೆ, ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಆಸೆ ಇದೆ. ಈಗ ನನಗೆ ದೊಡ್ಡ ನಟರ ಜೊತೆ ನಟಿಸುವ ಅವಕಾಶ ಸಿಕ್ಕಿರುವುದಕ್ಕೆ ನಿಜಕ್ಕೂ ಖುಷಿ ಇದೆ. ನಾನು ಚಿತ್ರಗಳನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ಆದರೆ, ಯಾವುದೇ ನಟನನ್ನೂ ಸದ್ಯಕ್ಕೆ ನೀವು ಹೇಳುತ್ತಿರುವ ರೀತಿ ಪ್ರೀತಿಸುತ್ತಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ರಶ್ಮಿಕಾ “ಮೇಕಪ್ ಮಾಡಿಕೊಳ್ಳುವುದು ನನಗೆ ಇಷ್ಟವಿಲ್ಲ. ಶೂಟಿಂಗ್ ಇದ್ದಾಗ ಮಾತ್ರ ಮೇಕಪ್ ಮಾಡಿಕೊಳ್ಳುತ್ತೇನಿ. ನಿಜಜೀವನದಲ್ಲಿ ನಾನು ಮೇಕಪ್ ಇಲ್ಲದೇ ಇರುತ್ತೇನೆ’ ಎಂದು ತಿಳಿಸಿದ್ದಾರೆ. ಸದ್ಯ ರಶ್ಮಿಕಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ತೆಲುಗಿನಲ್ಲಿ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸರಿಲೇರು ನಿಕ್ಕೇವರ, ನಿತಿನ್ ಅಭಿನಯದ ಭೀಷ್ಮಾ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಕನ್ನಡದಲ್ಲಿ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಈ ಚಿತ್ರ ಇದೇ ಡಿಸೆಂಬರ್‌ಗೆ ತೆರೆಗೆ ಬರುತ್ತಿದೆ.
ಒಟ್ಟಾರೆ ಕಳೆದ ಕೆಲ ತಿಂಗಳಿನಿಂದ ತಮ್ಮ ಬಗ್ಗೆ ಹರಿದಾಡುತ್ತಿದ್ದ ಗಾಸಿಪ್‌ಗ್ಳ ಬಗ್ಗೆ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದು, ತಮ್ಮ ಕ್ರಶ್ ಬಗ್ಗೆ ಹರಿದಾಡುತ್ತಿದ್ದ ಗಾಸಿಪ್ ಕೇಳಿ ಬೇಜಾರಾಗಿದ್ದ ರಶ್ಮಿಕಾ ಫ್ಯಾನ್ಸ್ ಕೊಂಚ ಮಟ್ಟಿಗೆ ನಿರಾಳರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.