ಬಡ ಕಾಮೇಗೌಡರು ತೋಡಿದ ಪುಣ್ಯದ ಕೆರೆಗಳು


Team Udayavani, Jan 28, 2018, 11:29 AM IST

4aaaa.jpg

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು ದಾಸನದೊಡ್ಡಿಯ ಕುರಿಗಾಹಿ ಕಾಮೇಗೌಡರಿಗೆ ಈ ಬಾರಿಯ ಮೈಸೂರಿನ ಪ್ರತಿಷ್ಠಿತ ರಮಾಗೋವಿಂದ ಪುರಸ್ಕಾರ ಸಿಕ್ಕಿದೆ. ಹತ್ತಿರ ಹತ್ತಿರ ಎಂಬತ್ತು ವರ್ಷ ದಾಟಿರುವ ಹಳ್ಳಿಗಾಡಿನ ಈ ಬಡ ವೃದ್ಧ ಕಳೆದ ನಲವತ್ತು ವರ್ಷಗಳಿಂದ ಆಡು-ಕುರಿ ಸಾಕಿ, ಅವುಗಳನ್ನು ಮಾರಿದ ಕಾಸಿಗೆ ಇನ್ನೊಂದಿಷ್ಟು ಕಾಸು ಕೂಡಿಸಿ, ಅದರ ಮೇಲೂ ಸಾಲಸೋಲ ಮಾಡಿ ತನ್ನ ಗ್ರಾಮದ ಹಿಂದಿರುವ ಕುಂದೂರು ಬೆಟ್ಟದ ಪಾದದಲ್ಲಿ ಏಳು ಕೆರೆಗಳನ್ನು ತೋಡಿದ್ದಾರೆ. ತನ್ನ ಆಯಸ್ಸು ಮುಗಿಯುವ ಮೊದಲು ಇನ್ನೂ ಮೂರು ಕೆರೆಗಳನ್ನು ತೋಡುವ ಕನಸು ಕಾಣುತ್ತಿದ್ದಾರೆ.

ಕೊಳಕು ಅಂಗಿಯ, ಹರಿದ ಚಡ್ಡಿಯ ಮೈಯೆಲ್ಲ ಬೆವರ ಪರಿಮಳದ ಈ ಮುದುಕ ಹತ್ತಿರ ಹೋದರೆ, “”ಬುದ್ಧೀ, ಹತ್ತಿರ ಬರಬೇಡಿ, ನಾನು ವಾಸನೆ ಮುದುಕ, ಒಂದು ವಾರದಿಂದ ಮೈಗೆ ನೀರು ಹಾಕ್ಕೊಂಡಿಲ್ಲ. ಈ ಕೆರೆ ಕಟ್ಟಿ ಮುಗಿಯುವವರೆಗೆ ನಾನು ಸ್ನಾನ ಮಾಡಲ್ಲ ಅಂತ ಶಪಥ ಹಾಕೊಂಡಿದೀನಿ, ದೂರ ಹೋಗಿ” ಎಂದು ತಾವೇ ದೂರ ಹೋಗಿ ನಿಲ್ಲುತ್ತಾರೆ. 

“”ಅಲ್ಲ ಕಾಮೇ ಗೌಡ್ರೇ, ಹೋಗಿ ಹೋಗಿ ಬೆಟ್ಟದ ಬುಡದಲ್ಲಿರೋ ಸರ್ಕಾರೀ ಜಾಗದಲ್ಲಿ ಕೆರೆ ತೋಡಿದ್ದೀರಲ್ಲಾ. ಇದನ್ನೇ ನಿಮ್ಮ ಜಮೀನಿನಲ್ಲಿ ತೋಡಬಹುದಿತ್ತಲ್ಲ” ಅಂದರೆ ನಗುತ್ತಾರೆ.

“”ಅಲ್ಲ ಬುದ್ಧೀ, ನಿಮಗೇನಾದ್ರೂ ಬುದ್ಧಿ ಇದೆಯಾ? ಸ್ವಂತ ಜಾಗದಲ್ಲಿ ಕೆರೆ ತೋಡಿದ್ರೆ ನನ್ನ ಮಕ್ಳು, ಮೊಮ್ಮಕ್ಳು ಬುಟ್ಟಾರಾ, ನಮ್ಮಪ್ಪಂಗೆ ಬುದ್ಧಿ ಇಲ್ಲ ಅಂತ ಕೆರೆ ಮುಚ್ಚಿ  ತೋಟ ಮಾಡಲ್ವಾ? ಅಥಾವ  ತೋಟಾನೇ ಮಾರ್ಕೊಂಡು ಬೆಂಗ್ಳೂರಿಗೆ ಒಂಟೋಗಲ್ವಾ. ಅದ್ಕೆನೇ  ಸರ್ಕಾರೀ ಜಮೀನಲ್ಲಿ ಕೆರೆ ತೋಡಿದ್ದೀನಿ. ಈಗ ಇವನ್ನೆಲ್ಲ ಯಾವ ಮಗಂಗೆ ಮಾರ್ಕೊಳ್ಳಕ್ಕಾಗುತ್ತೆ ಹೇಳಿ. ಯಾರಿಗೂ ಮಾರಕ್ಕಾಗಲ್ಲ, ಯಾರಿಗೂ ಮುಚ್ಚಕ್ಕಾಗಲ್ಲ, ಯಾರಿಗೂ ಕೊಂಡ್ಕೊಳ್ಳಕ್ಕೂ ಆಗಲ್ಲ, ಆಗ ಏನಾಗುತ್ತೆ ಹೇಳಿ. ಪಕ್ಷಿಗಳು ಬರುತ್ತೆ, ಪ್ರಾಣಿಗಳು ಬರುತ್ತೆ, ದನಕರು, ಚಿರತೆ, ಆನೆಗಳು ಬರುತ್ತೆ, ನೀರು ಕುಡ್ಕೊಂಡು ಹೊಟ್ಟೆ ತುಂಬಿಸ್ಕೊಂಡು ಶಿವ ಶಿವಾ ಅಂತ ಖುಷಿ ಪಟ್ಕೊಂಡು ಹೋಗುತೆÌ. ಈ ಮಕ್ಳನ್ನ ಸಾಕಿ ಬೆಳೆಸೋದ್ರಿಂದ ಏನು ಸಿಗುತ್ತೆ? ವಯಸ್ಸಾದ್‌ಮೇಲೆ ಒದೆ ಸಿಗುತ್ತೆ” ಅಂತ ನಗುತ್ತಾರೆ. 

ನೋಡಲು ಬಿಕಾರಿಯಂತೆ ತೋರುವ ಆದರೆ, ಮಾತನಾಡಲು ತೊಡಗಿದರೆ ಸಂತನಂತೆ ಕಾಣುವ ಕಾಮೇಗೌಡರು ಒಣ ಪ್ರದೇಶವಾದ ಮಳವಳ್ಳಿ ತಾಲ್ಲೂಕಿನ ಕುಂದೂರು ಬೆಟ್ಟದ ಪಾದದಲ್ಲಿ ಕೈಯಾರೆ ತೋಡಿರುವ ಈ ಏಳು ಕೆರೆಗಳು ಕರ್ಮಯೋಗಿಯೊಬ್ಬ ನಲವತ್ತು ವರ್ಷಗಳಿಂದ ನಡೆಸಿರುವ ಕಾಯಕದಂತೆ ಬೆಳಗುತ್ತಿವೆ. ಈ ಕೆರೆಗಳ ಸುತ್ತ ಇವರು ಬೆಳೆಸಿರುವ ಗಿಡಮರಗಳನ್ನು ಕಿಡಿಗೇಡಿಗಳು ಕತ್ತರಿಸುತ್ತಲೇ ಇರುತ್ತಾರೆ. ಸರಿಯಾಗಿ ಕಣ್ಣು ಕಾಣಿಸದ ಈ ಹಣ್ಣು ಹಣ್ಣು ಮುದುಕ ಕೋಲೂರಿಕೊಂಡು ನಡೆಯುವ ಕಾಲುದಾರಿಗಳಲ್ಲಿ ಬೇಕು ಬೇಕೆಂತಲೇ ಮುಳ್ಳು ಕಡ್ಡಿಗಳನ್ನು ಸುರಿಯುತ್ತಾರೆ. ಈತ ದಣಿವಾರಿಸಿಕೊಳ್ಳಲು ಕೂರುವ ಜಾಗದಲ್ಲಿ ಹೇಸಿಗೆ ಮಾಡಿ ಹೋಗುತ್ತಾರೆ. ಕಣ್ಣಮುಂದೆಯೇ ತಾನು ನೆಟ್ಟು ಬೆಳೆಸಿದ ಗಿಡಗಳ ಕೊಂಬೆಗಳನ್ನು ತರಿದುಕೊಂಡು ಹೋಗುವ ಪಾಪಿಗಳನ್ನು ಕಾಮೇಗೌಡರು ಕೆಟ್ಟದಾಗಿ ಬೈಯುತ್ತ ಅಟ್ಟಿಸಿಕೊಂಡು ಹೋಗುತ್ತಾರೆ. ಆಮೇಲೆ ಸುಸ್ತಾಗಿ ನಿಂತುಕೊಳ್ಳುತ್ತಾರೆ.

“”ಪಾಪಿಗಳಾದ ಮನುಷ್ಯರಿರುವ ಕಡೆ  ಈ ಪುಣ್ಯದ ಕಾರ್ಯವನ್ನು ನೀವಾದರೂ ಯಾಕೆ ಮಾಡುತ್ತೀರಾ ಗೌಡರೇ” ಎಂದು ಕೇಳುತ್ತೇನೆ. “”ಪಾಪಿಗಳಿಂದಲೇ ಈ ಲೋಕದ ಲಯ ನಡೆಯುತ್ತಿರುವುದು ಬುದ್ಧೀ… ಪಾಪಿಗಳಿಲ್ಲದಿದ್ದರೆ ಈ ಲೋಕ ಯಾವಾಗಲೋ ನಿಂತು ಹೋಗುತ್ತಿತ್ತು” ಎನ್ನುತ್ತಾರೆ ಗೌಡರು. “”ಸತ್ಯವಂತರು ಶಿವಶಿವಾ ಅಂತ ಪೂಜೆ ಮಾಡಿಕೊಂಡು ಸುಮ್ಮನಿರುತ್ತಾರೆ.  ಅವರೆಲ್ಲ ಸ್ವರ್ಗಕ್ಕೆ ಹೋಗುತ್ತಾರೆ. ಪಾಪಿಗಳು ಸುಮ್ಮನಿರಲಾರದೆ ಏನಾದರೂ ಘಾತಕ ಕೆಲಸ ಮಾಡಿ ಪುನಃ ಪುನರ್ಜನ್ಮ ಪಡೆದು ಭೂಮಿಗೆ ಮರಳಿ ಬರುತ್ತಾರೆ. ಭೂಮಿಯಲ್ಲಿ ಎಲ್ಲರೂ ಒಳ್ಳೆಯವರಾಗಿದ್ದರೆ ಭೂಮಿ ಖಾಲಿಯಾಗಿರುತ್ತಿತ್ತು. ಸ್ವರ್ಗ ತುಂಬಿಕೊಂಡು ಬಿಡುತ್ತಿತ್ತು. ಅದಕ್ಕೇ ಪಾಪಿಗಳಿರಬೇಕು ಲೋಕದಲ್ಲಿ ” ಎಂದು ಅತ್ಯಂತ ಕ್ಲಿಷ್ಟವಾದ ತಣ್ತೀಜ್ಞಾನವೊಂದನ್ನು ಚಿಟಿಕೆ ಹೊಡೆದಂತೆ ಸುಲಲಿತವಾಗಿ ಹೇಳಿ ಮುಗಿಸಿ ಕಾಮೇಗೌಡರು ಫೋಟೋಗೆ ಇನ್ನೊಂದು ಸುಂದರವಾದ ಪೋಸು ಕೊಡುತ್ತಾರೆ.

“”ಎಲ್ಲರೂ ಪೇಪರಲ್ಲಿ ಓದಲಿ ಬುದ್ಧಿª, ಎಲ್ಲರೂ ಟೀವೀಲಿ ನೋಡಲಿ ಬುದ್ಧಿª. ಎಲ್ಲರೂ ಈ ಬಿಕಾರಿಗೆ ಸಹಾಯ ಮಾಡಲಿ ಬುದ್ಧೀ. ಏಳು ಕೆರೆ ನನ್ನ ಕುರಿ ಮಾರಿದ ಕಾಸಿನಿಂದಲೇ ತೋಡಿಸಿದ್ದೀನಿ. ಇನ್ನೂ ಯಾರಾದರೂ ಸಹಾಯ ಮಾಡಿದರೆ ಈ ಜನ್ಮ ಮುಗಿದು ಹೋಗುವುದರೊಳಗೆ ಇನ್ನೂ ಮೂರು ಕೆರೆಗಳನ್ನ ತೋಡಿಸಿ ಶಿವನಪಾದ ಸೇರ್ಕೊಂಬಿಡ್ತೀನಿ ಬುದ್ಧಿªà” ಎಂದು ಗೌಡರು ಜೆಸಿಬಿ ತಂದು ಇನ್ನೂ ಮೂರು ಕೆರೆಗಳನ್ನು ತೋಡಲು ಇನ್ನೂ ಎಷ್ಟು ಕಾಸು ಬೇಕಾಗಬಹುದು ಎಂದು ಲೆಕ್ಕಾಚಾರ ಹಾಕುತ್ತಾರೆ.

ಈ ಗೌಡರ ಕಥೆಯೇ ಹೀಗೆ. ಎಲ್ಲಿಂದ ಕಾಸು ಸಿಕ್ಕಿದರೂ ಅದನ್ನು ತಂದು ಕುಂದೂರು ಬೆಟ್ಟದ ಬುಡದಲ್ಲಿರುವ ಕೆರೆಗಳಿಗೆ ಸುರಿಯುವುದು. ಕೆಲವು ವರ್ಷಗಳ ಹಿಂದೆ ಗೌಡರ ಹಿರಿಯ ಸೊಸೆ ಗರ್ಭವತಿಯಾದಾಗ ಹೆರಿಗೆಗೆ ಅಂತ ಆಸ್ಪತ್ರೆಗೆ ಸೇರಿಸಿದ್ದರಂತೆ. ಹೆರಿಗೆ ಸಹಜವಾಗಿ ಆಗಲಾರದು. ಡಾಕ್ಟರು ಕಾಸು ಕೀಳಲು ಗರ್ಭವತಿಯ ಹೊಟ್ಟೆ ಕುಯ್ಯಬಹುದು. ಅದಕ್ಕಾಗಿ ಹಣ ಬೇಕಾಗಬಹುದು ಎಂದು ಗೌಡರು ಯಾರಿಗೂ ಗೊತ್ತಾಗದ ಹಾಗೆ ಇಪ್ಪತ್ತು ಸಾವಿರ ರೂಪಾಯಿಗಳನ್ನು ಚೆಡ್ಡಿಯ ಜೇಬಿನಲ್ಲಿ ಅಡಗಿಸಿಟ್ಟುಕೊಂಡಿದ್ದರಂತೆ. ಗೌಡರ ಪುಣ್ಯಕ್ಕೆ ಸೊಸೆಗೆ ಸಹಜ  ಹೆರಿಗೆಯಾಯಿತು. ಗೌಡರು ಚೆಡ್ಡಿ ಜೇಬಲ್ಲಿದ್ದ ಇಪ್ಪತ್ತು ಸಾವಿರದ ಜೊತೆ ಇನ್ನೂ ಸ್ವಲ್ಪ$ಸಾಲಸೋಲ ಮಾಡಿ ಬೆಟ್ಟದ ಪಾದದಲ್ಲಿ ಇನ್ನೊಂದು ಕೆರೆ ತೋಡಿಸಿ ಆ ಕೆರೆಗೆ ಹುಟ್ಟಿದ ಮೊಮ್ಮಗಳ ಹೆಸರನ್ನಿಟ್ಟರು. ತಾವು ತೋಡಿಸಿದ ಅಷ್ಟೂ ಕೆರೆಗಳಿಗೆ ಗೌಡರು ತಮ್ಮ ಮಗನ, ಮೊಮ್ಮಕ್ಕಳ ಹೆಸರಿಟ್ಟಿ¨ªಾರೆ.  “”ಇದು ಯಾಕೆ?” ಎಂದು ಕೇಳಿದರೆ, “”ಇನ್ನೇನು ಬುದ್ಧೀ… ಮೊಮ್ಮಗಳು ದೊಡ್ಡವಳಾಗಿ ಅವಳಿಗೆ ಮದುವೆಯೂ ಆಗಿ, ಗಂಡನ ಕೈ ಹಿಡಕೊಂಡು, ಅಜ್ಜ ತನ್ನ ಹೆಸರಲ್ಲಿ ಕಟ್ಟಿರುವ ಕೆರೆಯನ್ನು ತೋರಿಸಲು ಬೆಟ್ಟದ ಬುಡಕ್ಕೆ ನಡಕೊಂಡು ಇಬ್ಬರೂ ಬರುತ್ತಾರೆ. ಬರುವಾಗ ಕೆರೆಯಲ್ಲಿ ಹಕ್ಕಿ-ಪಕ್ಷಿಗಳು, ಹಸು-ಕರುಗಳು ನೀರು ಕುಡೀತಾ ಇರುತ್ತವೆ. ಆಗ ಅವಳು ಎಷ್ಟು ಜಂಬದಿಂದ ಗಂಡನ್‌ ಜೊತೆ ಮಾತಾಡ್ತಾಳೆ ಅಲ್ವಾ? ನೀವು ಸೈಟ್‌ ಕೊಡಿÕ, ಮನೆ ಕಟ್ಸೆ, ಬಂಗಾರ ಕೊಟ್ಟು ಮದುವೆ ಮಾಡಿದ್ರೂ ಇಷ್ಟು ಜಂಬ ಇರುತ್ತ ಹೇಳಿ, ಜೊತೆಗೆ ಅವ್ರಿಗೆ ವಾಕಿಂಗ್‌ ಮಾಡಿದ ಹಾಗೂ ಆಯ್ತು ಅಲ್ವ?” ಅನ್ನುತ್ತಾರೆ.

“”ಆದರೆ, ನಿಮಗೆ ಇದರಿಂದ ಏನು ಸಿಗುತ್ತದೆ ಗೌಡರೇ” ಎಂದು ನಾನು ಅಮಾಯಕನಂತೆ ಕೇಳುತ್ತೇನೆ.
“”ನೋಡಿ ಬುದ್ಧೀ ಎಂದು ಗೌಡರು ತಾವು ಹೊಸದಾಗಿ ತೋಡಿರುವ ಇನ್ನೂ ನೀರು ತುಂಬಿರದ ಕೆರೆಯ ದಡದಲ್ಲಿ ನೆಟ್ಟಿರುವ ಗೋಗಲ್ಲನ್ನು ತೋರಿಸುತ್ತಾರೆ. ಗೋಗಲ್ಲು ಎಂದರೆ ಗೋವುಗಳು ಮೈಯನ್ನು ತುರಿಸಿಕೊಳ್ಳಲಿ ಎಂದು ನೆಲದಲ್ಲಿ ಆಳವಾಗಿ ನೆಟ್ಟಿರುವ ಕಂಬದಂತಹ ಕಲ್ಲು. ಈ  ಕೆರೆ ಇದೆಯಲ್ಲ  ಬುದ್ಧಿ… ಇದರಲ್ಲಿ ನೀರು ತುಂಬಿಕೊಂಡ ಮೇಲೆ ಒಂದು ಗೋವು ಬಂದು ಹೊಟ್ಟೆ ತುಂಬ ನೀರು ಕುಡಿದು ಸಂತೋಷದಲ್ಲಿ ಈ ಗೋಗಲ್ಲಿಗೆ ಮೈ ಉಜ್ಜಿಕೊಂಡು ಆನಂದದಲ್ಲಿ ಕಣ್ಮುಚ್ಚಿಕೊಳ್ಳುತ್ತಲ್ಲ. ಆಗ ನಾವು ಮನುಷ್ಯರು ಮಾಡಿಕೊಂಡಿರುವ ಜನ್ಮ ಜನ್ಮಾಂತರದ ಸಾಲಗಳೆಲ್ಲಾ ಪರಿಹಾರ ಆಗುತ್ತೆ ಬುದ್ಧೀ…” ಎಂದು ಗೌಡರು ತಮ್ಮ ಕಾಣಿಸದ ಕಣ್ಣುಗಳನ್ನು ಇನ್ನೂ ಮುಚ್ಚಿಕೊಂಡು ಆನಂದ ಪಡುತ್ತಾರೆ.

ನಾವು ಬೆಟ್ಟದ ದಾರಿಯನ್ನು ಇಳಿಯುತ್ತೇವೆ. ದಾರಿಯಲ್ಲಿ ಒಂದು ಬರಡಾಗಿರುವ ಪ್ರಪಾತದಂತಹ  ದೊಡ್ಡ ಹೊಂಡ. ಇದು “ಪಾಪದ ಕೆರೆ’ ಎಂದು ಗೌಡರು ನಗುತ್ತಾರೆ. ಅದು  ಸರಕಾರ ಮಳೆಕೊಯ್ಲು ಯೋಜನೆಯ ಅಡಿಯಲ್ಲಿ ಲಕ್ಷಾಂತರ ಅನುದಾನದಲ್ಲಿ ತೋಡಿರುವ ದೊಡ್ಡದಾದ ಒಂದು ಹೊಂಡ. ಒಂದು ಮಳೆಗಾಲದಲ್ಲೂ ಅದರಲ್ಲಿ ನೀರು ತುಂಬೇ ಇಲ್ಲ, ಅದು ನರಕದ ಬಾಯಿಯಂತೆ ಬಾಯಿ ತೆರೆದುಕೊಂಡು ನಿಂತಿದೆ. ಅದರ ಅಕ್ಕಪಕ್ಕಲ್ಲೇ  ಕಾಮೇಗೌಡರ ಪುಣ್ಯದ ಕೆರೆಗಳು ಈ ಬೇಸಿಗೆಯಲ್ಲೂ ನೀರು ತುಂಬಿ ಹೊಳೆಯುತ್ತಿವೆ. 

“”ಇದೊಂದು ಮೂರು ಲಕ್ಷ ಪ್ರಶಸ್ತಿ ಸಿಕ್‌ ಬಿಡ್ಲಿ ಬುದ್ಧೀ… ಜೆಸಿಬಿ ತಂದು ಇನ್ನೂ ಮೂರು ಕೆರೆ ತೋಡಿಸಿ ಶಿವಶಿವಾ ಅಂತ ಸುಮ್ನಿದ್ದು ಬಿಡ್ತೀನಿ ಬುದ್ಧಿ, ಇನ್ನು ನನ್ನ ಕೈಲಾಕಿಲ್ಲ, ವಯಸ್ಸಾಗೋಯ್ತು. ಊರಲ್ಲೂ ವೈರಿಗಳು ಹಚ್ಕೊಂಡಿದ್ದಾರೆ . ನನ್ನ ಪ್ರಾಣಕ್ಕೂ ಅಪಾಯವಿದೆ. ಕೆರೆ ತೋಡಿ ಮುಗಿಸೋ ತನ್ಕ ಸರಕಾರಕ್ಕೆ ಹೇಳಿ ರಕ್ಷಣೆ ಕೊಡಿಸಿ  ಬುದ್ಧೀ. ಆಮೇಲೇನಾದ್ರೂ ಆಗ್ಲಿ ಬುಡಿ” ಕಾಮೇಗೌಡರು ಕೇಳಿಕೊಳ್ಳುತ್ತಾರೆ.

ಅಬ್ದುಲ್‌ ರಶೀದ್‌ 

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

256

ಶಾಲ್ಮಲಾ ನಮ್ಮ ಶಾಲ್ಮಲಾ!

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.