ಸಂಕ್ರಾಂತಿ ಸಂಭ್ರಮ
ಎಳ್ಳು ಎರೆಯುವುದು ಬಲ್ಲಿರೇನಯ್ಯ?
Team Udayavani, Jan 8, 2020, 5:21 AM IST
ವಿಶೇಷವಾಗಿ ಐದು ವರ್ಷದ ಒಳಗಿನ ಮಕ್ಕಳಿಗೆ, ಸಂಕ್ರಾಂತಿಯಂದು ಎಳ್ಳು ಎರೆಯುವ ಆಚರಣೆ ಇದೆ. ಇದನ್ನು ಕೆಲವೆಡೆ ಎಳ್ಳು ಎರೆಯುವುದು ಅಂದರೆ, ಇನ್ನೂ ಕೆಲವೆಡೆ ಕರಿ ಎರೆಯುವುದು ಅಥವಾ ಹಣ್ಣೆರೆಯುವುದು ಎಂದೂ ಕರೆಯುತ್ತಾರೆ.
ಪ್ರತಿಯೊಂದು ರಾಶಿಯಲ್ಲಿ ಸಂಕ್ರಮಣ ನಡೆದರೂ ಕೂಡ, ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಸಂಕ್ರಮಣಗೈಯುವ ಘಳಿಗೆ ನಮ್ಮ ಸಂಸ್ಕೃತಿಯಲ್ಲಿ ಅತ್ಯಂತ ಮಹತ್ತರವಾದುದು. ಅಂದಿನಿಂದಲೇ ಉತ್ತರಾಯಣ ಆರಂಭ. ಸೌರಮಾನವೂ ಕೂಡ. ಅಂದರೆ ದೇವತೆಗಳ ಪರ್ವ. ಈ ಮಕರ ಸಂಕ್ರಾಂತಿಯು ದೇಶದ ಹಲವು ಭಾಗಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಟ್ಟಿದೆ. ಜೊತೆಗೆ, ಆಚರಣೆಯಲ್ಲೂ ಭಿನ್ನತೆಗಳನ್ನು ಕಾಣಬಹುದು. ಆದರೆ, ವಿಶೇಷವಾಗಿ ಐದು ವರ್ಷದ ಒಳಗಿನ ಮಕ್ಕಳಿಗೆ, ಸಂಕ್ರಾಂತಿಯಂದು ಎಳ್ಳು ಎರೆಯುವ ಆಚರಣೆ ಇದೆ. ಇದನ್ನು ಕೆಲವೆಡೆ ಎಳ್ಳು ಎರೆಯುವುದು ಅಂದರೆ, ಇನ್ನೂ ಕೆಲವೆಡೆ ಕರಿ ಎರೆಯುವುದು ಅಥವಾ ಹಣ್ಣೆರೆಯುವುದು ಎಂದೂ ಕರೆಯುತ್ತಾರೆ.
ಎಳ್ಳು ಎರೆಯುವ ಉದ್ದೇಶ:
ಸಂಕ್ರಾಂತಿಯಂದು ಪುಣ್ಯತೀರ್ಥಗಳಲ್ಲಿ ಅಂದರೆ ನದಿ ಸಂಗಮ, ಸಮುದ್ರ ಮುಂತಾದ ಕಡೆಗಳಲ್ಲಿ ಪವಿತ್ರ ಸ್ನಾನ ಮಾಡುವ ಪದ್ಧತಿಯಿದೆ. ಶರೀರದ ಕೊಳೆಯನ್ನು ನಿವಾರಿಸುವ ಜೊತೆಗೆ ಮಾನಸಿಕ ಕೊಳೆಯನ್ನು ನಾಶ ಮಾಡುವುದು ಸ್ನಾನದ ಉದ್ದೇಶ. ಸ್ನಾನದಷ್ಟೇ ಪ್ರಾಮುಖ್ಯತೆ ಎಳ್ಳಿಗೂ ಇದೆ. ಎಳ್ಳಿನ ನೀರಿನಿಂದ ಸ್ನಾನ ಮಾಡುತ್ತಾರೆ. ಪೀಡಾ ಪರಿಹಾರಕ್ಕಾಗಿ ಎಳ್ಳು, ಬೆಲ್ಲ, ಕೊಬ್ಬರಿ ಹಂಚುತ್ತಾರೆ. ಅಂತೆಯೇ, ಮಕ್ಕಳ ಮೇಲೆ ಎಳ್ಳನ್ನು ಸುರಿಯುವುದರಿಂದ ಬಾಲಾರಿಷ್ಟ ನಾಶವಾಗುತ್ತದೆ ಎಂಬ ನಂಬಿಕೆಯಿದೆ.
ಆಚರಣೆ ಹೇಗೆ?
ಸಂಕ್ರಾಂತಿ ದಿನ ಮಗುವಿಗೆ ಕಪ್ಪು ಬಣ್ಣದ ಹೊಸ ಬಟ್ಟೆಯನ್ನು ತೊಡಿಸಿರುತ್ತಾರೆ. ಜೊತೆಗೆ ತಾಯಿಯೂ ಕೂಡ ಕಪ್ಪು ಬಣ್ಣದ ಸೀರೆ ಉಡುವ ವಾಡಿಕೆ. ಬೇರೆ ಮಂಗಳಕಾರ್ಯದಲ್ಲಿ ಕಪ್ಪು ಬಣ್ಣಕ್ಕೆ ನಿಷೇಧವಿದ್ದರೂ, ಈ ಆಚರಣೆಯಲ್ಲಿ ಕಪ್ಪು ಬಣ್ಣಕ್ಕೆ ವಿಶೇಷ ಪ್ರಾಶಸ್ತ್ಯ. ಬಹುಶಃ ವೈಜ್ಞಾನಿಕವಾಗಿ ಕಪ್ಪು ಬಣ್ಣ ಶಾಖ ಹೀರುವುದರಿಂದ ಇದಕ್ಕೆ ಹಿರಿಯರು ಪ್ರಾಮುಖ್ಯತೆ ನೀಡಿರಬಹುದು.
ಇನ್ನೊಂದು ವಿಶೇಷತೆ ಎಂದರೆ, ಕುಸುರೆಳ್ಳಿನ ಆಭರಣ! ಈ ಆಚರಣೆಗೆಂದೇ ಮಗುವಿಗೆ ಕುಸುರೆಳ್ಳಿನಿಂದ ತಯಾರು ಮಾಡಲಾದ ಆಭರಣಗಳನ್ನು ತೊಡಿಸುತ್ತಾರೆ. ಗಂಡು ಮಗುವಿದ್ದರೆ, ಕೃಷ್ಣನಂತೆ ಕಿರೀಟ, ಹಾರ, ಬಾಜುಬಂಧ, ಬಾಳೆಯ ತರಹ ಕಡಗ, ಕೊಳಲು ಎಲ್ಲವನ್ನೂ ಕುಸುರೆಳ್ಳಿನಿಂದ ತಯಾರಿಸುತ್ತಾರೆ. ಹೆಣ್ಣು ಮಗುವಿದ್ದರೆ, ಕುಸುರೆಳ್ಳಿನ ಬಳೆ, ಸರ, ಸೊಂಟಪಟ್ಟಿ, ಬೈತಲೆ ಪಟ್ಟಿ, ಕಿವಿಯೋಲೆಗಳಿಂದ ಅಲಂಕಾರ ಮಾಡುತ್ತಾರೆ. ಮೊದಲೆಲ್ಲ, ಎಲ್ಲ ತಾಯಂದಿರೂ ಇವುಗಳನ್ನು ಮನೆಯಲ್ಲಿಯೇ ತಯಾರಿಸುತ್ತಿದ್ದರಂತೆ. ಆದರೆ, ಇತ್ತೀಚೆಗೆ ಇವು ಮಾರುಕಟ್ಟೆಯಲ್ಲಿ ಲಭ್ಯವಿದ್ದು ಒಂದು ತಿಂಗಳು ಮುಂಚಿತವಾಗಿ ಹೇಳಿ ಮಾಡಿಸಿದರಾಯಿತು. ಕೆಲ ಕಲಾವಿದರು ಈ ಆಭರಣಗಳನ್ನು ಅಕ್ಕಪಕ್ಕದ ರಾಜ್ಯಗಳಲ್ಲಿ ನೆಲೆಸಿರುವವರಿಗೆ ಹಾಗೂ ಹೊರದೇಶಗಳಿಗೂ ಕೂಡ ಕಳುಹಿಸಿದ ಉದಾಹರಣೆಗಳು ಉಂಟು. .
ಈ ಆಚರಣೆಯಲ್ಲಿ ಎಳ್ಳಿಗೆ ಪ್ರಮುಖ ಪ್ರಾಶಸ್ತ್ಯ ಇದ್ದರೂ ಕೂಡ; ಎಳ್ಳಿನ ಜೊತೆಗೆ ಕಡ್ಲೆಪುರಿ, ಕಾಶಿ ಬೋರ್ ಕಾಯಿ, ಹಸಿ ಬಟಾಣಿ ಕಾಯಿ, ಕಡಲೆ ಸುಲಿಗಾಯಿ, ಸಿಹಿಯಾದ ಬೆಂಡು-ಬತ್ತಾಸುಗಳನ್ನು ಸೇರಿಸಿ ಮಿಶ್ರಣ ಮಾಡಿ; ಇದನ್ನು ಮಗುವಿನ ತಲೆಯ ಮೇಲೆ ಬೆಳ್ಳಿ ಬಟ್ಟಲಿನಿಂದ ಐದು ಬಾರಿ ಎರೆಯುತ್ತಾರೆ. ಮುತ್ತು ಹವಳದ ಸಂಕೇತವಾಗಿ ಒಂದು ಮುತ್ತನ್ನೊ ಅಥವಾ ಹವಳದ ಉಂಗುರವನ್ನು ಮಿಶ್ರಣದಲ್ಲಿ ಹಾಕಿ ಎರೆಯುತ್ತಾರೆ. ಹೀಗೆ ಎರೆದ ನಂತರ ಬೀಳುವ ಸಿಹಿ ಹಾಗೂ ಇನ್ನಿತರ ಕಾಯಿಗಳನ್ನು, ಆಚರಣೆಗೆ ಬಂದ ಉಳಿದ ಮಕ್ಕಳು ಹೆಕ್ಕುವುದು ಪದ್ಧತಿ. ಬಂದ ಮಕ್ಕಳಿಗೆ ಸಿಹಿ ತಿನಿಸು ಹಾಗೂ ತಾಯಂದಿರಿಗೆ ಬಾಗಿನ ನೀಡುವುದು ವಾಡಿಕೆ.
ಈ ಆಚರಣೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಲ್ಲಿ ಕಂಡುಬರುತ್ತದೆ. ಆಚರಣೆಯ ಹೆಸರು ಮತ್ತು ವಿಧಾನದಲ್ಲಿ ಕೊಂಚ ವ್ಯತ್ಯಾಸವಿದ್ದರೂ, ಮಕ್ಕಳ ಬಾಲಾರಿಷ್ಟ ನಿವಾರಣೆಗೆ ಎಳ್ಳು ಎರೆಯುವ ಸಂಪ್ರದಾಯ ಇನ್ನೂ ಉಳಿದಿದೆ.
-ಅನುಪಮಾ ಕೆ ಬೆಣಚಿನಮರ್ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.