ಅನುಷ್ಕಾಳ ಪ್ರಾಣಿ ದಯೆ!

Team Udayavani, Aug 2, 2019, 5:42 AM IST

k-21

ಸ್ಟಾರ್‌ಗಳೆಂದರೆ, ತಾವಾಯಿತು ತಮ್ಮ ವೈಭವೋಪೇತ ಜೀವನವಾಯಿತು. ಅವರಿಗೆ ಜನಸಾಮಾನ್ಯರ ಬಗ್ಗೆ, ಸಮಾಜದಲ್ಲಿ ನಡೆಯುವ ಬಹುತೇಕ ವಿದ್ಯಮಾನಗಳ ಬಗ್ಗೆ ಮಾಹಿತಿ, ಆಸಕ್ತಿ ಎರಡೂ ಇರುವುದಿಲ್ಲ ಎನ್ನುವುದು ಬಹುತೇಕ ಮಂದಿಯ ಆರೋಪ. ಅದರಲ್ಲೂ ಬಾಲಿವುಡ್‌ ಸ್ಟಾರ್‌ಗಳ ಮಟ್ಟಿಗಂತೂ ಈ ಅಪವಾದ ಯಾವಾಗಲೂ ಅವರ ಬೆನ್ನ ಹಿಂದೆಯೇ ಇರುತ್ತದೆ. ಆದರೆ, ಅಪರೂಪಕ್ಕೆ ಕೆಲವು ಸ್ಟಾರ್ ತಮ್ಮ ಸಾಮಾಜಿಕ ಕಳಕಳಿಯಿಂದ ಜನರ ಮೆಚ್ಚುಗೆಗೆ ಪಾತ್ರವಾಗುತ್ತಾರೆ. ಈಗ ಅಂಥದ್ದೇ ಒಂದು ಕಾಳಜಿ, ಕಳಕಳಿ ನಟಿ ಅನುಷ್ಕಾ ಶರ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡುವಂತೆ ಮಾಡಿದೆ.

ಕಳೆದ ಕೆಲ ದಿನಗಳಿಂದ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಳೆಯಿಂದ ಆಶ್ರಯ ಪಡೆಯಲು ಬೀದಿ ನಾಯಿಯೊಂದು ಅಪಾರ್ಟ್‌ಮೆಂಟ್‌ ಒಳಗೆ ಬಂದಿದೆ ಎನ್ನುವ ಕಾರಣಕ್ಕೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಮಾರಣಾಂತಿಕವಾಗಿ ನಾಯಿಯನ್ನು ಥಳಿಸಿರುವ ಘಟನೆ ಮುಂಬೈನ ವರ್ಲಿಯಲ್ಲಿರುವ ಟರ್ಫ್ ವ್ಯೂ ಎನ್ನುವ ಕಟ್ಟಡದಲ್ಲಿ ನಡೆದಿದೆ. ನಾಯಿಯನ್ನು ಥಳಿಸುತ್ತಿರುವ ಕೃತ್ಯ ಅಪಾರ್ಟ್‌ಮೆಂಟ್‌ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಳಿಕ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಘಟನೆಯನ್ನು ಕಂಡ ಮುಂಬೈ ಪ್ರಾಣಿದಯಾ ಸಂಘಟನೆಯ ಸದಸ್ಯರು ನಾಯಿಯನ್ನು ಥಳಿಸಿದವರ ವಿರುದ್ಧ ವರ್ಲಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಇಬ್ಬರ ವಿರುದ್ಧ ಎಫ್ಐಆರ್‌ ದಾಖಲಾಗಿದೆ.

ಇನ್ನು ಈ ಘಟನೆಯನ್ನು ಹಲವರು ಖಂಡಿಸಿದ್ದು, ಬಾಲಿವುಡ್‌ ನಟಿ ಅನುಷ್ಕಾ ಶರ್ಮ ಕೂಡ ಇದಕ್ಕೆ ಧ್ವನಿಗೂಡಿಸಿದ್ದಾರೆ. ಶ್ವಾನದ ಮೇಲಿನ ಹಲ್ಲೆಯನ್ನು ಖಂಡಿಸಿ ತನ್ನ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಾಕಿರುವ ಅನುಷ್ಕಾ, “ಈ ಅಮಾನವೀಯ ಕೃತ್ಯವನ್ನು ನಮಗೆ ನಂಬಲಸಾಧ್ಯ. ಈಗ ಈ ನಾಯಿಗೆ ನ್ಯಾಯ ಕೊಡಿಸುವ ಸಮಯ ಬಂದಿದೆ’ ಎಂದು ಬರೆದುಕೊಂಡಿದ್ದಾರೆ. ಇನ್ನು ಅನುಷ್ಕಾ ಅವರ ನಡೆಗೆ ಹಲವು ಬಾಲಿವುಡ್‌ ಸ್ಟಾರ್ ಕೂಡ ಸಾಥ್‌ ನೀಡಿದ್ದು, ಸೋನಮ್‌ ಕಪೂರ್‌, ವಿವೇಕ್‌ ಅಗ್ನಿಹೋತ್ರಿ, ವರುಣ್‌ ಧವನ್‌ ಮೊದಲಾದವರು ಈ ಅಮಾನವೀಯ ಘಟನೆಯನ್ನು ಖಂಡಿಸಿದ್ದಾರೆ. ಸ್ಟಾರ್‌ಗಳು ಈ ವಿಚಾರವಾಗಿ ಸೋಶಿಯಲ್‌ ಮೀಡಿಯಾಗಳಲ್ಲಿ ಮಾತನಾಡುತ್ತಿದ್ದಂತೆ, ನಾಯಿಯ ಮೇಲಿನ ಥಳಿತದ ಘಟನೆ ಸಾಕಷ್ಟು ಸುದ್ದಿಯಾಗಿದ್ದಂತೂ ಸುಳ್ಳಲ್ಲ. ಒಟ್ಟಾರೆ ಅನುಷ್ಕಾ ಶರ್ಮ ಸೋಶಿಯಲ್‌ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್‌ ಒಂದು ಅವರಿಗೆ ಹ್ಯಾಟ್ಸಾಪ್‌ ಹೇಳುವಂತೆ ಮಾಡಿದ್ದು, ಅಭಿಮಾನಿಗಳು ಅನುಷ್ಕಾ ಶರ್ಮ ಕೆಲಸಕ್ಕೆ ಶಹಬ್ಟಾಸ್‌ ಗಿರಿ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.