ಖಾಕಿ ರಾಣಿ!


Team Udayavani, May 10, 2019, 5:50 AM IST

28

90ರ ದಶಕದಲ್ಲಿ ಬಾಲಿವುಡ್‌ನ‌ಲ್ಲಿ ಮಿಂಚಿದ್ದ ಸಿನಿಪ್ರಿಯರ ಮನಗೆದ್ದಿದ್ದ, ಬಳಿಕ ವೈವಾಹಿಕ ಜೀವನಕ್ಕೆ ಕಾಲಿಟ್ಟು ಒಂದಷ್ಟು ಸಮಯ ತೆರೆಮರೆಗೆ ಸರಿದಿದ್ದ ಅನೇಕ ನಟಿಯರು ಸದ್ಯ ಬಾಲಿವುಡ್‌ನ‌ಲ್ಲಿ ಭರ್ಜರಿಯಾಗಿ ಸೆಕೆಂಡ್‌ ಇನ್ನಿಂಗ್ಸ್‌ ಆರಂಭಿಸುತ್ತಿದ್ದಾರೆ. ಮಾಧುರಿ ದೀಕ್ಷಿತ್‌, ಜೂಹಿ ಚಾವ್ಲಾ, ಐಶ್ವರ್ಯಾ ರೈ ಹೀಗೆ ಸಾಲು ಸಾಲು ನಾಯಕ ನಟಿಯರು ಈಗಾಗಲೇ ಬಾಲಿವುಡ್‌ನ‌ಲ್ಲಿ ಮತ್ತೂಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗ ಈ ಸಾಲಿಗೆ ಮತ್ತೂಬ್ಬ ನಟಿಯ ಹೆಸರು ಸೇರ್ಪಡೆಯಾಗುತ್ತಿದೆ, ಅವರೇ ರಾಣಿ ಮುಖರ್ಜಿ.

ತನ್ನ ವಿಭಿನ್ನ ಪಾತ್ರಗಳ ಮೂಲಕ ಒಂದು ಕಾಲದಲ್ಲಿ ಬಾಲಿವುಡ್‌ ಸಿನಿಪ್ರಿಯರ ಹಾಟ್‌ ಫೇವರೆಟ್‌ ಹೀರೋಯಿನ್‌ ಎನಿಸಿಕೊಂಡಿದ್ದ ರಾಣಿ ಮುಖರ್ಜಿ, ಬಾಲಿವುಡ್‌ ನಿರ್ಮಾಪಕ ಆದಿತ್ಯ ಚೋಪ್ರಾ ಅವರನ್ನು ಮದುವೆಯಾದ ಬಳಿಕ ತೆರೆಮೇಲೆ ಕಾಣಿಸಿಕೊಳ್ಳುವುದು ಅಪರೂಪವಾಯಿತು. ಮದುವೆಯ ಬಳಿಕ ಸಿನಿಮಾದ ತೆರೆಮರೆಯ ಕೆಲಸಗಳಲ್ಲಿ ತೊಡಗಿಕೊಂಡ ರಾಣಿ, ನಟನೆಗಿಂತಲೂ ಹೆಚ್ಚಾಗಿ ತಮ್ಮ ಯಶ್‌ರಾಜ್‌ ಫಿಲಂಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿದ್ದ ಸಿನಿಮಾಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.

ಬಳಿಕ ಮರ್ದಾನಿ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುವ ಮೂಲಕ ರಾಣಿ ಬಾಲಿವುಡ್‌ನ‌ಲ್ಲಿ ಸೆಕೆಂಡ್‌ ಇನ್ನಿಂಗ್ಸ್‌ ಆರಂಭಿಸಿದ್ದರು. ಮರ್ದಾನಿ ಚಿತ್ರದಲ್ಲಿ ರಾಣಿ ಮುಖರ್ಜಿ ನಿರ್ವಹಿಸಿದ ಪಾತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪ್ರೊಡಕ್ಷನ್‌ ಕೆಲಸಗಳ ನಡುವೆಯೇ ಸ್ವಲ್ಪ ಸಮಯದ ಬಿಡುವಿನ ಬಳಿಕ, ಕಳೆದ ವರ್ಷ ಮತ್ತೂಮ್ಮೆ ಹಿಚಿ ಚಿತ್ರದ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬಂದಿದ್ದರು ರಾಣಿ ಮುಖರ್ಜಿ. ಈ ಚಿತ್ರ ಕೂಡ ಬಾಕ್ಸಾಫೀಸ್‌ನಲ್ಲಿ ಸಾಕಷ್ಟು ಸದ್ದು ಮಾಡಿದ್ದೂ ಅಲ್ಲದೇ ಆ ಬಹಳಷ್ಟು ಮೆಚ್ಚುಗೆಗೂ ಪಾತ್ರವಾಗಿತ್ತು.

ಈಗ ಮರ್ದಾನಿ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದ ಗೋಪಿ ಪುತ್ರನ್‌, ಮರ್ದಾನಿ 2 ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರದಲ್ಲೂ ರಾಣಿ ಮುಖರ್ಜಿ ಮತ್ತೂಮ್ಮೆ ರಾಜಸ್ಥಾನಿ ಪೊಲೀಸ್‌ ಅಧಿಕಾರಿಯ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಫ‌ಸ್ಟ್‌ಲುಕ್‌ ಹೊರಬಿದ್ದಿದೆ. ಚಿತ್ರದ ಫ‌ಸ್ಟ್‌ ಲುಕ್‌ಗೆ ಸೋಷಿಯಲ್‌ ಮೀಡಿಯಾಗಳಲ್ಲಿ ಭರ್ಜರಿ ರೆಸ್ಪಾನ್ಸ್‌ ಸಿಗುತ್ತಿದ್ದು, ರಾಣಿ ಮುಖರ್ಜಿ ಕೂಡ ಮರ್ದಾನಿ 2 ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ. ಸದ್ಯ ಮರ್ದಾನಿ 2 ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದ್ದು, ಇದೇ ವರ್ಷಾಂತ್ಯದೊಳಗೆ ಚಿತ್ರ ತೆರೆಗೆ ಬರಲಿದೆ. ಒಟ್ಟಾರೆ ಬಿಗ್‌ಸ್ಕ್ರೀನ್‌ ಮೇಲೆ ಸೆಕೆಂಡ್‌ ಇನ್ನಿಂಗ್ಸ್‌ ಶುರುಮಾಡಿರುವ ರಾಣಿ ಮುಖರ್ಜಿ ಸಿನಿ ಕೆರಿಯರ್‌ ಹೇಗಿರಲಿದೆ ಅನ್ನೋದು ಅನ್ನೋದು ಮರ್ದಾನಿ 2 ಚಿತ್ರ ರಿಲೀಸ್‌ ಆದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.