ಮತ್ತೆ ಶಿಲ್ಪಾ ಪ್ರವೇಶ
Team Udayavani, Jul 26, 2019, 5:17 AM IST
ಹಿಂದಿಯ ಬಾಜಿಗರ್ ಚಿತ್ರದ ಮೂಲಕ ಸಿನಿಪ್ರಿಯರಿಗೆ ಪರಿಚಯವಾದ ಮಂಗಳೂರು ಚೆಲುವೆ ಶಿಲ್ಪಾ ಶೆಟ್ಟಿ. ಸುಮಾರು ಒಂದೂವರೆ ದಶಕಗಳ ಕಾಲ ನಾಯಕ ನಟಿಯಾಗಿ ಹಿಂದಿ, ಕನ್ನಡ ಅಂಗಳದಲ್ಲಿ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿಕೊಂಡಾಕೆ. ಮೇ ಕಿಲಾಡಿ ಥೂ ಅನಾರಿ, ಜಾನ್ವರ್, ಧಡ್ಕನ್, ದಸ್ ಮೊದಲಾದ ಚಿತ್ರಗಳು ಶಿಲ್ಪಾಗೆ ಸಾಕಷ್ಟು ಹೆಸರು ಮತ್ತು ಜನಪ್ರಿಯತೆ ತಂದುಕೊಟ್ಟವು.
2009ರಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ವಿವಾಹವಾದ ಬಳಿಕ ಅಭಿನಯದಿಂದ ಉದ್ಯಮದತ್ತ ಮುಖ ಮಾಡಿದ ಶಿಲ್ಪಾ ಶೆಟ್ಟಿ , ಅಲ್ಲಿಯೂ ಕೂಡ ಸಕ್ಸಸ್‌ಫುಲ್ ಬ್ಯುಸಿನೆಸ್ ವುಮೆನ್ ಎನಿಸಿಕೊಂಡಿದ್ದರು. ಸದ್ಯ ಕಿರುತೆರೆ, ಚಿತ್ರ ನಿರ್ಮಾಣ, ಯೋಗ ಪ್ರಚಾರ, ಸಾಮಾಜಿಕ ಕೆಲಸಗಳು… ಹೀಗೆ ಸದಾ ಒಂದಲ್ಲ ಒಂದು ಕೆಲಸಗಳಲ್ಲಿ ಬ್ಯುಸಿಯಾಗಿರುವ ಶಿಲ್ಪಾ ಶೆಟ್ಟಿ ಶೀಘ್ರದಲ್ಲಿಯೇ ಮತ್ತೆ ಬಿಗ್ ಸ್ಕ್ರೀನ್ ಮೂಲಕ ಪ್ರೇಕ್ಷಕರಿಗೆ ದರ್ಶನ ಕೊಡಲಿದ್ದಾರಂತೆ.
ಹೌದು, 2014ರಲ್ಲಿ ತೆರೆಗೆ ಬಂದಿದ್ದ ದಿಶ್ ಕಿಯೋನ್ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಬಿಟ್ಟರೆ, ಶಿಲ್ಪಾ ಶೆಟ್ಟಿ ಮತ್ತೆ ಯಾವ ಚಿತ್ರಗಳಲ್ಲೂ ಇಲ್ಲಿಯವರೆಗೆ ಕಾಣಿಸಿಕೊಂಡಿಲ್ಲ.
ಆಗಾಗ್ಗೆ ಕಿರುತೆರೆಯ ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಷ್ಟೇ ತಮ್ಮನ್ನು ತಾವು ಸೀಮಿತ ಮಾಡಿಕೊಂಡಿದ್ದ ಶಿಲ್ಪಾ ಶೆಟ್ಟಿ, ಈ ಚಿತ್ರವೊಂದರ ಮುಖ್ಯ ಪಾತ್ರದಲ್ಲಿ ನಟಿಸುವ ಮೂಲಕ ಭರ್ಜರಿ ಕಂಬ್ಯಾಕ್ ಪಡೆಯಲು ಸಿದ್ಧತೆ ನಡೆಸಿದ್ದಾರೆ.
ಅಂದ ಹಾಗೆ, ದಿಲಿcತ್ ದೋಸಾಂಜ್ ಮತ್ತು ಯಾಮಿ ಗೌತಮ್ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿರುವ ಹರೂನ್ ನಿರ್ದೇಶನ ಮಾಡುತ್ತಿರುವ ಇನ್ನೂ ಹೆಸರಿಡದ ಹೊಸಚಿತ್ರದಲ್ಲಿ ಶಿಲ್ಪಾ ಬರಹಗಾರ್ತಿಯ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಇದು ಚಿತ್ರದ ಪ್ರಮುಖ ಪಾತ್ರವಾಗಿದ್ದು ಕತೆ ಕೇಳಿಯೇ ಶಿಲ್ಪಾ ಈ ಪಾತ್ರಕ್ಕೆ ಓಕೆ ಅಂದಿದ್ದಾರಂತೆ. ಚಿತ್ರತಂಡದ ಮೂಲಗಳ ಪ್ರಕಾರ, ಮುಂಬರುವ ಆಗಸ್ಟ್ ತಿಂಗಳಿನಿಂದ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗುತ್ತಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ, ಇದೇ ವರ್ಷಾಂತ್ಯಕ್ಕೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ ಎನ್ನಲಾಗುತ್ತಿದೆ.
ಒಟ್ಟಾರೆ, ಬಂಟರ ಹುಡುಗಿಯನ್ನ ಬಿಗ್‌ಸ್ಕ್ರೀನ್ ಮೇಲೆ ನೋಡಿ ದಶಕಗಳೇ ಆಯ್ತು ಎಂದು ಬೇಜಾರಿನಲ್ಲಿದ್ದ ಅಭಿಮಾನಿಗಳಿಗೆ ಶಿಲ್ಪಾ ಶೆಟ್ಟಿ ಗುಡ್‌ನ್ಯೂಸ್ ಕೊಟ್ಟಿದ್ದು, ಈ ಚಿತ್ರದಲ್ಲಿ ಶಿಲ್ಪಾ ಪಾತ್ರ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.