ಮೂಡಲಿ ಮನದಲಿ ಸುರಕ್ಷೆಯ ಭಾವನೆ


Team Udayavani, Feb 28, 2020, 4:50 AM IST

ego-26

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ದೇಶ ಭಾರತ. ಇಲ್ಲಿ ಮಹಿಳೆಯರು ವಿಜ್ಞಾನ, ತಂತ್ರಜ್ಞಾನ, ರಾಜಕೀಯ, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ. ಹಾಗಂತ ಅವರು ಸುರಕ್ಷಿತ ಭಾವನೆಯಲ್ಲಿ ಕೆಲಸಗಳನ್ನು ನಿರ್ವಹಿಸುತ್ತಾರೆಯೆ?

ಖಂಡಿತ ಇಲ್ಲ. ಮಹಿಳೆಯರ ಮೇಲೆ ದೌರ್ಜನ್ಯ, ಹಿಂಸೆ ನಡೆಯುತ್ತಲೇ ಇದೆ. ಮನುಕುಲದ ಅಮಾನವೀಯ, ಪೈಶಾಚಿಕ ಕ್ರೂರ ಲಕ್ಷಣಗಳಲ್ಲೊಂದಾದ ಅತ್ಯಾಚಾರವೆಂಬ ಪೆಡಂಭೂತವು ಇಂದು ಮಹಿಳೆಯರಿಗೆ ಭಾರತದಲ್ಲಿ ರಕ್ಷಣೆಯೇ ಇಲ್ಲವೇ ಎಂಬ ಪ್ರಶ್ನೆಗಳನ್ನೆತ್ತಿ ನಿಲ್ಲಿಸಿದೆ. ಭಾವನಾತ್ಮಕ ಸಂಬಂಧಗಳಲ್ಲಿ, ಆಧ್ಯಾತ್ಮಿಕ ಹಿನ್ನೆಲೆಯ ಸಂಸ್ಕಾರದಲ್ಲಿ ಮಹಿಳೆಯರಿಗೆ ಪೂಜನೀಯ ಸ್ಥಾನ ನೀಡಿರುವ ದೇಶ ಭಾರತ. ಆದರೆ, ವಾಸ್ತವದಲ್ಲಿ ಆಕೆಗೆ ಅಂಥ ಸ್ಥಾನ ಲಭಿಸುತ್ತಿದೆಯೆ? ಆಕೆ ಗೌರವ ಪಡೆಯುತ್ತಿದ್ದಾಳೆಯೇ ಎಂಬ ಪ್ರಶ್ನೆಗೆ ಉತ್ತರ ಸಕಾರಾತ್ಮಕವಾಗಿಲ್ಲ.

ಮಾನವ ನಾಗರಿಕನಾದಷ್ಟೂ, ಆಧುನಿಕನಾದಷ್ಟೂ ಹೆಣ್ಣಿನ ಹಕ್ಕು ಮತ್ತು ಸಮಾನತೆಯ ಪರಿಕಲ್ಪನೆಗಳನ್ನು ಗೌರವಿಸುವ ಬದಲು ಅವಳೊಂದಿಗೆ ಅನಾಗರಿಕವಾಗಿ ವ್ಯವಹರಿಸುತ್ತಿರುವುದು ಬೇಸರದ ವಿಷಯ.

ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದನ್ನು ನೋಡಿದಾಗ ಬೇಸರ ಹೆಚ್ಚುತ್ತದೆ. ರಾಷ್ಟ್ರೀಯ ಅಪರಾಧ ದಾಖಲೆ ಮಂಡಳಿ (ಎನ್‌ಸಿಆರ್‌ಬಿ) ದತ್ತಾಂಶ ಮಾಹಿತಿ ಇನ್ನೊಂದು ವಿಷಯವನ್ನು ಹೇಳುತ್ತದೆ. ಭಾರತದಲ್ಲಿ, ಮಹಿಳೆಯರು ಮಾತ್ರವಲ್ಲ, ಮಕ್ಕಳೂ ಸುರಕ್ಷಿತರಾಗಿಲ್ಲ ಎಂಬ ಭಯ ಮೂಡಿಸುವ ವಿಚಾರವದು. 2018ರಲ್ಲಿ ದೇಶದಲ್ಲಿ ಪ್ರತಿನಿತ್ಯ 109 ಮಕ್ಕಳ ಮೇಲೆ ಲೈಂಗಿಕ ದುರಾಚಾರ ಎಸಗಿರುವ ಆತಂಕಕಾರಿ ಸಂಗತಿ ಬಯಲಾಗಿದೆ. 2011ರಲ್ಲಿ ಥಾಮ್ಸನ್‌ ರಾಯಿಟರ್ಸ್‌ ಫೌಂಡೇಶನ್‌ ಒಂದು ಸಮೀಕ್ಷೆಯನ್ನು ಮಾಡಿ ಮಹಿಳೆಯರಿಗೆ ಸುರಕ್ಷಿತವಲ್ಲದ ಸ್ಥಳಗಳಲ್ಲಿ ಭಾರತವು ನಾಲ್ಕನೆಯ ಸ್ಥಾನದಲ್ಲಿದೆ ಎಂಬ ಆಘಾತಕಾರಿ ವಾಸ್ತವವನ್ನು ತೆರೆದಿಟ್ಟಿದೆ.

ಇಂಥ ಸ್ಥಿತಿಯಲ್ಲಿ ಹೆಣ್ಣಿನ ಅಸ್ಮಿತೆಯನ್ನು ಯಾವ ತಕ್ಕಡಿಯಿಂದ ಅಳೆಯುವುದು?
ಮಹಿಳೆಯರ ಮೇಲಿನ ದೌರ್ಜನ್ಯದಿಂದ ಭಾರತವು ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಬಾಲಕಿಯರು, ಯುವತಿಯರು, ಮಹಿಳೆಯರ ಬದುಕು ಅತಂತ್ರವಾಗಿದೆ. ಪರಂಪರಾಗತವಾಗಿ ಬೆಳೆದುಬಂದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಶತಶತಮಾನಗಳಿಂದ ಹೆಣ್ಣಿನ ಅಸ್ತಿತ್ವವನ್ನು ವಿರೋಧಿಸುತ್ತ ಬಂದಿರುವ ಸಾಮಾಜಿಕ ಸಂಸ್ಥೆಗಳು ಸಂಪ್ರದಾಯ, ಧಾರ್ಮಿಕ ಆಚರಣೆ, ಲಿಂಗ ಅಸಮಾನತೆಯ ಚೌಕಟ್ಟನ್ನು ಸೃಷ್ಟಿಸಿ- ಈ ಚೌಕಟ್ಟನ್ನು ಧಿಕ್ಕರಿಸಿ ಆಚೆ ಹೋಗಲು ಪ್ರಯತ್ನಿಸುವ ಹೆಣ್ಣನ್ನು ಮತ್ತೆ ಚೌಕಟ್ಟಿನೊಳಗೇ ತಳ್ಳುವ ಪ್ರಯತ್ನ ನಡೆಸುತ್ತಿದೆ. ಸ್ತ್ರೀಯರ ಮೇಲೆ ತನ್ನ ಅಧಿಕಾರ ಸ್ಥಾಪಿಸಿ, ಅವರ ಮೇಲೆ ಆಳ್ವಿಕೆ ನಡೆಸಬೇಕೆನ್ನುವ ಆಂತರಿಕ ಬಯಕೆಯಿಂದಾಗಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವಂತಿದೆ. ಹೆಣ್ಣಿನ ಬಗ್ಗೆ ಗಂಡಸಿಗಿರುವ ಕೀಳು ಮನೋಭಾವ, ಮಾಧ್ಯಮಗಳು ಹೆಣ್ಣನ್ನು ನಿರೂಪಿಸುವ ರೀತಿ, ಗೌರವಯುತವಾಗಿಯೇನೂ ಕಾಣಿಸುವುದಿಲ್ಲ.

ಮೈ ಪ್ರದರ್ಶನ ಮಾಡುವ ಉಡುಗೆ-ತೊಡುಗೆಗಳು ಅತ್ಯಾಚಾರಕ್ಕೆ ಕಾರಣ ಎನ್ನುವುದೊಂದು ಕ್ಷುಲ್ಲಕ ವಾದ. ಆದರೆ, ಎಳೆಯ ಮಕ್ಕಳ ಮೇಲೆಯೂ ಅತ್ಯಾಚಾರ ನಡೆದ ಪ್ರಕರಣಗಳನ್ನು ಗಮನಿಸಿದಾಗ, ಈ ವಾದದಲ್ಲಿ ಹುರುಳಿಲ್ಲ ಎಂಬ ಅಂಶ ಸ್ಪಷ್ಟವಾಗುತ್ತದೆ.

ಹಾಗಾದರೆ, ಹೆಣ್ಣನ್ನು ಅಗೌರವಯುತವಾಗಿ ನಡೆಸಿಕೊಳ್ಳ ದಂತೆ ಬಿಗಿ ಹಾಗೂ ಕಠಿಣ ಕಾನೂನು ಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲವೆ? ಶಿಕ್ಷಣ ವಂಚಿತ ಮಹಿಳೆಯರಿಗೆ ಅಕ್ಷರ ಕಲಿಸುವುದು, ಕಾನೂನಿನ ಅರಿವು ಮೂಡಿಸುವುದು, ಮಹಿಳೆ ಮತ್ತು ಮಕ್ಕಳಿಗೆ ಆಗುತ್ತಿರುವ ದೌರ್ಜನ್ಯ, ಮಾನಸಿಕ ಹಿಂಸೆ ಮತ್ತು ಅತ್ಯಾಚಾರಗಳಂತಹ ಘಟನೆಗಳ ಕುರಿತು ತಿಳಿ ಹೇಳಿ, ಅವರಲ್ಲಿ ಜಾಗೃತಿ ಮೂಡಿಸುವುದು ಇಂದಿನ ತುರ್ತು. ಸ್ವಾವಲಂಬನೆ ಜೊತೆಗೆ ಸಶಕ್ತ ಮಹಿಳೆಯರನ್ನಾಗಿ ಮಾಡುವ ಕ್ರಮಗಳನ್ನು ಕೈಗೊಳ್ಳುವುದರಿಂದ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬಹುದು. ಯಾವುದೇ ಸಮಸ್ಯೆಗಳನ್ನು “ಮಹಿಳೆಯರ ಸಮಸ್ಯೆ’ ಎಂದು ಪರಿಗಣಿಸದೇ ಅದು ಈ ಸಮಾಜದ ಸಮಸ್ಯೆ ಎಂದು ಪರಿಗಣಿಸಿ, ಸಹೃದಯ ಪುರುಷರು ಹೋರಾಟಗಳೊಡನೆ ಕೈ ಜೋಡಿಸಬೇಕು.

ಮಹಿಳಾ ಸಬಲೀಕರಣ ಮತ್ತು ಮಹಿಳಾ ಸಮಾನತೆಯ ಕುರಿತು ಅರಿವು ಮೂಡಿಸಿದಲ್ಲಿ ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಮುಂದೆ ಬರುವುದು ಸಾಧ್ಯ. ದೇಶಾದ್ಯಂತ ಮಹಿಳೆಯರು ಸಂಘಟಿತರಾಗಿ ಒಂದು ಸಮರ್ಥವಾದ ನೆಟ್‌ವರ್ಕ್‌ ರೂಪಿಸಿಕೊಂಡು ಸಮಸ್ಯೆಗೆ ಮುಖಾಮುಖೀಯಾಗಬೇಕು.

ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರದ ನೀತಿ- ನಿಯಮಗಳ ನಿರೂಪಣೆಯಲ್ಲಿ, ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಬಾಲ್ಯವಿವಾಹ, ಹೆಣ್ಣುಭ್ರೂಣಹತ್ಯೆ, ವರದಕ್ಷಿಣೆ ಪದ್ಧತಿ, ಅತ್ಯಾಚಾರ, ಹೆಣ್ಣುಮಕ್ಕಳ ಸಾಗಾಣಿಕೆ ಮತ್ತು ಮಾರಾಟ, ವೇಶ್ಯಾವಾಟಿಕೆ ಮುಂತಾದ ತೀವ್ರಗತಿಯ ಸಮಸ್ಯೆಗಳ ಬಗ್ಗೆ ಸರಕಾರ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕು.

ಒಟ್ಟಿನಲ್ಲಿ ಈ ರೀತಿಯ ದೌರ್ಜನ್ಯಗಳು ಅಂತ್ಯಗೊಳ್ಳಬೇಕಾದರೆ ಹೆಣ್ಣಿನ ಬಗ್ಗೆ ಸಮಾಜದ ದೃಷ್ಟಿಕೋನ ಬದಲಾಗಬೇಕಾಗಿದೆ. ಮಹಿಳೆಯರ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಮತ್ತು ಅದರ ಬಗ್ಗೆ ಅರಿವು, ಜಾಗೃತಿ ಮೂಡಿಸುವ ಕಾರ್ಯ ಅವಿರತವಾಗಿ ನಡೆಯಬೇಕಿದೆ.

ಸೌಮ್ಯಾ ಪ್ರಕಾಶ ತದಡಿಕರ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.