ಸುಷ್ಮಿತಾ ಸ್ವಯಂವರ


Team Udayavani, Aug 9, 2019, 5:34 AM IST

e-18

ಬಾಲಿವುಡ್‌ನ‌ಲ್ಲಿ ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚಾಗಿ ಇನ್ನಿತರ ವಿಷಯಗಳಿಗೆ ಸುದ್ದಿಯಾಗುತ್ತಿರುವ ನಟಿಯರ ಪೈಕಿ ಸುಶ್ಮಿತಾ ಸೇನ್‌ ಕೂಡ ಒಬ್ಬರು. ಅದರಲ್ಲೂ ಕಳೆದ ಒಂದು ವರ್ಷದಿಂದ ಸುಶ್ಮಿತಾ ಸೇನ್‌ ಮದುವೆ ವಿಚಾರ ಬಾಲಿವುಡ್‌ನ‌ಲ್ಲಿ ಸಾಕಷ್ಟು ಗುಲ್ಲು ಎಬ್ಬಿಸಿರುವುದಂತೂ ಸುಳ್ಳಲ್ಲ. ಈಗ ಸುಶ್ಮಿತಾ ಮದುವೆ ಬಗ್ಗೆ ಮತ್ತೂಂದು ಸುದ್ದಿ ಹರಿದಾಡುತ್ತಿದೆ. ಹೌದು, ಸದ್ಯ 42 ವರ್ಷ ವಯಸ್ಸಾದರೂ, ಇನ್ನೂ ಮದುವೆಯಾಗದೆ ಸಿನಿಮಾ, ಮಾಡಲಿಂಗ್‌, ರ್‍ಯಾಂಪ್‌ ವಾಕ್‌ ಅಂತಿದ್ದ ಸುಶ್ಮಿತಾ ಈಗ ದಿಢೀರನೆ ಮದುವೆ ಆಗುವ ಬಗ್ಗೆ ಪ್ಲಾನ್‌ ಮಾಡಿಕೊಳ್ಳುತ್ತಿದ್ದಾರಂತೆ. ಕಳೆದ ಎರಡು ವರ್ಷದಿಂದ ಮಾಡೆಲ್‌ ರೋಹ್ಮಾನ್‌ ಶಾಲ್‌ ಜೊತೆ ಡೇಟಿಂಗ್‌ನಲ್ಲಿದ್ದ ಸುಶ್ಮಿತಾ ಈಗ ಅದೇ ಬಾಯ್‌ ಫ್ರೆಂಡ್‌ ಜೊತೆ ಮದುವೆಯಾಗುವ ನಿರ್ಧಾರ ಮಾಡಿದ್ದಾರೆ ಎಂಬ ಸುದ್ದಿ ಬಾಲಿವುಡ್‌ನ‌ಲ್ಲಿ ಹರಿದಾಡುತ್ತಿದೆ.

ಅಂದ ಹಾಗೆ, ಈ ಹಿಂದೆ ಕೂಡ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್‌ ಹೆಸರು ಸಾಕಷ್ಟು ಜನರ ಜೊತೆ ತಳುಕು ಹಾಕಿಕೊಂಡಿತ್ತು. ಆದರೆ ಯಾವುದೂ ಮದುವೆಯವರೆಗೂ ಹೋಗಿರಲಿಲ್ಲ. ಈಗ ಸುಶ್ಮಿತಾ ಹೆಸರು ಮಾಡೆಲ್‌ ರೋಹ್ಮಾನ್‌ ಶಾನ್‌ ಜೊತೆ ತಳುಕು ಹಾಕಿ ಕೊಂಡಿದ್ದು, ಇಬ್ಬರೂ ಈ ವರ್ಷದ ಕೊನೆ ಯಲ್ಲಿ ಅಂದರೆ, ನವೆಂಬರ್‌ ಅಥವಾ ಡಿಸೆಂಬರ್‌ ವೇಳೆಗೆ ಹಸೆಮಣೆ ಏರಲು ಪ್ಲಾನ್‌ ಮಾಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇನ್ನೊಂದು ವಿಷಯವೆಂದರೆ, ಸುಶ್ಮಿತಾ ಸೇನ್‌ ಮತ್ತು ರೋಹ್ಮಾನ್‌ ಇಬ್ಬರ ನಡುವಿನ ವಯಸ್ಸಿನ ಅಂತರ ಕೂಡ ಈ ವೇಳೆ ಸಾಕಷ್ಟು ಚರ್ಚೆಯಾಗುತ್ತಿದೆ. ಸುಶ್ಮಿತಾ ಸೇನ್‌ ಅವರಿಗೆ 42 ವರ್ಷ. ಆದ್ರೆ ರೋಹ್ಮಾನ್‌ ಇನ್ನೂ 28 ವರ್ಷದ ಯುವಕ. ಇಬ್ಬರ ನಡುವೆ ಬರೋಬ್ಬರಿ 14 ವರ್ಷಗಳ ಅಂತರವಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಇತ್ತೀಚಿಗಷ್ಟೆ 35 ವರ್ಷದ ಪ್ರಿಯಾಂಕಾ ಚೋಪ್ರಾ 25 ವರ್ಷದ ನಿಕ್‌ ಜೋನಸ್‌ ಜೊತೆ ಮದುವೆಯಾದಾಗಲೂ ಇಬ್ಬರ ವಯಸ್ಸಿನ ಅಂತರ ಜೋರಾಗಿ ಚರ್ಚೆಯಾಗಿತ್ತು. ಆದರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸುಶ್ಮಿತಾ ಮತ್ತು ರೋಹ್ಮಾನ್‌ ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಿಶ್ಚಿತಾರ್ಥದ ವೇಳೆ ಉಂಗುರ ಧರಿಸಿದ್ದಾರೆ ಎನ್ನಲಾದ ರೋಹ್ಮಾನ್‌ ಜೊತೆ ಇರುವ ಸುಶ್ಮಿತಾ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಒಟ್ಟಾರೆ ಸುಶ್ಮಿತಾ ಸೇನ್‌ ಹಸೆಮಣೆ ಏರಿದ ಮೇಲಷ್ಟೇ ಮದುವೆಯ ಕುರಿತಾಗಿ ಹರಿದಾಡುತ್ತಿರುವ ಎಲ್ಲಾ ಗೊಂದಲಗಳಿಗೆ ತೆರೆ ಬೀಳಲಿದೆ.

ಟಾಪ್ ನ್ಯೂಸ್

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.