ಹಾಗಲಕಾಯಿ ಸವಿರುಚಿ


Team Udayavani, Feb 21, 2020, 4:58 AM IST

chitra-6

ಮಧುಮೇಹಿಗಳಿಗೆ ವರದಾನವೆಂದೇ ಕರೆಯುವ ಹಾಗಲಕಾಯಿ ಹಲವಾರು ಉತ್ತಮ ಅಂಶಗಳನ್ನೊಳಗೊಂಡಿದ್ದು ಇದರ ಸೇವನೆಯಿಂದ ರಕ್ತಶುದ್ದಿ ಹಾಗೂ ಚರ್ಮರೋಗಗಳು, ವ್ರಣಗಳು, ಕರುಳಿನಹುಣ್ಣು, ಹೊಟ್ಟೆಹುಣ್ಣು ಇತ್ಯಾದಿ ಸಮಸ್ಯೆಗಳಿದ್ದಲ್ಲಿ ಗಮನಾರ್ಹ ಸುಧಾರಣೆ ಕಂಡುಬರುವುದು.

ಹಾಗಲಕಾಯಿ ಮಸಾಲ ಫ್ರೈ
ಬೇಕಾಗುವ ಸಾಮಗ್ರಿ: ಹಾಗಲಕಾಯಿ- ಎರಡು, ಕೆಂಪು ಮೆಣಸಿನಪುಡಿ- ಒಂದು ಚಮಚ, ಹುಣಸೆಹಣ್ಣು- ಮೂರು ಚಮಚ, ಬೆಲ್ಲ- ಎಂಟು ಚಮಚ, ಗರಂಮಸಾಲ- ಒಂದು ಚಮಚ, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌ – ಒಂದು ಚಮಚ, ಅರಸಿನ- ಅರ್ಧ ಚಮಚ, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಹಾಗಲಕಾಯಿಯನ್ನು ಬಿಲ್ಲೆಯಾಕಾರದಲ್ಲಿ ಹೆಚ್ಚಿ, ಉಪ್ಪು ಬೆರೆಸಿ, ಹತ್ತು ನಿಮಿಷ ಇಡಿ. ನಂತರ, ಇದರಲ್ಲಿ ಬಿಟ್ಟ ನೀರಿನಿಂದ ಹಾಗಲಕಾಯಿಯನ್ನು ಬೇರ್ಪಡಿಸಿ. ಬಾಣಲೆಯಲ್ಲಿ ನಾಲ್ಕು ಚಮಚ ಎಣ್ಣೆ ಹಾಕಿ ಹಾಗಲಕಾಯಿಯನ್ನು ಹದ ಬೆಂಕಿಯಲ್ಲಿ ಬಾಡಿಸಬೇಕು. ನಂತರ, ಇದಕ್ಕೆ ಹುಣಸೆರಸ, ಬೆಲ್ಲ ಹಾಗೂ ಮೇಲೆ ತಿಳಿಸಿದ ಎಲ್ಲ ಸಾಮಗ್ರಿಗಳನ್ನು ಹಾಕಿ ಸಣ್ಣ ಉರಿಯಲ್ಲಿ ಮಗುಚುತ್ತ ಇದ್ದು ಚೆನ್ನಾಗಿ ಹಾಗಲಕಾಯಿಯ ಜೊತೆ ಸೇರಿಕೊಳ್ಳುವಂತೆ ಮಾಡಿ, ಒಲೆಯಿಂದ ಇಳಿಸಿ.

ಹಾಗಲಕಾಯಿ ಸಾಸಿವೆ
ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಹಾಗಲಕಾಯಿ- ಅರ್ಧ ಕಪ್‌, ತೆಂಗಿನತುರಿ- ಒಂದು ಕಪ್‌, ಸಾಸಿವೆ- ಒಂದು ಚಮಚ, ಹಸಿಮೆಣಸು- ಒಂದು, ಮೊಸರು- ಒಂದು ಕಪ್‌, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಬಾಣಲೆಗೆ ಎರಡು ಚಮಚ ಎಣ್ಣೆ ಹಾಕಿ, ಕಾದ ಕೂಡಲೇ ಹೆಚ್ಚಿಟ್ಟ ಹಾಗಲಕಾಯಿಯನ್ನು ಹಾಕಿ, ಸಣ್ಣ ಉರಿಯಲ್ಲಿ ರುಚಿಗೆ ಬೇಕಷ್ಟು ಉಪ್ಪು ಸೇರಿಸಿ ಬಾಡಿಸಿ. ತೆಂಗಿನತುರಿಗೆ ಸಾಸಿವೆ, ಹಸಿಮೆಣಸಿನಕಾಯಿ ಮತ್ತು ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ನಂತರ, ಇದಕ್ಕೆ ಮೊಸರು ಹಾಗೂ ಬಾಡಿಸಿಟ್ಟ ಹಾಗಲಕಾಯಿ ಮತ್ತು ಬೇಕಷ್ಟು ನೀರು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ.
ಹಾಗಲಕಾಯಿ ವಿದ್‌ ದಾಳಿಂಬೆ ಸಲಾಡ್‌

ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಹಾಗಲಕಾಯಿ- ಅರ್ಧ ಕಪ್‌, ತೆಂಗಿನತುರಿ- ನಾಲ್ಕು ಚಮಚ, ಕೊತ್ತಂಬರಿಸೊಪ್ಪು- ನಾಲ್ಕು ಚಮಚ, ಹಸಿಮೆಣಸಿನಕಾಯಿ- ಒಂದು, ಕ್ಯಾರೆಟ್‌ತುರಿ- ನಾಲ್ಕು ಚಮಚ, ದಾಳಿಂಬೆ- ಎಂಟು ಚಮಚ, ಮೊಳಕೆ ಮೆಂತೆ- ನಾಲ್ಕು ಚಮಚ, ಲಿಂಬೆರಸ ಮತ್ತು ಉಪ್ಪು ರುಚಿಗೆ ಬೇಕಷ್ಟು.

ತಯಾರಿಸುವ ವಿಧಾನ: ಹಾಗಲಕಾಯಿಗೆ ಉಪ್ಪು ಬೆರೆಸಿದ ಹತ್ತು ನಿಮಿಷದ ನಂತರ ರಸ ತೆಗೆದು ಬದಿಗಿರಿಸಿ. ಬಾಣಲೆಗೆ ಎರಡು ಚಮಚ ಎಣ್ಣೆ ಹಾಕಿ ಹಾಗಲಕಾಯಿಯನ್ನು ಹಾಕಿ, ಬಾಡಿಸಿ, ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ತೆಂಗಿನತುರಿಗೆ ಕೊತ್ತಂಬರಿಸೊಪ್ಪು ಮತ್ತು ಹಸಿಮೆಣಸಿನಕಾಯಿ ಸೇರಿಸಿ ನೀರು ಸೇರಿಸದೆ ಪುಡಿ ಮಾಡಿ ಮಿಕ್ಸಿಂಗ್‌ ಬೌಲ್‌ಗೆ ಸೇರಿಸಿ. ನಂತರ, ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಸೇರಿಸಿ, ಚೆನ್ನಾಗಿ ಮಿಶ್ರಮಾಡಿ, ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ.

ಹಾಗಲಕಾಯಿ ಚಿಪ್ಸ್‌
ಬೇಕಾಗುವ ಸಾಮಗ್ರಿ: ಹಾಗಲಕಾಯಿ- ಎರಡು, ನನೆಸಿದ ಬೆಳ್ತಿಗೆ ಅಕ್ಕಿ- ಒಂದು ಕಪ್‌, ಕೆಂಪು ಮೆಣಸು- ಐದು, ಹುಣಸೆಹಣ್ಣು- ಎರಡು ಚಮಚ, ಧನಿಯಾ- ಒಂದು ಚಮಚ, ಜೀರಿಗೆ- ಅರ್ಧ ಚಮಚ, ಇಂಗು- ಒಂದು ಚಮಚ, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಹಾಗಲಕಾಯಿಯನ್ನು ಬಿಲ್ಲೆಯಾಕಾರದಲ್ಲಿ ಹೆಚ್ಚಿ ಉಪ್ಪು ಬೆರೆಸಿ ಹತ್ತು ನಿಮಿಷ ಬಿಟ್ಟು, ಇದರಲ್ಲಿಯ ಕಹಿನೀರು ಬೇರ್ಪಡಿಸಿ. ಅಕ್ಕಿಗೆ ಮೆಣಸು, ಧನಿಯ, ಹುಣಸೆ, ಇಂಗು, ಜೀರಿಗೆ ಸೇರಿಸಿ ನುಣ್ಣಗೆ ರುಬ್ಬಿ, ಬಜ್ಜಿ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ನಂತರ, ತೆಗೆದಿರಿಸಿದ ಹಾಗಲಕಾಯಿಯನ್ನು ಇದರಲ್ಲಿ ಮುಳುಗಿಸಿ ಕಾದ ಎಣ್ಣೆಯಲ್ಲಿ ಚಿಪ್ಸ್‌ ಕರಿಯಿರಿ. ಬಹಳ ರುಚಿಯಾಗಿದ್ದು, ಊಟಕ್ಕೆ ಸಾಥ್‌ಕೊಡಬಲ್ಲದು.

ಗೀತಸದಾ

ಟಾಪ್ ನ್ಯೂಸ್

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.