ಕಾಶ್ಮೀರದಲ್ಲಿ ಟ್ರಕ್ ನಲ್ಲಿ ಬಂದಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Team Udayavani, Dec 28, 2022, 9:17 AM IST
ಶ್ರೀನಗರ: ಭದ್ರತಾ ಪಡೆ ಭೀಕರ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಎನ್ ಕೌಂಟರ್ ಮಾಡಿದ್ದಾರೆ ಎಂದು ವರದಿಯಾಗಿದೆ.
ಬುಧವಾರ ಮುಂಜಾನೆ ಜಮ್ಮು ಕಾಶ್ಮೀರದ ಸಿದ್ರಾ ಪ್ರದೇಶದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಭದ್ರತಾ ಪಡೆ ಸಿಬ್ಬಂದಿಗಳು ಉಗ್ರರತ್ತ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಕೆಲ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿಗಳು ಎನ್ ಕೌಂಟರ್ ಮಾಡಿದ್ದಾರೆ.
ಪೊಲೀಸರು ಸಂಶಯಗೊಂಡು ಟ್ರಕ್ ವೊಂದನ್ನು ಸಿದ್ರಾ ಬಳಿ ನಿಲ್ಲಿಸಿ ಪರಿಶೀಲಿಸಿದಾಗ ಅದರ ಒಳಗಡೆ ಉಗ್ರರು ಅಡಗಿರುವುದು ಪತ್ತೆಯಾಗಿದೆ. ಸಿಬ್ಬಂದಿಗಳ ಮೇಲೆ ಇಬ್ಬರು ಉಗ್ರರು ಗುಂಡು ಹಾರಿಸಲು ಮುಂದಾಗಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿಗಳು ಗುಂಡು ಹಾರಿಸಿ ನಾಲ್ವರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಎಡಿಜಿಪಿ ಮುಕೇಶ್ ಸಿಂಗ್ ಎನ್ ಐಗೆ ಹೇಳಿದ್ದಾರೆ.
ಇತ್ತೀಚೆಗೆ ಪೂಂಚ್ ನಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ಸಿಬ್ಬಂದಿಗಳು ಜಂಟಿ ಕಾರ್ಯಚರಣೆ ನಡೆಸಿ ಉಗ್ರರನ್ನು ಸೆರೆ ಹಿಡಿದು ಅವರಿಂದ ಪಿಸ್ತೂಲ್ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು.
Encounter breaks out in Jammu; 2 terrorists trapped
Read @ANI Story | https://t.co/qKQzYfEkQd#Jammu #Encounter #Terrorists pic.twitter.com/GHiVPYr0ac
— ANI Digital (@ani_digital) December 28, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.