Balaramana Dinagalu; ಮತ್ತೆ ಭೂಗತ ಲೋಕದಲ್ಲಿ ಕೆ.ಎಂ ಚೈತನ್ಯ


Team Udayavani, Feb 8, 2024, 6:25 PM IST

Balaramana Dinagalu

“ಆ ದಿನಗಳು’ ಚಿತ್ರ ನಿರ್ದೇಶನ ಮಾಡಿರುವ ಕೆ.ಎಂ. ಚೈತನ್ಯ ಈಗ ಮತ್ತೂಂದು ದಿನಗಳನ್ನು ತೋರಿಸಲು ಹೊರಟಿದ್ದಾರೆ. ಈ ಬಾರಿ ಮತ್ತೂಮ್ಮೆ ಭೂಗತಲೋಕದ ಕಥೆಯನ್ನೇ ಆಯ್ಕೆ ಮಾಡಿಕೊಂಡಿರುವ ಚೈತನ್ಯ ಅವರ ಚಿತ್ರಕ್ಕೆ ವಿನೋದ್‌ ಪ್ರಭಾಕರ್‌ ನಾಯಕರಾಗಿದ್ದಾರೆ.

ಈ ಚಿತ್ರವನ್ನು ಶ್ರೇಯಸ್‌ ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅನಾವರಣಗೊಳಿಸಿ, ಚಿತ್ರತಂಡಕ್ಕೆ ಶುಭಕೋರಿದರು. ಚಿತ್ರಕ್ಕೆ “ಬಲರಾಮನ ದಿನಗಳು’ ಎಂದು ಟೈಟಲ್‌ ಇಡಲಾಗಿದೆ.

“ಸಿನಿಮಾ ನಿರ್ಮಾಣ ಮಾಡಬೇಕೆಂಬುದು ನನ್ನ ಕನಸು. ಆ ಕನಸಿಗೆ ನನ್ನ ತಂದೆ, ತಾಯಿ ಮತ್ತು ಸಹೋದರ ಶಕ್ತಿ ತುಂಬುತ್ತಿದ್ದಾರೆ. ವಿನೋದ್‌ ಪ್ರಭಾಕರ್‌ ಅವರು ನನ್ನ ಚಿತ್ರರಂಗದ ಗುರುಗಳು. ಅವರ ಸಹಕಾರದಿಂದ ನಾನು ಪದ್ಮಾವತಿ ಫಿಲಂಸ್‌ ಎಂಬ ಸಂಸ್ಥೆ ಹುಟ್ಟುಹಾಕಿ ಈ ಚಿತ್ರ ನಿರ್ಮಿಸುತ್ತಿದ್ದೇನೆ’ ಎಂದರು ನಿರ್ಮಾಪಕ ಶ್ರೇಯಸ್‌.

ನಟ ವಿನೋದ್‌ ಪ್ರಭಾಕರ್‌ ಮಾತನಾಡಿ, “ನನಗೆ ಈ ಸಂಸ್ಥೆಯವರು ಟೈಗರ್‌ ಎಂಬ ಬಿರುದು ಕೊಟ್ಟಿದ್ದಾರೆ. ನನ್ನ ಅಭಿನಯದ ಮೂರು ಚಿತ್ರಗಳು ಬಿಡುಗಡೆಗೆ ಸಿದ್ಧವಾಗುತ್ತಿದೆ. ಚೈತನ್ಯ ಅವರ “ಆ ದಿನಗಳು’ ಚಿತ್ರ ನೋಡಿದಾಗಿನಿಂದ ನಾನು ಅವರ ಅಭಿಮಾನಿ. ಅವರ ಜೊತೆಗೆ ಕೆಲಸ ಮಾಡಬೇಕು ಎಂಬ ಆಸೆ ಇತ್ತು. ಅದು ಈಗ ಈಡೇರಿದೆ. ಅವರು ಸೃಷ್ಟಿ ಮಾಡಿರುವ ಬಲರಾಮನ ಪಾತ್ರಕ್ಕೆ, ಪ್ರಾಣ ಒತ್ತೆಯಿಟ್ಟು, ಬೆವರು-ರಕ್ತ ಹರಿಸಿ ಅದಕ್ಕೆ ನ್ಯಾಯ ಸಲ್ಲಿಸುತ್ತೇನೆ’ ಎಂದರು ನಾಯಕ ವಿನೋದ್‌ ಪ್ರಭಾಕರ್‌.

ನಿರ್ದೇಶಕ ಕೆ.ಎಂ.ಚೈತನ್ಯ ಮಾತನಾಡಿ, “ನಾನು ನಿರ್ದೇಶಿಸಿರುವ ಸಿನಿಮಾಗಳಲ್ಲಿ ಪ್ರತ್ಯಕ್ಷವಾಗಿ ಅಲ್ಲದಿದ್ದರೂ, ಪರೋಕ್ಷವಾಗಿ ಸಂದೇಶ ಹೇಳಿದ್ದೇನೆ. ಇದರಲ್ಲೂ ಅದು ಮುಂದುವರೆಯುತ್ತದೆ. ಈ ಚಿತ್ರ ಆಗುತ್ತಿರುವುದಕ್ಕೆ ಮುಖ್ಯ ಕಾರಣ ಶ್ರೇಯಸ್‌. ಈ ಕಥೆ ಆಯ್ಕೆ ಮಾಡಿದ್ದು ಅವರು. ಭೂಗತಲೋಕದ ಬಗ್ಗೆ ಸಾಕಷ್ಟು ಕಥೆಗಳನ್ನು ಮಾಡಿದ್ದೆ. ಅದರಲ್ಲಿ ಯಾವ ಕಥೆ ಮಾಡಬೇಕು ಅಂತ ಹೇಳಿದ್ದು ಅವರೆ. ಜೊತೆಗೆ ಬಹಳ ವರ್ಷಗಳಿಂದ ವಿನೋದ್‌ ಪ್ರಭಾಕರ್‌ ಜೊತೆಗೆ ಚಿತ್ರ ಮಾಡುವ ಆಸೆ ಇತ್ತು. ಅದಕ್ಕೆ ಪೂರಕವಾಗಿ ಕಥೆ ಸಿಕ್ಕಿದೆ. ಈ ಚಿತ್ರಕ್ಕೆ ಅವರು ಬಹಳ ಅತ್ಯುತ್ತಮ ಆಯ್ಕೆ. ಇದು ಭೂಗತ ಲೋಕದ ಸಿನಿಮಾ. ಭೂಗತ ಲೋಕದ ಜೊತೆಗೆ ಸಮಾಜ, ರಾಜಕೀಯ ಹೀಗೆ ಎಲ್ಲಾ ಆಯಾಮಗಳು ಇರುತ್ತವೆ. ಚಿತ್ರದ ಬಗ್ಗೆ ಈಗಲೇ ಹೆಚ್ಚು ಹೇಳುವುದು ಕಷ್ಟ. ನಿಜಜೀವನದ ಕಥೆ ಆಧರಿಸಿದ ಕಾಲ್ಪನಿಕ ಚಿತ್ರ. ಇದು ಯಾವುದೇ ವ್ಯಕ್ತಿಯ ಕುರಿತಾದ ಚಿತ್ರ ಅಲ್ಲ. ಇದರಲ್ಲಿ ಮನರಂಜನೆ ಇರುತ್ತದೆ. ಇಡೀ ಕುಟುಂಬ ನೋಡುವ ಚಿತ್ರ’ ಎನ್ನುವುದು ಚೈತನ್ಯ ಮಾತು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.