ಕಾರು ಮಾರಾಟದಲ್ಲಿ ಗಣನೀಯ ಏರಿಕೆ; ಕಂಪನಿಗಳಲ್ಲಿ ಒಡಮೂಡಿದ ಹೊಸ ಉತ್ಸಾಹ
Team Udayavani, Jun 1, 2022, 10:42 PM IST
ನವದೆಹಲಿ: ದೇಶದ ಅಗ್ರ ಕಾರು ಮಾರಾಟ ಕಂಪನಿಗಳಾದ ಮಾರುತಿ ಸುಝುಕಿ, ಟಾಟಾ, ಹೋಂಡಾ ಹಾಗೂ ಹುಂಡೈ ಇಂಡಿಯಾ ಕಂಪನಿಗಳ ಕಾರುಗಳು ಮೇ ತಿಂಗಳಲ್ಲಿ ಗಣನೀಯ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ಇದು ಕಂಪನಿಗಳಲ್ಲಿ ಹೊಸ ಉತ್ಸಾಹಕ್ಕೆ ಕಾರಣವಾಗಿದೆ.
ಅದರಲ್ಲೂ ಅತಿ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಹೆಗ್ಗಳಿಕೆ ಮಾರುತಿ ಸುಝಕಿ ಕಂಪನಿಯದ್ದಾಗಿದೆ. ಕಳೆದ ತಿಂಗಳು ಈ ಕಂಪನಿ, 1.28 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ. ಜೊತೆಗೆ, ಮೇ ತಿಂಗಳಲ್ಲಿ ತನ್ನ ಇತಿಹಾಸದಲ್ಲೇ ಅತಿ ಹೆಚ್ಚು ಕಾರುಗಳನ್ನು (27,191) ವಿದೇಶಕ್ಕೆ ರಫ್ತು ಮಾಡಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಮಾರುತಿ, 46.5 ಲಕ್ಷ ಕಾರುಗಳನ್ನು ಮಾರಾಟ ಮಾಡಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷದ ಮಾರಾಟ ಗಣನೀಯವಾಗಿ ಹೆಚ್ಚಾಗಿರುವುದು ಕಂಡುಬಂದಿದೆ. ಇನ್ನು, ಟೊಯೊಟಾ ಕಂಪನಿಯೊಂದಿಗೆ ಮಾಡಿಕೊಂಡಿರುವ ಒಪ್ಪಂದದಡಿ, 6,222 ಕಾರುಗಳನ್ನು ಆ ಕಂಪನಿಗೆ ನೀಡಿದೆ.
ಅತ್ತ, ಹೋಂಡಾ ಕಂಪನಿಯು ಮೇ ತಿಂಗಳಲ್ಲಿ 8,188 ಕಾರುಗಳನ್ನು ಮಾರಾಟ ಮಾಡಿದ್ದರೆ, ವಿದೇಶಕ್ಕೆ 1,997 ಕಾರುಗಳನ್ನು ರಫ್ತು ಮಾಡಿರುವುದಾಗಿ ತಿಳಿಸಿದೆ. ಕಳೆದ ಮೇ ತಿಂಗಳಲ್ಲಿ ಹೋಂಡಾ ಕಂಪನಿಯು ಕೇವಲ 2,032 ಕಾರುಗಳನ್ನು ಮಾರಾಟ ಮಾಡಿತ್ತು.
ಇನ್ನು, ಹುಂಡೈ ಇಂಡಿಯಾ ಕಂಪನಿಯು, ಮೇ ತಿಂಗಳಲ್ಲಿ 51,263 ಕಾರುಗಳನ್ನು ಮಾರಾಟ ಮಾಡಿರುವುದಾಗಿ ಹೇಳಿದೆ. ಕಳೆದ ವರ್ಷದ ಮೇನಲ್ಲಿ 30,703 ಕಾರುಗಳನ್ನು ಮಾರಾಟ ಮಾಡಿದ್ದು, ಅದಕ್ಕೆ ಹೋಲಿಸಿದರೆ ಈ ವರ್ಷ ಮೇನಲ್ಲಿ ಶೇ. 67ರಷ್ಟು ವೃದ್ಧಿಯಾಗಿದೆ ಎಂದು ಹೇಳಿದೆ.
ಟಾಟಾ ಹೊಸ ದಾಖಲೆ
ಟಾಟಾ ಕಂಪನಿ ಕೂಡ ಮೇ ತಿಂಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಿರುವುದಾಗಿ ತಿಳಿಸಿದೆ. ಪ್ಯಾಸೆಂಜರ್ ವಾಹನಗಳ ವಿಭಾಗದಲ್ಲಿ 43,341 ಕಾರುಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷದ ಮೇ ತಿಂಗಳಿಗೆ ಹೋಲಿಸಿದರೆ ಈಗಾಗಿರುವ ಮಾರಾಟ ಶೇ. 185ರಷ್ಟು ಹೆಚ್ಚಾಗಿದ್ದು ಇದೊಂದು ದಾಖಲೆಯಾಗಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.