ಭಾರತೀಯ ಗ್ರಾಹಕರಿಗೆ ಎರಡು ಬಂಪರ್ ಆಫರ್ ಘೋಷಿಸಿದ ಏರ್ ಟೆಲ್
Team Udayavani, May 17, 2021, 2:41 PM IST
ದೇಶದಲ್ಲಿ ಕೊವಿಡ್ -19 ಸಾಂಕ್ರಾಮಿಕ ಎರಡನೇ ಅಲೆಯು ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರಿಗೆ ಉಪಯೋಗವಾಗಲೆಂದು ಟೆಲಿಕಾಂ ಸಂಸ್ಥೆ ಭಾರತೀಯ ಏರ್ ಟೆಲ್ ಎರಡು ಆಫರ್ ಗಳನ್ನು ಘೋಷಿಸಿದೆ.
ಏರ್‌ಟೆಲ್ 49ರೂ. ಉಚಿತ ರಿಚಾರ್ಜ್ :
ಭಾರ್ತಿ ಏರ್‌ಟೆಲ್ ಟೆಲಿಕಾಂನ 49ರೂ. ಪ್ಯಾಕ್ ರಿಚಾರ್ಜ್ ಮಾಡಿಕೊಂಡರೆ 38 ರೂ. ಟಾಕ್‌ಟೈಮ್ ಸಿಗಲಿದೆ. ಮತ್ತು 100 ಎಂಬಿ ಡೇಟಾ ಸೌಲಭ್ಯ ಸಿಗಲಿದ್ದು, 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಪ್ಯಾಕ್ ಅನ್ನು ಬಳಕೆದಾರರಿಗೆ ಏರ್‌ಟೆಲ್ ಯಾವುದೇ ಶುಲ್ಕವಿಲ್ಲದೆ ನೀಡುತ್ತಿದೆ.
79ರೂ. ಪ್ಯಾಕ್ :
ಈ ಡಬಲ್ ಕೂಪನ್ ಆಫರ್ ಮೂಲಕ 79 ರೂಪಾಯಿಗಳ ರಿಚಾರ್ಜ್ ಮಾಡಿದರೆ, ಏರ್‌ಟೆಲ್ ಉಚಿತವಾಗಿ 79 ರೂಪಾಯಿ ರಿಚಾರ್ಜ್ ಮಾಡಿಕೊಡಲಿದೆ. ಅಂದರೆ ಈ ಯೋಜನೆಯಡಿ 79ರೂ. ಪ್ಯಾಕ್ ರೀಚಾರ್ಜ್ ಮಾಡಿಸಿದರೆ 128ರೂ. ಮೌಲ್ಯದ ಟಾಕ್‌ಟೈಮ್ ಮತ್ತು 200MB ಡೇಟಾದೊಂದಿಗೆ ದೊರೆಯಲಿದೆ. ಈ ಯೋಜನೆ 28 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಪಡೆದಿದೆ.
ಲಾಕ್‌ಡೌನ್‌ಗಳಿಂದಾಗಿ ಹಣಕಾಸಿನ ತೊಂದರೆಗಳನ್ನು ಎದುರಿಸುತ್ತಿರುವ ಕಡಿಮೆ-ಆದಾಯದ ಗ್ರಾಹಕರಿಗೆ ಹಾಗೂ ಆನ್‌ಲೈನ್‌ನಲ್ಲಿ ತಮ್ಮ ಫೋನ್‌ಗಳನ್ನು ಹೇಗೆ ರೀಚಾರ್ಜ್ ಮಾಡುವುದನ್ನು ತಿಳಿದಿಲ್ಲದ ಗ್ರಾಹಕರಿಗೆ ಏರ್‌ಟೆಲ್ ಟೆಲಿಕಾಂ ಉಚಿತ ರೀಚಾರ್ಜ್ ಕೊಡುಗೆ ನೀಡಿದೆ. ಈ ಮೂಲಕ ಗ್ರಾಹಕರು ಅವರ ಪ್ರೀತಿಪಾತ್ರರೊಂದಿಗೆ ಕರೆ ಮಾಡಲು ಮತ್ತು ಸಂಪರ್ಕಿಸಲು ಸಾಧ್ಯವಾಗಿಸುವುದಾಗಿದೆ. ಈ ಯೋಜನೆಯೂ ಮುಂದಿನ ವಾರದಿಂದ ಶುರುವಾಗಲಿದೆ ಎಂದು ಭಾನುವಾರ ಏರ್ ಟೆಲ್ ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.