ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ
ತ್ವರಿತ ನಿರ್ಧಾರ, ತ್ವರಿತ ಅನುಷ್ಠಾನಕ್ಕೆ ಒತ್ತು ನೀಡಲು ನಿರ್ಧಾರ
Team Udayavani, Oct 21, 2021, 5:45 AM IST
ನವದೆಹಲಿ: ಪ್ರತಿಯೊಬ್ಬ ನಾಗರಿಕರ ಜನನ ಪ್ರಮಾಣ ಪತ್ರ, ನಾನಾ ಯೋಜನೆಗಳ ಪ್ರಮಾಣಪತ್ರಗಳು ಒಂದೇ ವೇದಿಕೆಯಲ್ಲಿ ನಾಗರಿಕರಿಗೆ ಲಭ್ಯವಾಗುವಂತೆ ಮಾಡಲು ಹೊಸ ವ್ಯವಸ್ಥೆಯೊಂದನ್ನು ರೂಪಿಸಲು ಕೇಂದ್ರ ಸರ್ಕಾರ 60 ಅಂಶಗಳ ಕಾರ್ಯಸೂಚಿಯನ್ನು ನಿರ್ಧರಿಸಿರುವ ಬೆನ್ನಲ್ಲೇ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉಪಲಬ್ಧತೆಯನ್ನು ಗಣನೀಯವಾಗಿ ಹೆಚ್ಚಿಸಲು ಮತ್ತೊಂದು ಹೆಜ್ಜೆ ಇಡಲಾಗಿದೆ.
ಒಟ್ಟಾರೆ ದೇಶೀಯ ಉತ್ಪಾದನೆಗೆ (ಜಿಡಿಪಿ) ಮಾಹಿತಿ ತಂತ್ರಜ್ಞಾನ ಕ್ಷೇತ್ರದಿಂದ ಬರುತ್ತಿರುವ ದೇಣಿಗೆಯನ್ನು ಗಣನೀಯವಾಗಿ ಹೆಚ್ಚಿಸಲು, ಆ ಕ್ಷೇತ್ರದಲ್ಲಿ ತ್ವರಿತ ನಿರ್ಧಾರ, ತ್ವರಿತ ಅನುಷ್ಠಾನ, ಪರಿಣಾಮಕಾರಿ ಆಡಳಿತವನ್ನು ನೀಡುವುದು ಹಾಗೂ ಹೊಸ ಸ್ಟಾರ್ಟ್ ಅಪ್ ಗಳ ಬೆಳವಣಿಗೆಗಳಿಗೆ ಮತ್ತಷ್ಟು ಪೂರಕವಾದ ವಾತಾವರಣವನ್ನು ಒದಗಿಸಲು ತೀರ್ಮಾನಿಸಲಾಗಿದೆ.
ಹೆಚ್ಚೆಚ್ಚು ಸಂಗ್ರಹವಾಗಿರುವ ದತ್ತಾಂಶ ಕ್ರೋಢೀಕರಣವನ್ನು ವಿವಿಧ ಯೋಜನೆಗಳಲ್ಲಿ, ಪರಿಣಾಮಕಾರಿಯಾಗಿ ಬಳಸುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಧಾನ ಮಾಹಿತಿ ಅಧಿಕಾರಿಗಳನ್ನು (ಸಿಐಒ) ಹಾಗೂ ಮುಖ್ಯ ತಾಂತ್ರಿಕ ಅಧಿಕಾರಿಗಳನ್ನು (ಸಿಟಿಒ) ನೇಮಿಸಲು ನಿರ್ಧರಿಸಲಾಗಿದೆ.
ಈ ಮೂಲಕ, ಈ ಕ್ಷೇತ್ರದಲ್ಲಿ ಬಂಡವಾಳ ಹೂಡುವ ಪ್ರತಿಯೊಬ್ಬರಿಗೂ ಸರ್ಕಾರ ಯೋಜನೆಗಳು, ಸವಲತ್ತುಗಳು ತ್ವರಿತವಾಗಿ, ಕ್ರಮಬದ್ಧವಾಗಿ ಸಿಗುವಂತೆ ಮಾಡಲು ನಿರ್ಧರಿಸಲಾಗಿದೆ. ಜಿಯೋಗ್ರಾಫಿಕ್ ಇನಾರ್ಮೇಷನ್ ಸಿಸ್ಟಂ (ಜಿಐಎಸ್) ಮ್ಯಾಪಿಂಗ್ ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿ, ದೇಶದ ಒಟ್ಟಾರೆ ದೇಶೀಯ ಉತ್ಪಾದನೆಯನ್ನು (ಜಿಡಿಪಿ) ಗಣನೀಯ ಮಟ್ಟಕ್ಕೆ ಏರಿಸುವುದು ಮತ್ತೂಂದು ಉದ್ದೇಶವಾಗಿದೆ.
ಇದನ್ನೂ ಓದಿ:ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ
“ಕರ್ಮಯೋಗಿ’ಗೆ ಮತ್ತಷ್ಟು ಒತ್ತು:
ಜಿಐಎಸ್ ಆಧಾರಿತ ಯೋಜನೆ ಮತ್ತು ಅನುಷ್ಠಾನ ಪದ್ಧತಿಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಕೆಲಸವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಜಾರಿಗೊಳಿಸಿರುವ ಕರ್ಮಯೋಗಿ ಯೋಜನೆಯಡಿಯ ಒಂದು ಭಾಗವಾಗಿಯೇ ಇದನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.
ಮಿತ್ರುಭೂಮಿ ಮೂಲಕ ಡಿಜಿಟೈಸೇಷನ್:
2023ರೊಳಗೆ ಎಲ್ಲಾ ಭೂದಾಖಲೆಗಳನ್ನು ಡಿಜಿಟೈಸ್ಡ್ ತಂತ್ರಜ್ಞಾನದ ಮೂಲಕ ಲಭ್ಯವಾಗುವಂತೆ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಪ್ರತಿಯೊಂದು ಹೊಲಕ್ಕೆ ಅಥವಾ ಮನೆಯ ನಿವೇಶನಕ್ಕೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಲಾಗುತ್ತದೆ. ಇದರ ಜೊತೆಯಲ್ಲೇ, ಕಂದಾಯ ಇಲಾಖೆಯ ಅಡಿಯಲ್ಲಿ ದಾಖಲಾಗುವ ಎಲ್ಲಾ ರೀತಿಯ ಭೂ ವ್ಯಾಜ್ಯಗಳ ಇತ್ಯರ್ಥಕ್ಕಾಗಿ ಇ-ಕೋರ್ಟ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಈ ಮೂಲಕ, ಭೂದಾಖಲೆಗಳು, ವ್ಯಾಜ್ಯಗಳ ಇತ್ಯರ್ಥ ವ್ಯವಸ್ಥೆಗಳಿಗೆ ಪಾರದರ್ಶಕತೆ ಕೊಡಲು ನಿರ್ಧರಿಸಲಾಗಿದೆ.
ಹಂತಹಂತವಾಗಿ ಜಾರಿ
ಸೆ. 18ರಂದು ಪ್ರಧಾನಿ ನೇತೃತ್ವದಲ್ಲಿ ಹಲವಾರು ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆ ನಡೆಸಿ, ದೇಶದ ನಾಗರಿಕರಿಗೆ ಅವರಿಗೆ ಬೇಕಾದ ಮೂಲದಾಖಲೆಗಳನ್ನು ಒಂದೇ ವ್ಯವಸ್ಥೆಯಡಿ ಕಲ್ಪಿಸುವ ಮಹತ್ವದ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಿಸಿದ್ದರು. ಅದೇ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವಾರು ಹೊಸ ಆಲೋಚನೆಗಳುಳ್ಳ ಯೋಜನೆಗಳ ಬಗ್ಗೆ ಚರ್ಚಿಸಲಾಗಿತ್ತು. ಆಗ ರೂಪುಗೊಂಡಿರುವ ಹೊಸ ವ್ಯವಸ್ಥೆಗಳು, ಹೊಸ ಯೋಜನೆಗಳನ್ನು ಹಂತಹಂತವಾಗಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.