ಅಮೆರಿಕ ಕ್ಯಾಪಿಟಲ್ ಕಟ್ಟಡದಲ್ಲಿ ಹಿಂಸಾಚಾರ; ಟ್ರಂಪ್ ಫೇಸ್ ಬುಕ್, ಟ್ವಿಟರ್ ಖಾತೆ ಸ್ಥಗಿತ
ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಸುಳ್ಳು ಆರೋಪಗಳನ್ನು ಮಾಡುತ್ತಿರುವ ನಿಟ್ಟಿನಲ್ಲಿ ಈ ನಿರ್ಬಂಧ ವಿಧಿಸಲಾಗಿದೆ
Team Udayavani, Jan 7, 2021, 10:35 AM IST
ಸ್ಯಾನ್ ಫ್ರಾನ್ಸಿಸ್ಕೋ(ವಾಷಿಂಗ್ಟನ್):ನವೆಂಬರ್ 3ರಂದು ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆ ಆದ ಎಲೆಕ್ಟ್ರೋರಲ್ ಕಾಲೇಜ್ ಮತಗಳ ಎಣಿಕೆ ಬುಧವಾರ(ಜನವರಿ 06, 2021) ನಡೆಯುವ ನಡುವೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿ ಹಿಂಸಾಚಾರ ನಡೆಸಿರುವ ಘಟನೆ ನಡೆದ ಬೆನ್ನಲ್ಲೇ ಟ್ರಂಪ್ ಟ್ವಿಟರ್ ಮತ್ತು ಫೇಸ್ ಬುಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
ಅಮೆರಿಕ ಚುನಾವಣಾ ಫಲಿತಾಂಶ ಘೋಷಣೆಯಾದ ನಂತರ ಸೋಲನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲದ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಆರೋಪಗಳನ್ನು ಮಾಡುವ ಮೂಲಕ ತಮ್ಮ ಬೆಂಬಲಿಗರನ್ನು ಪ್ರಚೋದಿಸುತ್ತಿದ್ದರು ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಟ್ರಂಪ್ ಅವರ ಟ್ವಿಟರ್, ಫೇಸ್ ಬುಕ್ ಖಾತೆಯನ್ನು 12 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.
ಅಮೆರಿಕ ಚುನಾವಣೆಯಲ್ಲಿ ಜೋ ಬೈಡೆನ್ ವಿರುದ್ಧ ಪರಾಜಯಗೊಂಡ ನಂತರ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಸುಳ್ಳು ಆರೋಪಗಳನ್ನು ಮಾಡುತ್ತಿರುವ ನಿಟ್ಟಿನಲ್ಲಿ ಈ ನಿರ್ಬಂಧ ವಿಧಿಸಲಾಗಿದೆ ಎಂದು ಫೇಸ್ ಬುಕ್ ಹೇಳಿದೆ.
ಇದೊಂದು ತುರ್ತು ಪರಿಸ್ಥಿತಿಯಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಡಿಯೋ ತೆಗೆದುಹಾಕುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಫೇಸ್ ಬುಕ್ ಉಪಾಧ್ಯಕ್ಷ ಗಯ್ ರೊಸೆನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.