ಲಸಿಕೆ ಪ್ರಮಾಣ ಪತ್ರದಲ್ಲಿ ನಿಮ್ಮ ವಿವರಗಳು ತಪ್ಪಿದೆಯೇ..? ಹೀಗೆ ಮಾಡಿ.
Team Udayavani, Jul 16, 2021, 4:44 PM IST
ನವ ದೆಹಲಿ : ದೇಶದ ಎಲ್ಲರಿಗೂ ಲಸಿಕೆ ತಲುಪಿಸಬೇಕೆಂಬ ಕಾರಣಕ್ಕೆ ಭಾರತ ಸರ್ಕಾರ ಆನ್ ಲೈನ್ ನೋಂದಣಿ ಮಾಡಿಕೊಳ್ಳದವರಿಗೂ, ಸೂಕ್ತ ದಾಖಲೆಗಳನ್ನು ಹೊಂದಿಲ್ಲದವರಿಗೂ ಲಸಿಕೆ ನೀಡಲು ಕ್ರಮಕೈಗೊಂಡಿದೆ. ಆನ್ ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆದವರಿಗೆ ಅದಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರವೊಂದು ಕಾಣುತ್ತದೆ.
ನೋಂದಣಿ ಮಾಡಿಕೊಳ್ಳುವಾಗ ಒಂದು ವೇಳೆ ಅದರಲ್ಲಿ ಹೆಸರು, ವಯಸ್ಸು, ಲಿಂಗ ಇತ್ಯಾದಿ ವಿವರಗಳೇನಾದರೂ ತಪ್ಪಾಗಿ ನಮೂದಿಸಲ್ಪಟ್ಟರೆ ಏನು ಮಾಡಬೇಕು? ಅದನ್ನು ಕೊವಿನ್ ಪೋರ್ಟಲ್ ಮೂಲಕ ಸರಿಪಡಿಸಿಕೊಳ್ಳಬಹುದಾಗಿದೆ. ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಏನೇ ತಪ್ಪುಗಳಿದ್ದರೂ ನೀವು ಚಿಂತೆ ಮಾಡಬೇಕಿಲ್ಲ. ಏಕೆಂದರೆ ಅದನ್ನು ಸುಲಭವಾಗಿ ಸರಿಪಡಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದನ್ನೂ ಓದಿ : ಮೂರನೇ ಕೋವಿಡ್ ಅಲೆ ಎದುರಿಸಲು ಸಜ್ಜಾಗಿ: ಕಲಬುರಗಿ ಜನಕ್ಕೆ ಮುರುಗೇಶ್ ನಿರಾಣಿ ಸೂಚನೆ
ಈ ಕುರಿತಾಗಿ ಆರೋಗ್ಯ ಸೇತುವಿನ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಮಾಹಿತಿ ನೀಡಿದ್ದು, ಹೆಸರು, ಭಾವಚಿತ್ರ, ಗುರುತಿನ ಚೀಟಿ ಸಂಖ್ಯೆ, ಜನ್ಮ ದಿನಾಂಕ ಹಾಗೂ ಲಿಂಗ ಇತ್ಯಾದಿ ವಿವರಗಳನ್ನು ಕೊವಿನ್ ಪೋರ್ಟಲ್ ನಲ್ಲೇ ಸರಿಪಡಿಸಬಹುದಾಗಿದೆ ಎಂದು ಹೇಳಿದೆ.
Now you can make corrections to your name, year of birth and gender on your Cowin vaccination certificates if inadvertent errors have come in. Go to https://t.co/S3pUoouB6p and Raise an Issue. @mygovindia @CovidIndiaSeva @MoHFW_INDIA @GoI_MeitY @_DigitalIndia #IndiaFightsCorona pic.twitter.com/W32yUGr8Jx
— Aarogya Setu (@SetuAarogya) June 8, 2021
ಲಸಿಕೆ ಪ್ರಮಾಣ ಪತ್ರದಲ್ಲಿ ನಿಮ್ಮ ವಿವರಗಳನ್ನು ಸರಿಪಡಿಸಿಕೊಳ್ಳಬಹುದಾದ ವಿವರಗಳು
* ಕೊವಿನ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
* ನೋಂದಾಯಿತ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ಸಹಾಯದಿಂದ ಲಾಗಿನ್ ಆಗಿ
*ವೆಬ್ ಸೈಟ್ ನ ಮೇಲ್ಭಾಗದ ಬಲತುದಿಯಲ್ಲಿ ರೈಸ್ ಆ್ಯನ್ ಇಶ್ಯೂ ಎಂಬ ಆಯ್ಕೆ ಕಾಣ ಸಿಗುತ್ತದೆ.
*ಅದರಲ್ಲಿ ಕರೆಕ್ಷನ್ ಇನ್ ವ್ಯಾಕ್ಸಿನ್ ಸರ್ಟಿಫಿಕೇಟ್ ಆಯ್ಕೆಯನ್ನು ಸೆಲೆಕ್ಟ್ ಮಾಡಿ
*ನಿಮ್ಮ ವಿವರಗಳನ್ನು ಈಗ ಸರಿಪಡಿಸಿ ನಂತರ ಮುಂದುವರೆಯಿರಿ
*ನೀವು ಏನೇನು ಬದಲಾವಣೆ ಮಾಡಿದ್ದೀರಿ ಎನ್ನುವುದು ಕಾಣಲಿದೆ.
ಅದನ್ನು ಮತ್ತೊಮ್ಮೆ ಪರಿಶೀಲಿಸಿ ಖಚಿತಪಡಿಸಿಕೊಳ್ಳಿ.
ವಿ.ಸೂ: ಈ ಬದಲಾವಣೆಯನ್ನು ಒಮ್ಮೆ ಮಾತ್ರ ಮಾಡಲು ಸಾಧ್ಯವಿರುವ ಕಾರಣದಿಂದಾಗಿ, ಜಾಗರೂಕತೆಯಿಂದ ಮಾಡುವುದು ಒಳಿತು.
ಇದನ್ನೂ ಓದಿ : ಕರ್ಪ್ಯೂ ನಿಯಮ ಉಲ್ಲಂಘಿಸಿದವರಿಗೆ ಮಧ್ಯರಾತ್ರಿ ವ್ಯಾಯಾಮ ಮಾಡಿಸಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.