West Bengal ರಿಲಯನ್ಸ್ ನಿಂದ 20 ಸಾವಿರ ಕೋಟಿ ರೂಪಾಯಿ ಹೂಡಿಕೆ; ಮುಕೇಶ್ ಅಂಬಾನಿ ಘೋಷಣೆ
ಜಿಯೋ ಟ್ರೂ 5ಜಿ ನೆಟ್‌ವರ್ಕ್ ಪಶ್ಚಿಮ ಬಂಗಾಳದ ಹೆಚ್ಚಿನ ಸ್ಥಳಗಳನ್ನು ತಲುಪುತ್ತದೆ
Team Udayavani, Nov 21, 2023, 8:44 PM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 20 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಮಂಗಳವಾರ ಘೋಷಣೆ ಮಾಡಿದ್ದಾರೆ.
ಮುಂದಿನ ಮೂರು ವರ್ಷಗಳಲ್ಲಿ ಈ ಹೂಡಿಕೆ ಮಾಡಲಾಗುವುದು. ಕೋಲ್ಕತ್ತಾದಲ್ಲಿ ನಡೆಯುತ್ತಿರುವ 7ನೇ ಬೆಂಗಾಲ್ ಜಾಗತಿಕ ಉದ್ಯಮ ಸಮಾವೇಶದಲ್ಲಿ ಅವರು ಮಾತನಾಡಿದರು. “ಬಂಗಾಳದ ಅಭಿವೃದ್ಧಿಯ ಯಾವುದೇ ಸಾಧ್ಯತೆಯನ್ನು ರಿಲಯನ್ಸ್ ಬಿಡುವುದಿಲ್ಲ. ರಿಲಯನ್ಸ್ ಇದುವರೆಗೆ ಬಂಗಾಳದಲ್ಲಿ ಸುಮಾರು 45,000 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಮುಂದಿನ ಮೂರು ವರ್ಷಗಳಲ್ಲಿ ನಾವು 20 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೂಡಿಕೆ ಮಾಡುತ್ತೇವೆ” ಎಂದು ಹೇಳಿದರು.
ದೂರಸಂಪರ್ಕ, ರೀಟೇಲ್ ಮತ್ತು ಜೈವಿಕ ಇಂಧನ ಷೇತ್ರಗಳಲ್ಲಿ ಈ 20 ಸಾವಿರ ಕೋಟಿ ಹೂಡಿಕೆ ಮಾಡಲಾಗುವುದು. ನಾವು 5ಜಿ ತಂತ್ರಜ್ಞಾನವನ್ನು ರಾಜ್ಯದ ಮೂಲೆ ಮೂಲೆಗೆ ಒಯ್ಯುತ್ತಿದ್ದೇವೆ, ವಿಶೇಷವಾಗಿ ಗ್ರಾಮೀಣ ಭಾಗದ ಬಂಗಾಳವನ್ನು ಸಂಪರ್ಕಿಸಲಾಗುತ್ತಿದೆ ಎಂದು ಅಂಬಾನಿ ಹೇಳಿದರು. ನಾವು ಬಂಗಾಳದ ಬಹುತೇಕ ಭಾಗಗಳನ್ನು ಆವರಿಸಿದ್ದೇವೆ. ಜಿಯೋ ನೆಟ್‌ವರ್ಕ್ ರಾಜ್ಯದ ಜನಸಂಖ್ಯೆಯ ಶೇ 98.8ರಷ್ಟು ಮತ್ತು ಕೋಲ್ಕತ್ತಾ ಟೆಲಿಕಾಂ ವಲಯದಲ್ಲಿ ಶೇ 100ರಷ್ಟು ಜನಸಂಖ್ಯೆಯನ್ನು ತಲುಪಿದೆ. ಜಿಯೋದ ಪ್ರಬಲ ನೆಟ್‌ವರ್ಕ್ ಪಶ್ಚಿಮ ಬಂಗಾಳದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗದ ಜೊತೆಗೆ ಶಿಕ್ಷಣ, ಆರೋಗ್ಯ ಮತ್ತು ಕೃಷಿಯನ್ನು ಉತ್ತೇಜಿಸುತ್ತದೆ.
ರಿಲಯನ್ಸ್ ರೀಟೇಲ್ ಮುಂದಿನ ಎರಡು ವರ್ಷಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಸುಮಾರು 200 ಹೊಸ ಮಳಿಗೆಗಳನ್ನು ತೆರೆಯಲು ಯೋಜಿಸುತ್ತಿದೆ. ಸದ್ಯಕ್ಕೆ ಬಂಗಾಳದಲ್ಲಿ ಸುಮಾರು 1000 ರಿಲಯನ್ಸ್ ಸ್ಟೋರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅದು 1200ಕ್ಕೆ ಹೆಚ್ಚಾಗುತ್ತದೆ. ನೂರಾರು ಸಣ್ಣ ಮತ್ತು ಮಧ್ಯಮ ಉದ್ಯಮಿಗಳು ಮತ್ತು ಬಂಗಾಳದ ಸುಮಾರು 5.5 ಲಕ್ಷ ಕಿರಾಣಿ ಅಂಗಡಿಯವರು ನಮ್ಮ ರೀಟೇಲ್ ವ್ಯಾಪಾರದೊಂದಿಗೆ ಕೈ ಜೋಡಿಸಿದ್ದಾರೆ ಎಂದು ಹೇಳಿದರು.
ಹೊಸ ಮಳಿಗೆಗಳನ್ನು ತೆರೆಯುವುದರಿಂದ ಅವರಿಗೆ ಲಾಭವಾಗಲಿದೆ. ಪ್ರಭುಜಿ, ಮುಖ್ರೋಚಕ್, ಸಿಟಿ ಗೋಲ್ಡ್, ಬಿಸ್ಕ್ ಫಾರ್ಮ್‌ನಂತಹ ಬಂಗಾಳದ ಹಲವು ಪ್ರಾದೇಶಿಕ ಬ್ರ್ಯಾಂಡ್‌ಗಳನ್ನು ಉಲ್ಲೇಖಿಸಿದ ಅವರು, ರಿಲಯನ್ಸ್ ರೀಟೇಲ್ ಮೂಲಕ ನಾವು ಈ ಬ್ರ್ಯಾಂಡ್‌ಗಳನ್ನು ಇಡೀ ದೇಶದಾದ್ಯಂತ ಕೊಂಡೊಯ್ಯುತ್ತಿದ್ದೇವೆ ಎಂದು ಹೇಳಿದರು.
ಭಾರತದ ಅತಿದೊಡ್ಡ ಜೈವಿಕ ಇಂಧನ ಉತ್ಪಾದಕ ರಿಲಯನ್ಸ್ ಮುಂದಿನ ಮೂರು ವರ್ಷಗಳಲ್ಲಿ 100 ಕಂಪ್ರೆಸ್ ಜೈವಿಕ ಅನಿಲ ಘಟಕಗಳನ್ನು ಸ್ಥಾಪಿಸಲಿದೆ. ಈ ಘಟಕಗಳು 5.5 ಮಿಲಿಯನ್ ಟನ್ ಕೃಷಿ ಅವಶೇಷಗಳು ಮತ್ತು ಸಾವಯವ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತವೆ. ಇದು ಸುಮಾರು 2 ಮಿಲಿಯನ್ ಟನ್ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ವಾರ್ಷಿಕವಾಗಿ 2.5 ಮಿಲಿಯನ್ ಟನ್ ಸಾವಯವ ಗೊಬ್ಬರವನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ರೈತರಿಗೆ ದೊಡ್ಡ ಪ್ರಮಾಣದಲ್ಲಿ ಇಂಧನ ಪಾರ್ಕ್ ಗಳನ್ನು ಸ್ಥಾಪಿಸಲು ನಾವು ಸಹಾಯ ಮಾಡುತ್ತೇವೆ. ಇದರೊಂದಿಗೆ, ಅವರು ಆಹಾರ ಪೂರೈಕೆದಾರರೊಂದಿಗೆ ಇಂಧನ ಪೂರೈಕೆದಾರರಾಗಲು ಸಾಧ್ಯವಾಗುತ್ತದೆ ಮತ್ತು ಅವರ ಆದಾಯವೂ ಹೆಚ್ಚಾಗುತ್ತದೆ ಎಂದು ಮುಕೇಶ್ ಅಂಬಾನಿ ಹೇಳಿದರು.
ಮುಕೇಶ್ ಅಂಬಾನಿ ತಮ್ಮ ಭಾಷಣದಲ್ಲಿ ರಿಲಯನ್ಸ್ ಫೌಂಡೇಷನ್ ಪಶ್ಚಿಮ ಬಂಗಾಳದಲ್ಲಿ ನಡೆಸುತ್ತಿರುವ ಕೆಲಸಗಳನ್ನೂ ಪ್ರಸ್ತಾಪಿಸಿದರು. ಇವುಗಳಲ್ಲಿ ಪ್ರಮುಖವಾದದ್ದು ಕೋಲ್ಕತ್ತಾದ ಪ್ರಸಿದ್ಧ ಕಾಳಿಘಾಟ್ ದೇವಾಲಯದ ನವೀಕರಣ ಮತ್ತು ಜೀರ್ಣೋದ್ಧಾರ. ಶತಮಾನಗಳಷ್ಟು ಹಳೆಯದಾದ ಈ ದೇವಾಲಯದ ದುರಸ್ತಿ ಮತ್ತು ಸೌಂದರ್ಯ ಹೆಚ್ಚಿಸುವ ಕಾರ್ಯವನ್ನು ರಿಲಯನ್ಸ್ ಫೌಂಡೇಷನ್ ಮಾಡುತ್ತಿದೆ. ಫೌಂಡೇಷನ್‌ನ ‘ಸ್ವದೇಶ್’ ಉಪಕ್ರಮದ ಅಡಿಯಲ್ಲಿ ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಾಂಪ್ರದಾಯಿಕ ಕಲೆ ಮತ್ತು ಕರಕುಶಲಗಳನ್ನು ಭಾರತದಲ್ಲಿ ಮತ್ತು ಜಾಗತಿಕವಾಗಿ ಪ್ರಚಾರ ಮಾಡಲಾಗುತ್ತಿದೆ. ರಿಲಯನ್ಸ್ ಫೌಂಡೇಷನ್ ಬಂಗಾಳದ ಯುವ ಪೀಳಿಗೆಯ ಕುಶಲಕರ್ಮಿಗಳಿಗೆ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ತರಬೇತಿ ಸಂಸ್ಥೆಗಳನ್ನು ಸ್ಥಾಪಿಸುತ್ತದೆ. ಅಲ್ಲದೆ, ನೇಕಾರರು, ಕುಶಲಕರ್ಮಿಗಳು ಮತ್ತು ಕರಕುಶಲಕರ್ಮಿಗಳ ಉತ್ಪನ್ನಗಳನ್ನು ರಿಲಯನ್ಸ್‌ನ ರೀಟೇಲ್ ನ ಔಟ್‌ಲೆಟ್‌ಗಳ ಮೂಲಕ ಮಾರಾಟ ಮಾಡಲು ‘ಬಿಸ್ವಾ ಬಾಂಗ್ಲಾ ಕಾರ್ಪೊರೇಷನ್’ ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.