ಭಾರತದಲ್ಲಿ ಬಿಡುಗಡೆಗೊಂಡಿದೆ ಸ್ಯಾಮ್ ಸಂಗ್ ಗ್ಯಾಲಕ್ಸಿ s20 FE 5ಜಿ..! ವಿಶೇಷತೆಗಳೇನು..?
Team Udayavani, Mar 31, 2021, 2:52 PM IST
ನವ ದೆಹಲಿ : ಸ್ಯಾಮ್ ಸಂಗ್ ಗ್ಯಾಲಕ್ಸಿ s20 FE 5ಜಿ ಅನ್ನು ಮಾರ್ಚ್ 31 ರ ಬುಧವಾರ ಭಾರತದಲ್ಲಿ ಬಿಡುಗಡೆಗೊಂಡಿದೆ.
ಸ್ಯಾಮ್ ಸಂಗ್ ಗ್ಯಾಲಕ್ಸಿ s 20 FE ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಯುಎಸ್ ನಲ್ಲಿ 4 ಜಿ ಮತ್ತು 5 ಜಿ ಎರಡೂ ಮಾಡೆಲ್ ಗಳಲ್ಲಿ ಬಿಡುಗಡೆ ಮಾಡಿತ್ತು, ಆದರೆ ಅದರ 4 ಜಿ ಮಾಡೆಲ್ ನ್ನು ಮಾತ್ರ ಮುಂದಿನ ಅಕ್ಟೋಬರ್‌ನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವುದರ ಮೂಲಕ ಪರಿಚಯಿಸಲಾಗಿತ್ತು.
ಫೋನ್ ನ 5 ಜಿ ಮಾಡೆಲ್ Exynos 990 ಚಿಪ್ ಅನ್ನು ಒಳಗೊಂಡಿರುವ 4 ಜಿ ಮಾಡೆಲ್ ಗಿಂತ ಭಿನ್ನವಾಗಿ ಸ್ನಾಪ್ ಡ್ರಾಗನ್ 865 SoC ನಿಂದ ನಿಯಂತ್ರಿಸಲ್ಪಡುತ್ತದೆ.
ಭಾರತದಲ್ಲಿ ಸ್ಯಾಮ್ ಸಂಗ್ ಗ್ಯಾಲಕ್ಸಿ S20 FE5 ಜಿ ಬೆಲೆ, ಲಭ್ಯತೆ, ಕೊಡುಗೆಗಳು :
ಸ್ಯಾಮ್ ಸಂಗ್ ಗ್ಯಾಲಕ್ಸಿ S 20 FE 5 ಜಿ ಸಿಂಗಲ್ 8 ಜಿಬಿ ರಾಮ್ + 128 ಜಿಬಿ ಸ್ಟೋರೇಜ್ ಮಾಡೆಲ್ ಗೆ 55,999 ರೂ. ಆದರೆ ಈ ಫೋನ್ ಅನ್ನು ಭಾರತದಲ್ಲಿ ರೂ. 47,999ಗೆ ಆಫರ್ ನಲ್ಲಿ ನೀಡುತ್ತಿದೆ. ಸ್ಯಾಮ್ ಸಂಗ್ ಗ್ಯಾಲಕ್ಸಿ S 20 FE 4 ಜಿ ಬೆಲೆ ರೂ. 8ಜಿಬಿ RAM ಮತ್ತು ಸ್ಟೋರೇಜ್ ಮಾಡೆಲ್ ಗೆ 44,999 ರೂ. ಆಗಿದೆ.
ಇನ್ನು, ಸ್ಯಾಮ್ ಸಂಗ್ ಗ್ಯಾಲಕ್ಸಿ S 20 FE 5 ಜಿ ಯ ಆನ್ ಲೈನ್ ಆದರೆ ಸ್ಯಾಮ್ ಸಂಗ್ ಇಂಡಿಯಾ ಆನ್ ಲೈನ್ ಸ್ಟೋರ್, ಅಮೆಜಾನ್ ಮತ್ತು ಕಂಪನಿಯ ಸ್ವಂತ ಮತ್ತು ಪಾಲುದಾರ ಆಫ್ ಲೈನ್ ಸ್ಟೋರ್ ಗಳಲ್ಲೂ ಫೋನ್ ಖರೀದಿಗೆ ಲಭ್ಯವಿರುತ್ತದೆ ಎಂದು ಸ್ಯಾಮ್ ಸಂಗ್ ಹೇಳಿದೆ. ಸ್ಯಾಮ್ ಸಂಗ್ ಗ್ಯಾಲಕ್ಸಿ S 20 FE 5ಜಿ ಕ್ಲೌಡ್ ಲ್ಯಾವೆಂಡರ್, ಕ್ಲೌಡ್ ಮಿಂಟ್ ಮತ್ತು ಕ್ಲೌಡ್ ನೇವಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.
ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ 20 ಎಫ್‌ಇ 5 ಜಿ ವಿಶೇಷತೆಗಳು :
ಸ್ಯಾಮ್ ಸಂಗ್ ಗ್ಯಾಲಕ್ಸಿ S 20 FE 5 ಜಿ 6.5 ಇಂಚಿನ ಫುಲ್ ಎಚ್‌ಡಿ + (1,080×2,400 ಪಿಕ್ಸೆಲ್‌ಗಳು) ಸೂಪರ್ ಅಮೋಲೆಡ್ ಇನ್ಫಿನಿಟಿ ಒ ಡಿಸ್ಪ್ಲೇ ಯನ್ನು ಹೊಂದಿದೆ.
ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ 20 ಎಫ್‌ಇ 5 ಜಿ ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 865 ಎಸ್‌ಒಸಿ ಯಿಂದ ನಿಯಂತ್ರಿಸಲ್ಪಡುತ್ತದೆ, ಇದು 8 ಜಿಬಿ RAM ಮತ್ತು 128 ಜಿಬಿ ಸ್ಟೋರೇಜ್ ನನ್ನು ಹಾಗೂ IP 68 ಡಸ್ಟ್ ಹಾಗೂ ವಾಟರ್ ರೆಸಿಸ್ಟೆಂಟ್ ನ್ನು ಸಹ ಹೊಂದಿದೆ.
ಸ್ಯಾಮ್ ಸಂಗ್ ಗ್ಯಾಲಕ್ಸಿ S 20 FE 5 ಜಿ ಮಾಡೆಲ್ ಅದರ 4 ಜಿ ಮಾಡೆಲ್ ನಂತೆಯೇ ಬ್ಯಾಕ್ ಆ್ಯಂಡ್ ಫ್ರಂಟ್ ಕ್ಯಾಮೆರಾಗಳನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಎಫ್ / 1.8 ವೈಡ್-ಆಂಗಲ್ ಲೆನ್ಸ್ ಹೊಂದಿರುವ 12 ಮೆಗಾಪಿಕ್ಸೆಲ್ ಪ್ರೈಮೆರಿ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಎಫ್ / 2.2 ಲೆನ್ಸ್ ಹೊಂದಿರುವ 12 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಮತ್ತು 8 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾವನ್ನು ಒಳಗೊಂಡಿದೆ. ಇದು 30x ಸ್ಪೇಸ್ ಜೂಮ್ ಅನ್ನು ಸಹ ಹೊಂದಿದೆ. ಫೋನ್ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಎಫ್ / 2.0 ಲೆನ್ಸ್, 4,500mAh ಬ್ಯಾಟರಿಯನ್ನು ಹೊಂದಿದ್ದು ಅತ್ಯಾಕರ್ಷಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
WhatsApp ಚಾಟ್ ಡಿಲೀಟ್ ಆಗಿದ್ಯಾ? ಚಾಟ್ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.