“ವಂದೇ ಭಾರತ್’ನಲ್ಲಿ ವಿಶೇಷ ಆಸನ ವ್ಯವಸ್ಥೆ; 180 ಡಿಗ್ರಿ ರೊಟೇಶನ್ ಮಾದರಿಯ ಆಸನಗಳು
ಸೆಪ್ಟಂಬರ್‌ನಿಂದ ಆರಂಭವಾಗಿ ವರ್ಷದೊಳಗೆ ಆಸನ ಯೋಜನೆ ಪೂರ್ಣ
Team Udayavani, Aug 1, 2022, 7:10 AM IST
ನವದೆಹಲಿ: ರೈಲ್ವೆ ಇಲಾಖೆಯ “ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲುಗಳಿಗಾಗಿ ವಿಶೇಷ ಆಸನ ವ್ಯವಸ್ಥೆಯನ್ನು ರೂಪಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪ್ರತಿಷ್ಠಿತ ಟಾಟಾ ಗ್ರೂಪ್ ಸಂಸ್ಥೆ, ದೇಶದಲ್ಲೇ ಇದೇ ಮೊದಲ ಬಾರಿಗೆ ರೈಲುಗಳಲ್ಲಿ ವಿಮಾನಗಳಲ್ಲಿರುವಂಥ ಆರಾಮದಾಯಕವಾದ, ವಿಶೇಷ ಸೌಕರ್ಯಗಳುಳ್ಳ ಆಸನಗಳನ್ನು ನೀಡಲು ನಿರ್ಧರಿಸಿದೆ.
ಹಾಗಾಗಿ, ಇಂಥ ವಿಶೇಷ ಆಸನಗಳನ್ನು ವಿನ್ಯಾಸಗೊಳಿಸಲು ತನ್ನ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದಲ್ಲಿ ಟಾಟಾ ಸಂಸ್ಥೆ 3 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ನಿರ್ಧರಿಸಿದೆ.
“ವಂದೇ ಭಾರತ್’ನ 22 ರೈಲುಗಳಿಗೆ ಆಸನ ವ್ಯವಸ್ಥೆಯನ್ನು ಕಲ್ಪಿಸಬೇಕಿದೆ. ಒಂದು ರೈಲಿನಲ್ಲಿ 16 ಕೋಚ್‌ಗಳಿರುತ್ತವೆ. ಈ ಹದಿನಾರು ಕೋಚ್‌ಗಳಲ್ಲಿ ಒಟ್ಟು 1,040 ಸೀಟುಗಳಿರುತ್ತವೆ.
ವಿಶೇಷತೆಯೇನು?
ಇವು 180 ಡಿಗ್ರಿ ರೊಟೇಶನ್ ಮಾದರಿಯ ಆಸನಗಳಾಗಿದ್ದು, ವಿಮಾನಗಳಲ್ಲಿರುವಂಥ ಆರಾಮದಾಯಕವಾಗಿರುತ್ತವೆ. ಇದೇ ವರ್ಷ ಸೆಪ್ಟಂಬರ್‌ನಿಂದ ಹೊಸ ಆಸನ ವ್ಯವಸ್ಥೆಯ ಕೆಲಸಗಳು ಆರಂಭವಾಗಲಿದ್ದು ಒಂದು ವರ್ಷದೊಳಗೆ ಎಲ್ಲಾ ವಂದೇ ಭಾರತ್ ರೈಲುಗಳಲ್ಲಿ ಹೊಸ ಆಸನಗಳನ್ನು ಅಳವಡಿಸುವ ಗುರಿಯನ್ನು ಟಾಟಾ ಕಂಪನಿ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.