ಜಿಯೋದಿಂದ ಡಿಸ್ನಿ+ ಹಾಟ್ ಸ್ಟಾರ್ ನೊಂದಿಗೆ ಮೂರು ತಿಂಗಳ ಭರ್ಜರಿ ಆಫರ್

Team Udayavani, May 6, 2022, 3:19 PM IST

jio disney hotstar plan

ಬೆಂಗಳೂರು: ರಿಲಯನ್ಸ್ ಜಿಯೋ ಹೊಸದಾಗಿ ನಾಲ್ಕು ಹೊಸ ಪ್ರಿಪೇಯ್ಡ್ ಯೋಜನೆಗಳನ್ನು ಲಾಂಚ್ ಮಾಡಿದೆ. ರೂ. 151, ರೂ 333, ರೂ 583 ಮತ್ತು ರೂ 783 ಈ ಯೋಜನೆಗಳಾಗಿವೆ. ಈ ಎಲ್ಲಾ ಯೋಜನೆಗಳು ಬಳಕೆದಾರರಿಗೆ ಮೂರು ತಿಂಗಳ ಉಚಿತ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ನೀಡುತ್ತದೆ.

ಡಿಸ್ನಿ+ ಹಾಟ್ ಸ್ಟಾರ್ ಜೊತೆಗಿನ ಈ ಪಾಲುದಾರಿಕೆಯ ಮೂಲಕ, ಜಿಯೋ ತನ್ನ ಪ್ರಿಪೇಯ್ಡ್ ಬಳಕೆದಾರರಿಗೆ ಆಯ್ದ ರೀಚಾರ್ಜ್‌ಗಳೊಂದಿಗೆ ಡಿಸ್ನಿ+ ಹಾಟ್ ಸ್ಟಾರ್ 3-ತಿಂಗಳ ಮೊಬೈಲ್‌ ಚಂದಾದಾರಿಕೆಯನ್ನು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ನೀಡಲು ಮುಂದಾಗಿದೆ.

ಗ್ರಾಹಕರು 3 ತಿಂಗಳವರೆಗೆ ಉಚಿತ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ಪಡೆದಲು ವಿವಿಧ ಜಿಯೋ ರೀಚಾರ್ಜ್ ಪ್ಲಾನ್ ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಆಯ್ಕೆ ಮಾಡಿದ ಪ್ಲಾನ್ ನ ಆಧಾರದ ಮೇಲೆ ಜಿಯೋ ಬಳಕೆದಾರರು ಅನಿಯಮಿತ ಧ್ವನಿ, ಡೇಟಾ, ಎಸ್ಎಂಎಸ್ ಮತ್ತು ಇತರ ಪ್ರಯೋಜನಗಳನ್ನು ಸಹ ಪಡೆಯಬಹುದು

ಪ್ಲಾನ್‌ಗಳ ವಿವರ

ರೂ. 151ರ ರೀಚಾರ್ಜ್ ಪ್ಲಾನ್: ರೂ 151 ಯೋಜನೆಯು ಡೇಟಾ-ಮಾತ್ರ ಯೋಜನೆಯಾಗಿದ್ದು, ಬಳಕೆದಾರರಿಗೆ 8 GB ಡೇಟಾವನ್ನು ನೀಡುತ್ತದೆ. ಈ ಯೋಜನೆಯ ಲಾಭ ಪಡೆಯಲು, ಬಳಕೆದಾರರಿಗೆ ಸಕ್ರಿಯ ಬೇಸ್ ಪ್ಲಾನ್ ಕೂಡ ಅಗತ್ಯವಿದೆ. ಈ ಯೋಜನೆಯು ಬಳಕೆದಾರರಿಗೆ ಡಿಸ್ನಿ+ ಹಾಟ್‌ಸ್ಟಾರ್ ಮೂರು ತಿಂಗಳ ಮೊಬೈಲ್ ಚಂದಾದಾರಿಕೆ ನೀಡುತ್ತದೆ.

ರೂ. 333ರ ರೀಚಾರ್ಜ್ ಪ್ಲಾನ್: ಈ ಪ್ಲಾನ್ ರೀಚಾರ್ಜ್ ಮಾಡಿಸುವ ಗ್ರಾಹಕರು 28 ದಿನಗಳ ವ್ಯಾಲಿಡಿಟಿಯೊಂದಿಗೆ ದಿನಕ್ಕೆ ಉಚಿತವಾಗಿ 100 SMS ಸೌಲಭ್ಯ ಪಡೆಯುತ್ತಾರೆ. ಅಲ್ಲದೇ ದಿನಕ್ಕೆ 1.5GB 4G ವೇಗದ ಡೇಟಾದೊಂದಿಗೆ ಹೊಸ ಬಳಕೆದಾದರರು ಉಚಿತವಾಗಿ ಪ್ರೈಮ್ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ. ಇದಲ್ಲದೇ ಜಿಯೋ ಆಪ್ ಗಳನ್ನು ಉಚಿತವಾಗಿ ಬಳಸಿಕೊಳ್ಳುವುದರ ಜೊತೆಗೆ ಈ ಯೋಜನೆಯು ಬಳಕೆದಾರರಿಗೆ ಡಿಸ್ನಿ+ ಹಾಟ್‌ಸ್ಟಾರ್ ನ ಮೂರು ತಿಂಗಳ ಮೊಬೈಲ್ ಚಂದಾದಾರಿಕೆ ನೀಡುತ್ತದೆ.

ರೂ. 583ರ ರೀಚಾರ್ಜ್ ಪ್ಲಾನ್: ಈ ಪ್ಲಾನ್ ರೀಚಾರ್ಜ್ ಮಾಡಿಸುವ ಗ್ರಾಹಕರು 56 ದಿನಗಳ ವ್ಯಾಲಿಡಿಟಿಯೊಂದಿಗೆ ದಿನಕ್ಕೆ ಉಚಿತವಾಗಿ 100 SMS ಕಳುಹಿಸಬಹುದಾಗಿದೆ. ಅಲ್ಲದೇ ದಿನಕ್ಕೆ 1.5GB 4G ವೇಗದ ಡೇಟಾ ಪಡೆಬಹುದು. ಈ ಪ್ಲಾನ್ ನಲ್ಲಿ ಹೊಸ ಬಳಕೆದಾರರು ರೂ. 99 ಪಾವತಿಸಿ ಪ್ರೈಮ್ ಸದಸ್ಯತ್ವವನ್ನು ಪಡೆದುಕೊಳ್ಳಬಹುದು, ಹಳೆಯ ಬಳಕೆದಾರರಿಗೆ ಯಾವುದೇ ಶುಲ್ಕವಿಲ್ಲ. ಇದಲ್ಲದೇ ಜಿಯೋ ಆಪ್ ಗಳನ್ನು ಉಚಿತವಾಗಿ ಬಳಸಿಕೊಳ್ಳುವುದರ ಜೊತೆಗೆ ಈ ಯೋಜನೆಯು ಬಳಕೆದಾರರಿಗೆ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆ ಮೂರು ತಿಂಗಳ ಅವಧಿಗೆ ನೀಡುತ್ತದೆ.

ರೂ. 783ರ ರೀಚಾರ್ಜ್ ಪ್ಲಾನ್: ಈ ಪ್ಲಾನ್ ರೀಚಾರ್ಜ್ ಮಾಡಿಸುವ ಗ್ರಾಹಕರು 84 ದಿನಗಳ ವ್ಯಾಲಿಡಿಟಿಯೊಂದಿಗೆ ದಿನಕ್ಕೆ ಉಚಿತವಾಗಿ 100 SMS ಕಳುಹಿಸಬಹುದಾಗಿದೆ. ಅಲ್ಲದೇ ದಿನಕ್ಕೆ 1.5GB 4G ವೇಗದ ಡೇಟಾ ಪಡೆಬಹುದು. ಈ ಪ್ಲಾನ್ ನಲ್ಲಿ ಹೊಸ ಬಳಕೆದಾರರು ರೂ. 99 ಪಾವತಿಸಿ ಪ್ರೈಮ್ ಸದಸ್ಯತ್ವವನ್ನು ಪಡೆದುಕೊಳ್ಳಬಹುದು, ಹಳೇ ಬಳಕೆದಾರರಿಗೆ ಯಾವುದೇ ಶುಲ್ಕವಿಲ್ಲ. ಇದಲ್ಲದೇ ಜಿಯೋ ಆಪ್ ಗಳನ್ನು ಉಚಿತವಾಗಿ ಬಳಸಿಕೊಳ್ಳುವುದರ ಜೊತೆಗೆ ಈ ಯೋಜನೆಯು ಬಳಕೆದಾರರಿಗೆ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಮೂರು ತಿಂಗಳ ಚಂದಾದಾರಿಕೆಯನ್ನು ನೀಡುತ್ತದೆ.

ಹೀಗೆ ಮಾಡಿ:

ಜಿಯೋ ಯೋಜನೆಯೊಂದಿಗೆ 3-ತಿಂಗಳ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ಪಡೆಯಲು,

3 ತಿಂಗಳ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ನೀಡುವ ಯಾವುದೇ ಪ್ಲಾನ್ ಅನ್ನು ರೀಚಾರ್ಜ್ ಮಾಡಿ.

ಚಾರ್ಜ್ ಮಾಡಿದ ನಂತರ, ರೀಚಾರ್ಜ್ ಅಥವಾ ಡೇಟಾ ಆಡ್-ಆನ್ ಮಾಡಿದ ಅದೇ ಜಿಯೋ ಮೊಬೈಲ್ ಸಂಖ್ಯೆಯೊಂದಿಗೆ ಡಿಸ್ನಿ+ ಹಾಟ್‌ಸ್ಟಾರ್ ರ್ಅಪ್ಲಿಕೇಶನ್‌ಗೆ ಸೈನ್ ಇನ್ ಮಾಡಿ.

ಸೈನ್-ಇನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಿಮ್ಮ ಜಿಯೋ ಸಂಖ್ಯೆಗೆ ಕಳುಹಿಸಲಾದ ಓಟಿಪಿ ಯನ್ನು ನಮೂದಿಸಿ.

ಯಶಸ್ವಿಯಾಗಿ ಲಾಗಿನ್ ಮಾಡಿದ ನಂತರ ನಿಮ್ಮ ಹೊಸ 3-ತಿಂಗಳ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯೊಂದಿಗೆ ಲೈವ್ ಕ್ರಿಕೆಟ್ ಸೇರಿದಂತೆ ನಿಮ್ಮ ಮೆಚ್ಚಿನ ಕಾರ್ಯಕ್ರಮಗಳನ್ನು ನೋಡಬಹುದು.

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.