ಗೂಗಲ್‌ ಸ್ಟ್ರೀಟ್‌ ವ್ಯೂ ಏನಿದರ ಪ್ರಯೋಜನ? ಏನಿದು ಗೂಗಲ್‌ ಸ್ಟ್ರೀಟ್‌ ವ್ಯೂ?

Team Udayavani, Jul 30, 2022, 6:30 AM IST

ಗೂಗಲ್‌ ಸ್ಟ್ರೀಟ್‌ ವ್ಯೂ ಏನಿದರ ಪ್ರಯೋಜನ? ಏನಿದು ಗೂಗಲ್‌ ಸ್ಟ್ರೀಟ್‌ ವ್ಯೂ?

2007ರಲ್ಲೇ ಗೂಗಲ್‌ ಸಂಸ್ಥೆ ಈ ಸ್ಟ್ರೀಟ್‌ ವ್ಯೂ ಎಂಬ ಫೀಚರ್‌ ಅನ್ನು ಇಡೀ ಜಗತ್ತಿನಲ್ಲಿ ಪರಿಚಯಿಸಿತ್ತು. ಆದರೆ ಭಾರತದಲ್ಲಿ ಮಾತ್ರ ಇದಕ್ಕೆ ಒಪ್ಪಿಗೆ ಕೊಟ್ಟಿರಲಿಲ್ಲ. ಈಗ ಇಲ್ಲಿಯೂ ಬೆಂಗಳೂರು ಸೇರಿದಂತೆ ಕೆಲವು ನಗರಗಳಲ್ಲಿ ಈ ಸ್ಟ್ರೀಟ್‌ ವ್ಯೂಗೆ ಅವಕಾಶ ನೀಡಲಾಗಿದೆ. ಹಾಗಾದರೆ, ಏನಿದು ಸ್ಟ್ರೀಟ್‌ ವ್ಯೂ? ಇದರಿಂದ ಉಪಯೋಗವೇನು? ಅಪಾಯಗಳೇನಾದರೂ ಇವೆಯೇ? ಇಲ್ಲಿದೆ ಮಾಹಿತಿ.

ಏನಿದು ಗೂಗಲ್‌ ಸ್ಟ್ರೀಟ್‌ ವ್ಯೂ?
360 ಡಿಗ್ರಿಯಲ್ಲಿ ವಿಶೇಷ ಕೆಮೆರಾದಲ್ಲಿ ನಿಗದಿತ ಸ್ಥಳವೊಂದನ್ನು ಸೆರೆಹಿಡಿದು, ಗೂಗಲ್‌ ಮ್ಯಾಪ್‌ನ ಸ್ಟ್ರೀಟ್‌ ವ್ಯೂಗೆ ಸೇರಿಸಲಾಗುತ್ತದೆ. ಸ್ಥಳಗಳು ಅಥವಾ ಬೀದಿಗಳನ್ನು ಸೆರೆಹಿಡಿಯಲು ವಿಶೇಷ ವಾಹನದಲ್ಲಿ ಅಳವಡಿಸಲಾಗಿರುವ ಕೆಮೆರಾ ಅಥವಾ ಬ್ಯಾಕ್‌ಪ್ಯಾಕ್‌ ಕೆಮೆರಾ ಬಳಕೆ ಮಾಡಲಾಗುತ್ತದೆ.

ಈಗ ಅವಕಾಶ ಸಿಕ್ಕಿದ್ದು ಹೇಗೆ?
ಭಾರತದಲ್ಲಿ ಇದುವರೆಗೆ ಗೂಗಲ್‌ ಸ್ಟ್ರೀಟ್‌ ವ್ಯೂಗೆ ಅವಕಾಶವಿರಲಿಲ್ಲ. 2011ರಲ್ಲಿ ಬೆಂಗಳೂರಿನಲ್ಲಿ ಗೂಗಲ್‌ ಸಂಸ್ಥೆಯ ವಾಹನಗಳು ಸ್ಟ್ರೀಟ್‌ವ್ಯೂ ಸೆರೆಹಿಡಿಯಲು ಹೋಗಿದ್ದಾಗ, ಪೊಲೀಸರೇ ತಡೆಹಿಡಿದಿದ್ದರು. ಈಗ ರಾಷ್ಟ್ರೀಯ ಭೌಗೋಳಿಕ ನೀತಿ 2021ರ ಪ್ರಕಾರವಾಗಿ ಭಾರತದ ಕಂಪೆನಿಗಳಿಗೆ ಇಂಥ ದೃಶ್ಯಗಳನ್ನು ಸೆರೆ ಹಿಡಿಯಲು ಅವಕಾಶ ನೀಡಲಾಗಿದೆ. ಸದ್ಯ ಗೂಗಲ್‌ ಟೆಕ್‌ ಮಹೀಂದ್ರಾ ಮತ್ತು ಮುಂಬಯಿಯ ಜೆನೆಸಿಸ್‌ ಇಂಟರ್‌ನ್ಯಾಶನಲ್‌ ಎಂಬ ಕಂಪೆನಿ ಜತೆಗೂಡಿ ಈ ಸೌಲಭ್ಯ ಒದಗಿಸುತ್ತಿದೆ. ಎಲ್ಲ ದತ್ತಾಂಶಗಳು ಭಾರತದಲ್ಲೇ ಸೇವ್‌ ಆಗಬೇಕು.

ಎಲ್ಲ ಕಡೆ ಸಿಗುತ್ತದೆಯೇ?
ಇಲ್ಲ. ಸದ್ಯ ದೇಶದ 10 ನಗರಗಳಲ್ಲಿ ಮಾತ್ರ ಈ ಸೌಲಭ್ಯ ಸಿಗಲಿದೆ. ಹಾಗೆಯೇ, ಬೆಂಗಳೂರಿನಲ್ಲಿ ಈ ಸೌಲಭ್ಯವಿದ್ದರೂ, ರಕ್ಷಣ ಇಲಾಖೆಯ ಸ್ಥಳಗಳು, ಸರಕಾರಿ ಆಸ್ತಿಗಳು, ಮಿಲಿಟರಿ ಪ್ರದೇಶಗಳಲ್ಲಿ ಸ್ಟ್ರೀಟ್‌ ವ್ಯೂಗೆ ಅವಕಾಶವಿಲ್ಲ.

ಖಾಸಗಿತನಕ್ಕೆ ಧಕ್ಕೆಯಾಗಲಿದೆಯೇ?
ಇದುವರೆಗೆ ಇದ್ದ ಅಪಾಯವೇ ಇದಾಗಿತ್ತು. ಅಂದರೆ ಸ್ಟ್ರೀಟ್‌ ವ್ಯೂ ವೇಳೆ ಸೆರೆಹಿಡಿಯುವಾಗ ಕಾರಿನ ನಂಬರ್‌ಗಳು, ಮನೆ ನಂಬರ್‌ಗಳು, ವ್ಯಕ್ತಿಯ ಚಹರೆಗಳು ಇದರಲ್ಲಿ ದಾಖಲಾಗುತ್ತವೆ. ಇದರಿಂದ ಖಾಸಗಿತನಕ್ಕೆ ಧಕ್ಕೆಯಾಗಲಿದೆ ಎಂದೇ ಹೇಳಲಾಗುತ್ತಿತ್ತು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.