ಫೇಸ್‌ಬುಕ್‌, ಟ್ವಿಟರ್‌ಗೆ ನಿಷೇಧದ ಭೀತಿ : ಸರಕಾರದ ನಿಯಮ ಪಾಲನೆ ವಿಫ‌ಲ ಹಿನ್ನೆಲೆ ಕ್ರಮ

Team Udayavani, May 25, 2021, 7:30 AM IST

ಫೇಸ್‌ಬುಕ್‌, ಟ್ವಿಟರ್‌ಗೆ ನಿಷೇಧದ ಭೀತಿ : ಕೇಂದ್ರ ಸರಕಾರದ ನಿಯಮ ಪಾಲನೆ ವಿಫ‌ಲ ಹಿನ್ನೆಲೆ ಕ್ರಮ

ಹೊಸದಿಲ್ಲಿ: ಸದ್ಯದಲ್ಲೇ ದೇಶಾದ್ಯಂತ ಫೇಸ್‌ಬುಕ್‌, ಟ್ವಿಟರ್‌ ಬ್ಯಾನ್‌ ಆಗಲಿವೆಯೇ?
ಡಿಜಿಟಲ್‌ ಕಂಟೆಂಟ್‌ ಗಳ ಮೇಲೆ ನಿಯಂತ್ರಣ ಹೇರಲು ಕೇಂದ್ರ ಸರಕಾರ ಜಾರಿ ಮಾಡಿರುವ ನಿಯಮಗಳನ್ನು ಟ್ವಿಟರ್‌, ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂ ಸೇರಿದಂತೆ ಬಹುತೇಕ ಸಾಮಾಜಿಕ ಜಾಲತಾಣಗಳು ಇನ್ನೂ ಅನುಸರಿಸಿಲ್ಲ. ಮಂಗಳವಾರದಿಂದಲೇ ಈ ನಿಯಮಗಳು ಜಾರಿಗೆ ಬರಲಿದ್ದು, ನಿಯಮ ಪಾಲಿಸದ ತಾಣಗಳನ್ನು ಸರಕಾರ ಬ್ಲಾಕ್‌ ಮಾಡುವ ಸಾಧ್ಯತೆ ಅಧಿಕವಾಗಿದೆ.

ನಿಯಮ ಪಾಲನೆ ಅಧಿಕಾರಿಗಳ ನೇಮಕ, ಭಾರತದಲ್ಲಿರುವ ಆ ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ಸಂಖ್ಯೆ ಸಲ್ಲಿಕೆ, ದೂರುಗಳು ಬಂದರೆ ಕೂಡಲೇ ಪರಿಹರಿಸುವುದು, ಆಕ್ಷೇಪಾರ್ಹ ಕಂಟೆಂಟ್‌ ಗಳ ಮೇಲೆ ನಿಗಾ ಇಡುವುದು ಮತ್ತು ಅವುಗಳನ್ನು ತೆಗೆದುಹಾಕುವುದು ಸೇರಿದಂತೆ ಕೆಲವೊಂದು ನಿಯಮಗಳನ್ನು ಪಾಲಿಸುವಂತೆ ಕಳೆದ ಫೆ.25ರಂದು ಸರಕಾರ ಸೂಚಿಸಿತ್ತು. ಜತೆಗೆ ಇದನ್ನು ಪೂರ್ಣಗೊಳಿಸಲು 3 ತಿಂಗಳ ಗಡುವು ನೀಡಿತ್ತು. ಮೇ 25ರಂದು ಈ ಗಡುವು ಮುಗಿದಿದ್ದು, ಜಾಲತಾಣಗಳಿಗೆ ನಿಷೇಧದ ಭೀತಿ ಶುರುವಾಗಿದೆ.

ಟೂಲ್‌ಕಿಟ್‌: ಟ್ವಿಟರ್‌ಗೆ ನೋಟಿಸ್‌
ಹೊಸದಿಲ್ಲಿ: ಕಾಂಗ್ರೆಸ್‌ ನದ್ದು ಎನ್ನಲಾದ ಟೂಲ್‌ಕಿಟ್‌ ಅನ್ನು “ತಿರುಚಿದ ಅಂಶಗಳುಳ್ಳ ವಿಷಯ’ ಎಂದು ಉಲ್ಲೇಖೀಸಿದ್ದ ಟ್ವಿಟರ್‌ಗೆ ದಿಲ್ಲಿ ಪೊಲೀಸರ ವಿಶೇಷ ಘಟಕ ಸೋಮವಾರ ನೋಟಿಸ್‌ ಜಾರಿ ಮಾಡಿದೆ. ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ಅವರು ಟೂಲ್‌ಕಿಟ್‌ ಕುರಿತು ಮಾಡಿದ್ದ ಟ್ವೀಟ್‌ ಅನ್ನು ಟ್ವಿಟರ್‌ ಇತ್ತೀಚೆಗೆ “ತಿರುಚಿದ ಅಂಶಗಳುಳ್ಳ ವಿಷಯ’ ಎಂದು ಘೋಷಿಸದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ನೇತೃತ್ವದ ಸರಕಾರವನ್ನು ದೂಷಿಸಲೆಂದು ಕಾಂಗ್ರೆಸ್‌ ಈ ಟೂಲ್‌ ಕಿಟ್‌ ಸಿದ್ಧಪಡಿಸಿತ್ತು ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಇದನ್ನು ನಕಲಿ ಟೂಲ್‌ಕಿಟ್‌ ಎಂದು ಕರೆದಿದ್ದ ಕಾಂಗ್ರೆಸ್‌ ಎಫ್ಐಆರ್‌ ಕೂಡ ದಾಖಲಿಸಿತ್ತು. ಪ್ರಕರಣ ತನಿಖೆ ಹಂತದಲ್ಲಿರುವಾಗ ನೀವು ಮಧ್ಯಪ್ರವೇಶಿಸಬೇಡಿ ಎಂದು ಟ್ವಿಟರ್‌ಗೆ ಕೇಂದ್ರ ಸರಕಾರ ಖಡಕ್‌ ಸೂಚನೆಯನ್ನೂ ನೀಡಿತ್ತು. ಸೋಮವಾರ ಪೊಲೀಸರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಟ್ವಿಟರ್‌ ಸಂಸ್ಥೆಗೆ ನೋಟಿಸ್‌ ಜಾರಿ ಮಾಡಿದ್ದಾರೆ.

ರಮಣ್‌ ಸಿಂಗ್‌ ಹೇಳಿಕೆ ದಾಖಲು: ನಕಲಿ ಟೂಲ್‌ಕಿಟ್‌ ಹಂಚಿಕೊಂಡಿರುವ ಆರೋಪಕ್ಕೆ ಸಂಬಂಧಿಸಿ ಸೋಮವಾರ ರಾಯು³ರ ಪೊಲೀಸರು ಛತ್ತೀಸ್‌ ಗಡದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ರಮಣ್‌ ಸಿಂಗ್‌ ಅವರ ಹೇಳಿಕೆ ದಾಖಲಿಸಿ ಕೊಂಡಿದ್ದಾರೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.