ಕೋವಿಡ್ ಹಿನ್ನೆಲೆ : ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು!
Team Udayavani, Apr 15, 2021, 9:07 PM IST
ಚಂಡೀಗಢ : ಕೋವಿಡ್ ಸೋಂಕಿನ ಹರಡುವಿಕೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರ 10ನೇ ತರಗತಿಯ ಪರೀಕ್ಷೆಗಳನ್ನು ಗುರುವಾರ ರದ್ದುಗೊಳಿಸಿದ್ದು, 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಕನ್ವರ್, ಹರಿಯಾಣದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದೇ ಹಿನ್ನೆಲೆಯಲ್ಲಿ ಸಿಬಿಎಸ್ ಸಿ ಕೈಗೊಂಡ ನಿರ್ಧಾರವನ್ನು ಹರಿಯಾಣ ಸರ್ಕಾರವೂ ಅನುಸರಿಸಿದೆ ಎಂದಿದ್ದಾರೆ.
ಇದೇ ವೇಳೆ ಮತ್ತೊಂದು ಮಾಹಿತಿಯನ್ನು ತಿಳಿಸಿರುವ ಅವರು, ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ 10ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.
ಇನ್ನು ಹರಿಯಾಣದಲ್ಲಿ ಪ್ರೌಢಶಿಕ್ಷಣ ಮಂಡಳಿಯ ಪರೀಕ್ಷೆಗಳು ಏಪ್ರಿಲ್ ನಲ್ಲಿ ಶುರುವಾಗಿ ಮೇ ತಿಂಗಳ ಮಧ್ಯಭಾಗದಲ್ಲಿ ಮುಕ್ತಾಯವಾಗಬೇಕಿತ್ತು. ಸಿಬಿಎಸ್‌ಸಿಯು ಇದೇ ಮೊದಲ ಬಾರಿಗೆ ಬೋರ್ಡ್ ಪರೀಕ್ಷೆಗಳನ್ನು ಪೂರ್ಣಪ್ರಮಾಣದಲ್ಲಿ ರದ್ದುಗೊಳಿಸಿದೆ.