“ಹೊರ ರಾಜ್ಯಗಳಿಗೆ ದ್ರಾಕ್ಷಿ ಸಾಗಿಸಲು ಕ್ರಮ’
Team Udayavani, Apr 27, 2020, 10:27 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಗಳಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಕೃಷ್ಟಿ ಉತ್ಪನ್ನಗಳ ಸಾಗಾಟಕ್ಕೆ ವಿನಾಯಿತಿ ನೀಡಲಾಗಿದೆ. ಅದರಂತೆ, ರಾಜ್ಯದಲ್ಲಿ ಬೆಳೆದ ದ್ರಾಕ್ಷಿಯನ್ನು ಬೇರೆ ರಾಜ್ಯಗಳಿಗೆ ಸಾಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಲಾಕ್‌ಡೌನ್ ಹಿನ್ನೆಲೆಯಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಇಲ್ಲವಾಗಿದೆ ಎಂದು ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ
ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಹೆಚ್ಚುವರಿ ಸರ್ಕಾರಿ ವಕೀಲ ವಿಕ್ರಂ ಹುಯಿಲಗೋಳ ಅವರು ಈ ಬಗ್ಗೆ ಲಿಖೀತ
ಹೇಳಿಕೆ ಸಲ್ಲಿಸಿದ್ದಾರೆ. ಮುಖ್ಯವಾಗಿ ಪ್ರಸಕ್ತ 2020ನೇ ಸಾಲಿನಲ್ಲಿ ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರದ ಸುಮಾರು 3,815 ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು 88,771 ಮೆಟ್ರಿಕ್ ಟನ್ ದ್ರಾಕ್ಷಿ ಬೆಳೆ ಇಳುವರಿ ಬಂದಿದೆ.
ಲಾಕ್‌ಡೌನ್ ಆರಂಭದ ದಿನಗಳಲ್ಲಿ ಅಂತಾರಾಜ್ಯ ಸಂಚಾರವನ್ನು ನಿಷೇಧ ಮಾಡಿದ ಪರಿಣಾಮ ದ್ರಾಕ್ಷಿ ಮಾರಾಟಕ್ಕೆ ಮಾರುಕಟ್ಟೆ ಸೌಲಭ್ಯ ಇಲ್ಲವಾಗಿತ್ತು. ಇದೀಗ ದ್ರಾಕ್ಷಿ ಮಾರಾಟಕ್ಕೆ ಸೂಕ್ತ
ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದಕ್ಕಾಗಿ ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 18,824 ಮೆಟ್ರಿಕ್ ಟನ್ ದ್ರಾಕ್ಷಿ ಸರಬರಾಜು ಮಾಡಲು ತೋಟಗಾರಿಕೆ
ಇಲಾಖೆಯಿಂದ 600 ಪಾಸ್‌ಗಳನ್ನು ನೀಡಲಾಗಿದೆ. ಇದರಿಂದಾಗಿ ಕೇರಳ, ಒಡಿಶಾ, ದೆಹಲಿ, ಹೈದರಾಬಾದ್ ಮತ್ತಿತರ ಕಡೆ ದ್ರಾಕ್ಷಿ ಸಾಗಿಸಲು ಸಾಧ್ಯವಾಯಿತು. ಜೊತೆಗೆ, ದ್ರಾಕ್ಷಿ ಖರೀದಿ ಮಾಡುವ ಸಂಬಂಧ ಡಿಸ್ಟಲರೀಸ್ ಜೊತೆಗೆ ಸಭೆ ಸಹ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರಿಂದ ದಾಕ್ಷಿ ಖರೀದಿಸಿ, ಬೆಂಗಳೂರಿನ ಹಾಪ್ ಕಾಮ್ಸ್‌ನ 220 ಮಳಿಗೆಗಳು ಮತ್ತು 40 ಸಂಚಾರಿ ವಾಹನಗಳಲ್ಲಿ ದ್ರಾಕ್ಷಿ ಮಾರಾಟ ಮಾಡಲಾಗುತ್ತಿದೆ ಎಂದು ಹೈಕೋರ್ಟ್‌ಗೆ ತಿಳಿಸಲಾಗಿದೆ. ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಏ.28ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.