Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!
Team Udayavani, Jan 11, 2025, 7:12 PM IST
ಹೊಸದಿಲ್ಲಿ: ”ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ರಮೇಶ್ ಬಿಧುರಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಶೀಘ್ರದಲ್ಲೇ ಘೋಷಿಸಲಿದೆ” ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ(ಜ11) ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಕೇಜ್ರಿವಾಲ್, ”ಮುಖ್ಯಮಂತ್ರಿ ಅತಿಶಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳ ವಿವಾದಕ್ಕೆ ಕಾರಣವಾದ ಬಿಧುರಿ ಅವರ ವಿರುದ್ಧ ಕಿಡಿ ಕಾರಿದರು.
“ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಬಿಧುರಿ ಅವರ ಹೆಸರನ್ನು ಬಿಜೆಪಿಯ ಮುಖ್ಯಮಂತ್ರಿ ಮುಖ ಎಂದು ಅಧಿಕೃತವಾಗಿ ಘೋಷಿಸಲಾಗುವುದು ಎಂಬ ವರದಿಗಳು ನಮಗೆ ಬರುತ್ತಿವೆ. ಬಿಜೆಪಿಯ ಮುಖ್ಯಮಂತ್ರಿ ಮುಖವಾಗಿ ಆಯ್ಕೆಯಾದ ಬಿಧುರಿ ಅವರನ್ನು ನಾನು ಅಭಿನಂದಿಸುತ್ತೇನೆ” ಎಂದು ಕೇಜ್ರಿವಾಲ್ ಹೇಳಿದರು.
“ಬಿಧುರಿ ಅವರ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ ನಂತರ” ಬಿಜೆಪಿ ಮತ್ತು ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿಗಳ ನಡುವೆ ಸಾರ್ವಜನಿಕ ಚರ್ಚೆ ನಡೆಯಬೇಕು. 10 ವರ್ಷಗಳ ಕಾಲ ಸಂಸದರಾಗಿ ಬಿಧುರಿ ಏನು ಕೆಲಸ ಮಾಡಿದ್ದಾರೆ ಎಂಬುದನ್ನು ದೆಹಲಿ ಜನತೆಗೆ ಹೇಳಬೇಕು” ಎಂದು ಕೇಜ್ರಿವಾಲ್ ಹೇಳಿದರು.
ಫೆಬ್ರವರಿ 8 ರಂದು ನಡೆಯುವ ಚುನಾವಣೆಯಲ್ಲಿ ಯಾವ ಮುಖ್ಯಮಂತ್ರಿ ಅಭ್ಯರ್ಥಿ ಸೂಕ್ತ ಎಂಬುದನ್ನು ಜನರು ನಿರ್ಧರಿಸುತ್ತಾರೆ ಎಂದು ಕೇಜ್ರಿವಾಲ್ ಹೇಳಿದರು.
ಬಿಜೆಪಿ ಸಂಸದ ಮನೋಜ್ ತಿವಾರಿ ಅವರು ಕೇಜ್ರಿವಾಲ್‌ಗೆ ತಿರುಗೇಟು ನೀಡಿ” ನಮ್ಮ ಪಕ್ಷ ಶೀಘ್ರದಲ್ಲೇ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ. ದೆಹಲಿಯ ಜನರು ಈ ತಂತ್ರಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಬಿಜೆಪಿಯನ್ನು ಆಯ್ಕೆ ಮಾಡಲಿದ್ದಾರೆ ನಮ್ಮ ಪಕ್ಷದಿಂದಲೇ ಮುಖ್ಯಮಂತ್ರಿಯಾಗುತ್ತಾರೆ.” ಎಂದರು.
ಬಿಧುರಿ ವಿವಾದದ ಮೇಲೆ ವಿವಾದ
ಬಿಜೆಪಿ ನಾಯಕ ಬಿಧುರಿ ”ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕೆನ್ನೆಯಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಭರವಸೆ ನೀಡುವ ಮೂಲಕ ಬಿಧುರಿ ವಿವಾದವನ್ನು ಹುಟ್ಟುಹಾಕಿದ್ದರು.ಅದೇ ದಿನ, ದೆಹಲಿ ಮುಖ್ಯಮಂತ್ರಿ ಅತಿಶಿ ಅವರ ಉಪನಾಮ ‘ಮರ್ಲೆನಾ’ ಬಳಸುವುದನ್ನು ನಿಲ್ಲಿಸುವ ನಿರ್ಧಾರವನ್ನು ಉಲ್ಲೇಖಿಸಿ ಮರ್ಲೆನಾ ಸಿಂಗ್ ಆಗಿದ್ದಾರೆ. ಆಕೆ ತನ್ನ ತಂದೆಯನ್ನೇ ಬದಲಾಯಿಸಿದ್ದಾಳೆ” ಎಂದು ಹೇಳಿಕೆ ನೀಡುವ ಮೂಲಕ ವಿವಾದದ ಮೇಲೆ ವಿವಾದ ಹುಟ್ಟು ಹಾಕಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.