ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು : ಜಿಲ್ಲಾಧಿಕಾರಿ
ಮಾದಕ ವ್ಯಸನ ವಿರೋಧಿ ಮಾಸಾಚರಣೆ
Team Udayavani, Jul 14, 2019, 5:07 AM IST
ಉಡುಪಿ: ಮಾದಕ ವ್ಯಸನ ವಿರೋಧಿ ಮಾಸಾಚರಣೆ ಸಮಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮೂಲಕ ಧನಾತ್ಮಕ ವಾತಾವರಣವನ್ನು ಸೃಷ್ಟಿಸಬೇಕು. ಮಾದಕ ವ್ಯಸನ ಚಟುವಟಿಕೆಯಲ್ಲಿ ತೊಡಗಿಕೊಂಡಿರುವವರು ಕಂಡು ಬಂದರೆ ತತ್‌ಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದರು.
ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾದ “ಮಾದಕ ವ್ಯಸನ ವಿರೋಧಿ ಮಾಸಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಂತ್ರಜ್ಞಾನ ಮುಂದುವರಿದಿರುವ ಈ ಸಮಯದಲ್ಲಿ ಮಾದಕ ವ್ಯಸನ ವಿರೋಧಿ ಮಾಸಾಚರಣೆ ಬಗ್ಗೆ ಜಾಗೃತಿ ಮೂಡಿಸುವುದು ಅತೀ
ಆವಶ್ಯಕವಾಗಿದೆ.
ಉಡುಪಿ-ಮಣಿಪಾಲ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಮಾಹಿತಿ ನೀಡುವ ಕೆಲಸ ಆಗಬೇಕು ಎಂದರು.
ಕಾಳಜಿ ಅಗತ್ಯ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಾದಕ ವ್ಯಸನವನ್ನು ತಡೆಯುವ ನಿಟ್ಟಿನಲ್ಲಿ ವಿಶ್ವಾದ್ಯಂತ ಮಾದಕ ವ್ಯಸನ ವಿರೋಧಿ ಮಾಸಾಚರಣೆಯನ್ನು ಆಚರಿಸಲಾಗುತ್ತಿದೆ. ಮಾದಕ ವಸ್ತುಗಳ ಬೇಡಿಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡಬೇಕು. ಯುವ ಜನರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಶಿಕ್ಷಕರು, ಶಾಲಾ-ಕಾಲೇಜು, ಪ್ರಾಂಶುಪಾಲರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಭಾವ ಬೀರಬಹುದು. ಈ ಚಟುವಟಿಕೆಯಲ್ಲಿ ತೊಡಗಿರುವವರು ಅದರಿಂದ ಹೊರಬರಲು ಪ್ರಯತ್ನಿಸಬೇಕು ಎಂದರು.ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್‌ಚಂದ್ರ, ಶಾಲಾ-ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಣ ಇಲಾಖೆಗಳ ಮುಖ್ಯಸ್ಥರು, ಪೊಲೀಸ್ ಸಿಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿವಾನಂದ ನಾಯರಿ ಕಾರ್ಯಕ್ರಮ ನಿರೂಪಿಸಿದರು. ಡಿವೈಎಸ್‌ಪಿ ಜಯ್‌ಶಂಕರ್ ವಂದಿಸಿದರು.
ಮಾದಕ ವ್ಯಸನ ಚಕ್ರವ್ಯೂಹದಂತೆ
ಖ್ಯಾತ ಮನೋರೋಗ ತಜ್ಞರಾದ ಡಾ| ಪಿ.ವಿ.ಭಂಡಾರಿ ಮಾತನಾಡಿ, ಈಗಿನ ಮಕ್ಕಳು 14, 16ನೇ ವಯಸ್ಸಿಗೆ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇದೊಂದು ಚಕ್ರವ್ಯೂಹವಾಗಿದ್ದು, ಇದರೊಳಗೆ ಸೇರಿಕೊಂಡರೆ ಹೊರಬರುವುದು ತೀರಾ ಕಷ್ಟ ಎಂದರು. 10 ವರ್ಷ ಕಳೆದ ಬಳಿಕ ಮೊಬೈಲ್ ಬಳಕೆ ಕೂಡ ವ್ಯಸನದಂತೆ ಆಗಬಹುದು. ಆತಂಕ, ಖನ್ನತೆ ಮರೆಮಾಚಲು ಕೆಲವರು ಕುಡಿತದ ವ್ಯಸನ ಬೆಳೆಸಿಕೊಳ್ಳುತ್ತಾರೆ. ಆದರೆ ಆಲ್ಕೋಹಾಲ್ ಸೇವನೆಯಿಂದ ಒತ್ತಡ ಅಧಿಕವಾಗುತ್ತದೆ ಎಂದರು. ವಿದ್ಯಾರ್ಥಿಗಳು ಸೋಲನ್ನು ಸಹಿಸುವುದಿಲ್ಲ. ಇದೇ ಕಾರಣಕ್ಕೆ ಆತ್ಮಹತ್ಯೆ, ಮಾದಕ ವ್ಯಸನಗಳಂತಹ ಪ್ರಕರಣಗಳು ನಡೆಯುತ್ತವೆ. ಈ ಬಗ್ಗೆ ಪ್ರತೀ ಮನೆಯಲ್ಲಿಯೂ ಜಾಗೃತಿ ಆಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.