ಕೋವಿಡ್ ಲಸಿಕೆ; ಬಾಬಾ ರಾಮ್ ದೇವ್ ಯೂಟರ್ನ್…ವೈದ್ಯರು ಭೂಮಿಯ ಮೇಲಿನ ದೇವರ ದೂತರಾಗಿದ್ದಾರೆ
ವ್ಯಕ್ತಿಯೂ ಸಾಯುವುದಿಲ್ಲ ಎಂದು ಹರಿದ್ವಾರದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ರಾಮ್ ದೇವ್ ತಿಳಿಸಿದ್ದಾರೆ.
Team Udayavani, Jun 11, 2021, 8:42 AM IST
ನವದೆಹಲಿ: ತನಗೆ ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ಕೋವಿಡ್ 19 ಲಸಿಕೆ ಅಗತ್ಯವಿಲ್ಲ ಎಂದು ವೈದ್ಯರು ಹಾಗೂ ಅಲೋಪತಿ ವೈದ್ಯ ಪದ್ಧತಿ ವಿರುದ್ಧ ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದ ಬಾಬಾ ರಾಮ್ ದೇವ್ ಇದೀಗ ಉಲ್ಟಾ ಹೊಡೆದಿದ್ದು, ತಾನು ಶೀಘ್ರವೇ ಕೋವಿಡ್ ಲಸಿಕೆ ತೆಗೆದುಕೊಳ್ಳುವೆ, ಅಲ್ಲದೇ ವೈದ್ಯರು ಭೂಮಿಯ ಮೇಲಿನ ದೇವರ ದೂತರು ಎಂದು ಬಣ್ಣಿಸಿದ್ದಾರೆ.
ಇದನ್ನೂ ಓದಿ:ಭಾಸ್ಕರ ಶೆಟ್ಟಿ ಕೊಲೆ: ಪತ್ನಿ, ಮಗ ಜೈಲುಪಾಲು ಕೋಟ್ಯಂತರ ರೂ. ಆಸ್ತಿಯದ್ದೇ ಪ್ರಶ್ನೆ
ಬಾಬಾ ರಾಮ್ ದೇವ್ ಇತ್ತೀಚೆಗಷ್ಟೇ ಕೋವಿಡ್ 19 ಹಾಗೂ ಅಲೋಪತಿ ಔಷಧಿಗಳ ಪರಿಣಾಮದ ಕುರಿತು ವಿರೋಧ ವ್ಯಕ್ತಪಡಿಸಿ ಹೇಳಿಕೆ ನೀಡಿ ವಿವಾದ ಹುಟ್ಟು ಹಾಕಿದ್ದರು. ಇದರಿಂದ ಐಎಂಎ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಕೋಟ್ಯಂತರ ರೂಪಾಯಿ ಮಾನನಷ್ಟ ಮೊಕದ್ದಮೆಯ ನೋಟಿಸ್ ಜಾರಿಗೊಳಿಸಿತ್ತು. ಆದರೂ ಕ್ಷಮೆಯಾಚಿಸದ ಬಾಬಾರಾಮ್ ದೇವ್ ತನ್ನನ್ನು ಬಂಧಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದರು.
ಏತನ್ಮಧ್ಯೆ ಜೂನ್ 21ರಿಂದ ದೇಶದಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯನ್ನು ಸ್ವಾಗತಿಸಿರುವ ಬಾಬಾ ರಾಮ್ ದೇವ್, ಇದನ್ನು ಐತಿಹಾಸಿಕ ಹೆಜ್ಜೆ ಎಂದು ಕೊಂಡಾಡಿದ್ದು, ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿಕೊಂಡಿರುವುದಾಗಿ ವರದಿ ವಿವರಿಸಿದೆ.
ಲಸಿಕೆಯ ಎರಡು ಡೋಸ್ ಗಳನ್ನು ಪಡೆಯಿರಿ ಮತ್ತು ಯೋಗ ಮತ್ತು ಆಯುರ್ವೇದದಿಂದ ದುಪ್ಪಟ್ಟು ರಕ್ಷಣೆ ದೊರೆಯಲಿದೆ. ಹೀಗೆ ಲಸಿಕೆ, ಯೋಗ ಮತ್ತು ಆಯುರ್ವೇದ ಚಿಕಿತ್ಸೆಯಿಂದ ಹೆಚ್ಚಿನ ರಕ್ಷಣೆ ಪಡೆಯುವ ಮೂಲಕ ಕೋವಿಡ್ ನಿಂದ ಒಬ್ಬ ವ್ಯಕ್ತಿಯೂ ಸಾಯುವುದಿಲ್ಲ ಎಂದು ಹರಿದ್ವಾರದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ರಾಮ್ ದೇವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.