ಬಳ್ಳಾರಿ : ಗಮನಸೆಳೆದ ಸುಗ್ಗಿ ಹುಗ್ಗಿಯ ಜಾನಪದ ಸಂಭ್ರಮ
ಸುಗ್ಗಿ ಹುಗ್ಗಿ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಕಹಳೆವಾದನ, ಹಗಲುವೇಷ, ಡೊಳ್ಳುಕುಣಿತ ಕಲಾವಿದರು ಗಮನ ಸೆಳೆದರು.
Team Udayavani, Feb 1, 2021, 5:43 PM IST
ಬಳ್ಳಾರಿ: ರೈತ ಇಲ್ಲದಿದ್ದರೆ ಜಗತ್ತೇ ಇಲ್ಲ. ರೈತನ ಕಷ್ಟದ ಪ್ರತಿಫಲದಿಂದಾಗಿ ಸಮಾಜದಲ್ಲಿ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂದು
ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್. ಹನುಮಂತಪ್ಪ ಅಭಿಪ್ರಾಯ ಪಟ್ಟರು.
ನಗರದ ಜಿಪಂ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸುಗ್ಗಿ ಹುಗ್ಗಿ ಜಾನಪದ
ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಅಭಿವೃದ್ಧಿಗೆ ಜಿಪಂ ಅ ಧಿಕಾರಿಗಳು ಸಹಕರಿಸುವ ಮೂಲಕ ಗ್ರಾಮೀಣ ಭಾಗಕ್ಕೆ ಹೆಚ್ಚಿನ ಒತ್ತು ನೀಡಬೇಕು. ಈ ಮೂಲಕ ಅಲ್ಲಿನ ಜನರ ಏಳಿಗೆಗೆ ಸಹಕರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಉಪ ನಿರ್ದೇಶಕ, ವೀ.ವಿ. ಸಂಘದ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ ಮಾತನಾಡಿ, ಜಾನಪದ ಕಲೆ ಸಂಸ್ಕೃತಿ ಜೀವಾಳ. ಜಾನಪದ ಉಳಿದರೆ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಸ್ತುವಾರಿ ಮತ್ತು ಮೌಲ್ಯ ಮಾಪನದ ಸಹಾಯಕ ನಿರ್ದೇಶಕಿ ಎಸ್. ಶಾಂತಲಾ, ಜಿಪಂ ಉಪ ಕಾರ್ಯದರ್ಶಿ ಶರಣಬಸಪ್ಪ ಮಾತನಾಡಿದರು.
ಜಿಪಂ ಅಧಿ ಕಾರಿಗಳಾದ ಹಿರೇಮಠ, ಚಿತ್ರಕಲಾವಿದ ಮಂಜುನಾಥ್ ಗೋವಿಂದ ವಾಡ್, ನೃತ್ಯ ಪಟುಗಳು ಹಾಗೂ ರಾಜ್ಯಪ್ರಶಸ್ತಿ ಪುರಸ್ಕೃತ ಜಿಲಾನಿ ಬಾಷಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ.ರಂಗಣ್ಣನವರು ಇದ್ದರು. ನಂತರ ಜಾನಪದ ಸಂಭ್ರಮ ಬಿಂಬಿಸುವ ವಿವಿಧ ಪ್ರದರ್ಶನಗಳು ನಡೆದವು.
ಓದಿ: ಮಂಗಳೂರಿನ ಹೋಟೆಲ್ ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ: ಪ್ರೇಮ ವೈಫಲ್ಯವೇ ಕಾರಣ, ಮೂವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.