ಜಿಲ್ಲಾದ್ಯಂತ ಅಂಬೇಡ್ಕರ್ ಜಯಂತಿ ಆಚರಣೆ
ಪ್ರಮುಖ ಬೀದಿಗಳಲ್ಲಿ ಭಾವಚಿತ್ರ ಮೆರವಣಿಗೆ ಬೀದರ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣ
Team Udayavani, Apr 15, 2019, 11:38 AM IST
ಬೀದರ: ನಗರದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಉತ್ಸವ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಜಿಲ್ಲೆಯ ಜನರಪ್ರತಿನಿಧಿಗಳು ಭಾಗವಹಿಸಿದ್ದರು.
ಬೀದರ: ಜಿಲ್ಲಾದ್ಯಂತ ಡಾ| ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸುಡುವ ಬಿಸಿಲನ್ನು ಲೆಕ್ಕಿಸದೇ ಅಂಬೇಡ್ಕರ್ ಅವರ ಅನುಯಾಯಿಗಳು, ರಾಜಕೀಯ ಮುಖಂಡರು ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ಅಂಬೇಡ್ಕರ್ ಜಯಂತುತ್ಸವ ಸಮಿತಿ ವತಿಯಿಂದ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ಎಲ್ಲಾ ಕಡೆಗಳಲ್ಲಿ ಧ್ವಜಗಳು ರಾರಾಜಿಸುತ್ತಿದ್ದವು. ಪ್ರಮುಖ ಬೀದಿಗಳಲ್ಲಿ ತಂಡ-ತಂಡವಾಗಿ ಅಂಬೇಡ್ಕರ್ ಭಾವಚಿತ್ರವನ್ನು ವಾಹನದಲ್ಲಿ ಇರಿಸಿ ಮೆರವಣಿಗೆ ಮಾಡಲಾಯಿತು.
ಮೆರವಣಿಗೆಯ ದಾರಿಯುದ್ದಕ್ಕೂ ಮಹಿಳೆಯರು, ಮಕ್ಕಳು, ಯುವಕರು ಭಾಗವಹಿಸಿದ್ದರು. ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಸಾರ್ವಜನಿಕರು ಸಾಲು ಸಾಲಾಗಿ ನಿಂತು ವೀಕ್ಷಿಸಿದರು. ನಗರದ
ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಭಗತ್‌ಸಿಂಗ್ ವೃತ್ತ, ಗವಾನ್ ಚೌಕ್, ಚೌಬಾರಾ, ನೌಬಾದ ಮುಂತಾದ ಕಡೆಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಮೆರವಣಿಗೆ ನಡೆಯುತ್ತಿದ್ದ ರಸ್ತೆಗಳ ಸಂಚಾರ ಬಂದ್ ಮಾಡಲಾಗಿತ್ತು. ಸಂಚಾರಿ ಪೊಲೀಸರು ವಾಹನ ಸವಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ, ಕ್ರೀಡಾ ಸಚುವ ರಹೀಮ್ ಖಾನ್, ಜಿಲ್ಲಾ ಧಿಕಾರಿ ಡಾ|ಎಚ್. ಆರ್. ಮಹಾದೇವ, ಜಿಪಂ ಸಿಇಒ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಟಿ.ಶ್ರೀಧರ್, ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದ ಅರಳಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಆನಂದ ದೇವಪ್ಪ, ರಹೀದಾಸ್ ಗೊಡೆ, ಫರ್ನಾಡಿಸ್ ಹಿಪ್ಪಳಗಾಂವ್, ಸಂಜಯ ಜಾಗಿರದಾರ್, ರಾಜು ಕಡ್ಯಾಳ್, ಬಸವರಾಜ ಪವಾರ, ಮಾರುತಿ
ಬೌದ್ಧೆ, ಅಶೋಕ ಕುಮಾರ ಕರಂಜಿ, ಶಿವರಾಜ ಕುದರೆ, ಪಂಡಿತ ಚಿದ್ರಿ, ವಿಜಯಕುಮಾರ ಸೋನಾರೆ ಸೇರಿದಂತೆ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.