Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Team Udayavani, Jan 9, 2025, 11:18 AM IST
ಬೀದರ್: ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಸ್ವಾಭಿಮಾನಿ ಡಾ. ಬಿ.ಆರ್ ಅಂಬೇಡ್ಕರ್ ಹೋರಾಟ ಸಮಿತಿ ಗುರುವಾರ ಕರೆ ನೀಡಿರುವ ಬೀದರ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ ಹಿನ್ನಲೆ ನಗರದ ಅಂಗಡಿ-ಮುಗ್ಗಟ್ಟುಗಳು ಸಂಪೂರ್ಣ ಬಂದ್ ಆಗಿದ್ದು, ಸಾರಿಗೆ ಸಂಚಾರ ಸ್ಥಗಿತಗೊಂಡಿದೆ. ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಆಟೋ ಸೇರಿದಂತೆ ಯಾವುದೇ ವಾಹನಗಳು ರಸ್ತೆಗಿಳಿದಿಲ್ಲ. ಆಸ್ಪತ್ರೆ, ಔಷಧಿ ಮಳಿಗೆಗಳು ಮಾತ್ರ ಎಂದಿನಂತೆ ತೆರೆದಿವೆ. ಹಾಗಾಗಿ ನಗರದ ರಸ್ತೆಗಳು ಬಿಕೋ ಎನ್ನುತ್ತಿವೆ.
ಸಮಿತಿಯ ಹೋರಾಟಕ್ಕೆ ಬಿಎಸ್‌ಪಿ, ಆರ್‌ಪಿಐ ಪಕ್ಷ ಸೇರಿದಂತೆ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮುಖಂಡರು ಮತ್ತು ಕಾರ್ಯಕರ್ತರು ಕೈಯಲ್ಲಿ ನೀಲಿ ಧಜ ಹಿಡಿದುಕೊಂಡು ಜಯ ಘೋಷಣೆಗಳೊಂದಿಗೆ ನಗರದಲ್ಲಿ ಬೈಕ್ ಹಾಗೂ ಕಾರುಗಳಲ್ಲಿ ಸುತ್ತಾಡುತ್ತಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ ಸೇರಿ ಪ್ರಮುಖ ವೃತ್ತ, ರಸ್ತೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ: Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.