ಒಬಿಸಿ ಮೋರ್ಚಾ ಪ್ರ.ಕಾರ್ಯದರ್ಶಿ ಸಿದ್ದೇಶ್ ಯಾದವ್ ನಿಧನ
ಬಿಜೆಪಿ ಕಚೇರಿಯಲ್ಲೇ ಹೃದಯಾಘಾತ
Team Udayavani, Jul 3, 2023, 11:05 PM IST
ಬೆಂಗಳೂರು: ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಿದ್ದೇಶ್ ಯಾದವ್ ಅವರು ಸೋಮವಾರ ಪಕ್ಷದ ಕಚೇರಿಯಲ್ಲಿ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ.
ಬಳ್ಳಾರಿ ಜಿಲ್ಲಾ ಪ್ರಭಾರಿಯೂ ಆಗಿದ್ದ ಸಿದ್ದೇಶ್ ಅವರು ಸೋಮವಾರ ಪಕ್ಷದ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಭಾರಿಗಳ ಸಭೆಗೆ ಆಗಮಿಸಿದ್ದರು. ಸಭೆ ಮುಗಿಸಿ ಹೊರಡುವ ವೇಳೆ ಪಕ್ಷದ ಕಚೇರಿಯಲ್ಲೇ ಕುಸಿದಿದ್ದಾರೆ. ತತ್‌ಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
49 ವರ್ಷ ವಯಸ್ಸಿನ ಸಿದ್ದೇಶ್ ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದು, ಮಂಗಳವಾರ ಹುಟ್ಟೂರಾದ ಹಿರಿಯೂರಿನ ಬಸಪ್ಪ ಮಾಳಿಗೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಿದ್ದೇಶ್ ನಿಧನಕ್ಕೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಹಿತ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಪಕ್ಷ ಸಂಘಟನೆಗೆ ಕೊಡುಗೆ
1988ರಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಲ್ಲಿ (ಎಬಿವಿಪಿ) ಗುರುತಿಸಿಕೊಂಡಿದ್ದ ಸಿದ್ದೇಶ್, ನಗರ ಕಾರ್ಯದರ್ಶಿ, ರಾಜ್ಯ ಕಾರ್ಯಕಾರಿಣಿ ಸದಸ್ಯ, ಚಿತ್ರದುರ್ಗ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2008ರಿಂದ 2011ರ ವರೆಗೆ ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ರಾಜಕೀಯ ಪ್ರವೇಶಿಸಿದರಲ್ಲದೆ, 2013ರಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು.
ಸಿದ್ದೇಶ್ ಯಾದವ್ ಅಕಾಲಿಕ ನಿಧನ ಆಘಾತಕರ. ಎಬಿವಿಪಿ ಪೂರ್ಣಾವಧಿ ಕಾಯಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಈ ಹಿಂದೆ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಹಿತ ಪರಿವಾರ ಸಂಘಟನೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ಅವರ ನಿಧನ ಅತ್ಯಂತ ನೋವು ತಂದಿದೆ.
– ನಳಿನ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ
ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿ, ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸಿದ್ದೇಶ್ ಅವರು ಕ್ರಿಯಾಶೀಲ ವ್ಯಕ್ತಿಯಾಗಿದ್ದರು. ಸ್ವಾರ್ಥವಿಲ್ಲದೆ ಸೇವೆ ಸಲ್ಲಿಸುತ್ತಿದ್ದ ಅವರ ನಿಧನ ನೋವು ತಂದಿದೆ.
– ಸಿ.ಟಿ. ರವಿ, ರಾಷ್ಟ್ರೀಯ ಪ್ರ.ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.