By Election: ನಾಲ್ಕು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ
ಬೊಮ್ಮಾಯಿ, ಕೋಟ, ಚೌಟ, ಅಶೋಕ್, ಬೆಲ್ಲದ್ ಸೇರಿ ಹಲವರಿಗೆ ಹೊಣೆ
Team Udayavani, Jul 6, 2024, 8:54 PM IST
ಬೆಂಗಳೂರು : ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭೆ ಹಾಗೂ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಬ್ರಿಜೇಶ್ ಚೌಟ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಅವರನ್ನು ನೇಮಿಸಲಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತದೆ.
ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ವಿಪಕ್ಷ ನಾಯಕ ಆರ್.ಅಶೋಕ್, ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಶಾಸಕರಾದ ಮಹೇಶ್ ಟೆಂಗಿನಕಾಯಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ನೇಮಕ ಮಾಡಲಾಗಿದೆ.
ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಮುಂದಿನ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಉಪಚುನಾವಣೆಗಳಿಗೆ ಈ ಕೆಳಕಂಡ ಪ್ರಮುಖರನ್ನು ಉಸ್ತುವಾರಿಗಳನ್ನಾಗಿ ನೇಮಿಸಿ, ಆದೇಶ ಹೊರಡಿಸಿದ್ದಾರೆ. pic.twitter.com/3xKyPBJ3nr
— BJP Karnataka (@BJP4Karnataka) July 6, 2024
ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಸದ ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹಾಗೂ ಕೆ.ಎಸ್.ನವೀನ್ ಅವರನ್ನು ನಿಯೋಜಿಸಲಾಗಿದೆ.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ, ಶಾಸಕ ಎಂ.ಕೃಷ್ಣಪ್ಪ, ಪರಿಷತ್ ಸದಸ್ಯ ಎಚ್.ಎಸ್.ಗೋಪಿನಾಥ್ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿಯವರನ್ನು ನೇಮಿಸಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.