Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Team Udayavani, Dec 20, 2024, 11:45 PM IST
ಬೆಳಗಾವಿ: ಬಂಧಿತ ಸಿ.ಟಿ. ರವಿ ಅವರನ್ನು ಶುಕ್ರವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶ ಡಿ’ಸೋಜಾ ಆದೇಶ ಕಾಯ್ದಿರಿಸಿ ವಿಚಾರಣೆಯನ್ನು ಅಪರಾಹ್ನ 3 ಗಂಟೆಗೆ ಮುಂದೂಡಿದರು.
ಈ ಅವಧಿಯಲ್ಲಿ ಸಿ.ಟಿ. ರವಿ ಅವರು ನ್ಯಾಯಾಲಯದ ಆವರಣದಲ್ಲೇ ಕುಳಿತಿದ್ದರು. ಸ್ವಲ್ಪ ಹೊತ್ತಿನ ಬಳಿಕ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು ಜಾಮೀನು ನೀಡದೆಯೇ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಿ ಆದೇಶಿಸಿದರು. ಅನಂತರ ಅಪರಾಹ್ನ 2.10ಕ್ಕೆ ಸಿ.ಟಿ. ರವಿ ಅವರನ್ನು ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಯಿತು. ಇದಕ್ಕೂ ಮುನ್ನ ರವಿ ಅವರು ನ್ಯಾಯಾಧೀಶರ ಮುಂದೆ ರಾತ್ರಿಯಿಡೀ ಪೊಲೀಸರು ಕೊಟ್ಟ ತೊಂದರೆಗಳ ಬಗ್ಗೆ ವಿವರಿಸಿದರು. ಮೂರು ಬಾರಿ ನನ್ನ ಮೇಲೆ ಹಲ್ಲೆ ಯತ್ನ ಆಗಿದೆ. ನಾನು ಪ್ರತಿ ದೂರು ನೀಡಿದರೂ ಪೊಲೀಸರು ಸ್ವೀಕರಿಸಿಲ್ಲ ಎಂದರು.
ಪ್ರಕರಣ ಈ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಈ ಹಿನ್ನೆಲೆ ಯಲ್ಲಿ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗುತ್ತದೆ. ಸಿ.ಟಿ. ರವಿ ಅವರನ್ನು ಗೌರವದಿಂದ 24 ಗಂಟೆಯೊಳಗೆ ಬೆಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ನ್ಯಾಯಾಧೀಶರು ಆದೇಶಿಸಿದರು.
ವಿಚಾರಣೆ ಸಂದರ್ಭದಲ್ಲಿ ರವಿ ಅವರನ್ನು ತಮ್ಮ ವಶಕ್ಕೆ ಕೊಡುವಂತೆ ಪೊಲೀಸರು ಮನವಿ ಮಾಡಿದರು. ಇದನ್ನು ಮಾನ್ಯ ಮಾಡದ ನ್ಯಾಯಾಧೀಶರು, ಬೆಂಗಳೂರು ಪ್ರಯಾಣದ ಅವಧಿಯ ಬಗ್ಗೆ ಕೇಳಿದರು. ಕೇವಲ ಪ್ರಯಾಣ ಮಾಡುವ ಅವಧಿಯಲ್ಲಿ ಮಾತ್ರ ಅವರು ನಿಮ್ಮ ವಶದಲ್ಲಿರುತ್ತಾರೆ. ಪ್ರಯಾಣದ ಸಂದರ್ಭದಲ್ಲಿ ಸಿ.ಟಿ. ರವಿ ಅವರಿಗೆ ವೈದ್ಯಕೀಯ ಸೌಲಭ್ಯ ಹಾಗೂ ಆಹಾರವನ್ನು ನೀಡುವಂತೆ ನ್ಯಾಯಾಧೀಶರು ಸೂಚನೆ ನೀಡಿದರು ಎಂದು ಸಿ.ಟಿ.ರವಿ ಪರ ವಕೀಲ ರವಿರಾಜ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.