ಇಂದಿನಿಂದ ಐದು ದಿನ ಸಂಪೂರ್ಣ ಲಾಕ್ ಡೌನ್
Team Udayavani, May 20, 2021, 9:31 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮೇ 20ರ ಬೆಳಿಗ್ಗೆ 10ಗಂಟೆಯಿಂದ ಮೇ 24ರ ಬೆಳಿಗ್ಗೆ 6ಗಂಟೆಯ ವರೆಗೆ ಜಿಲ್ಲೆಗೆ ಸೀಮಿತವಾಗಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು.
ಬುಧವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ಜಿಲ್ಲಾದ್ಯಂತ ವ್ಯಾಪಿಸುತ್ತಿದೆ. ಬೆಂಗಳೂರು ನಗರ ಹಾಗೂ ಬೇರೆ ಜಿಲ್ಲೆಗಳಿಂದ ಗ್ರಾಮೀಣ ಪ್ರದೇಶಕ್ಕೆ ಜನರು ವಲಸೆ ಬಂದು ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ತಿರುಗಾಡಿದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಸೋಂಕು ವ್ಯಾಪಿಸುತ್ತಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಹರಡುತ್ತಿರುವ ಸೋಂಕು ನಿಯಂತ್ರಿಸುವುದು ಆದ್ಯತೆಯಾಗಿದ್ದು, ಚಿಕ್ಕಮಗಳೂರು ತಾಲೂಕು ಕಳಸಾಪುರ ಗ್ರಾಮವೊಂದರಲ್ಲಿ 73 ಸೋಂಕು ಪ್ರಕರಣ, ಅಲ್ಲಂಪುರ ಗ್ರಾಮದಲ್ಲಿ 123 ಮೂಡಿಗೆರೆ ತಾಲೂಕು ಮರಸಣಿಗೆ, ಬಣಕಲ್, ಕಡೂರು ತಾಲ್ಲೂ ಕು ಎಮ್ಮೆದೊಡ್ಡಿ, ಯಗಟಿ ತರೀಕೆರೆ ತಾಲ್ಲೂಕು ಅಜ್ಜಂಪುರ ತಾಲೂಕು ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವುದನ್ನು ತಡೆಯ ಬೇಕಿದೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಧಿಸಿ ಆದೇಶ ಹೊರಡಿ ಸಲಾಗಿದೆ ಎಂದರು.
ಮೇ 20ರ ಬೆಳಿಗ್ಗೆ 6ಗಂಟೆಯಿಂದ 10ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಸೂಪರ್ ಮಾರ್ಕೆಟ್ ಬಂದ್ ಇರಲಿವೆ. 10ಗಂಟೆಯ ಬಳಿಕ ನಗರ ಸೇರಿದಂತೆ ಪಟ್ಟಣ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜನಸಂಚಾರ ಮತ್ತು ವಾಹನ ಸಂಚಾರ ಸಂಪೂರ್ಣ ನಿಷೇ ಧಿಸಲಾಗಿದೆ ಎಂದು ತಿಳಿಸಿದರು.
ಅಗತ್ಯ ವಸ್ತು ಸರಕು ಸಾಗಾಣೆ ವಾಹನ ಮತ್ತು ತುರ್ತು ವೈದ್ಯಕೀಯ ಸೇವೆ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತುರ್ತು ವೈದ್ಯಕೀಯ ಸೇವೆ ಪಡೆಯಲು ತೆರಳುವವರು ಅಗತ್ಯ ದಾಖಲೆಗಳನ್ನು ತೊರಿಸಬೇಕು. 4ದಿನಗಳು ಈ ಕಠಿಣ ಲಾಕ್‌ಡೌನ್ ವಿಧಿಸಲಾಗಿದ್ದು, ಮೇ 24ರ ಬಳಿಕ ರಾಜ್ಯ ಸರ್ಕಾರದ ಆದೇಶದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
4ದಿನಗಳ ಅವಧಿಯಲ್ಲಿ ಕೈಗಾರಿಕೆ, ವಾಣಿಜ್ಯ ವಹಿವಾಟು ಬಂದ್ ಆಗಲಿವೆ. ಸರ್ಕಾರಿ ಕಚೇರಿ, ಬ್ಯಾಂಕ್ ಕೋವಿಡ್ ಮಾರ್ಗಸೂಚಿಯಂತೆ ಕಡಿಮೆ ಸಿಬ್ಬಂ ದಿಯೊಂದಿಗೆ ಕಾರ್ಯ ನಿರ್ವಹಿಸಲಿವೆ. ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹಾಲಿನ ಅಂಗಡಿ, ಮೆಡಿಕಲ್ ಶಾಪ್, ಆಸ್ಪತ್ರೆ, ಕ್ಲೀನಿಕ್ ಪೆಟ್ರೋಲ್ ಬಂಕ್ ಎಂದಿನಂತೆ ಕಾರ್ಯನಿರ್ವಹಿಸಲಿವೆ. ಈ ಸೇವೆ ಪಡೆದುಕೊಳ್ಳುವವರು ವಾಹನಗಳನ್ನು ತರುವಂತಿಲ್ಲ. ನಡೆದುಕೊಂಡು ಬರಬೇಕು. ಸಮೀಪದ ಅಂಗಡಿಗೆ ಹೋಗಿ ಖರೀದಿ ಮಾಡಬೇಕು ಎಂದರು.
ಮದುವೆ ಕಾರ್ಯಕ್ರಮ ನಡೆಸಲು 250ಕ್ಕೂ ಹೆಚ್ಚು ನೋಂದಣಿಯಾಗಿದ್ದು, ಅಂಥವರಿಗೆ ಮದುವೆ ಸಮಾರಂಭಕ್ಕೆ ಅವಕಾಶವಿದೆ. 10ಜನರು ಮಾತ್ರ ಪಾಲ್ಗೊಳ್ಳಬೇಕು. ಶವಸಂಸ್ಕಾರ ದಲ್ಲಿ 5ಜನರು ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಹೊರ ಜಿಲ್ಲೆಗಳಿಂದ ಬರುವವರನ್ನು ಚೆಕ್‌ಪೋಸ್ಟ್‌ಗಳಲ್ಲಿ ತಡೆದು ಅವರ ಮಾಹಿತಿ ಕಲೆ ಹಾಕಲಾಗುವುದು. ಮತ್ತು 14ದಿನಗಳ ಕಾಲ ಹೋಂ ಕ್ವಾರಟೈನ್‌ಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.
ಇಂದಿರಾ ಕ್ಯಾಂಟೀನ್, ದಿನಪತ್ರಿಕೆ, ಅನಾಥಾಶ್ರಮ, ವೃದ್ಧಾಶ್ರಮ ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ನ್ಯಾಯಾಲಯಗಳು ಹೈಕೋರ್ಟ್ ಆದೇಶದಂತೆ ಕಾರ್ಯನಿರ್ವಹಿಸಲಿವೆ. ಲಾಕ್‌ಡೌನ್ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಸುದ್ಧಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಎಂ. ಎಚ್.ಅಕ್ಷಯ್, ಜಿಪಂ ಸಿಇಒ ಎಸ್.ಪೂವಿತಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.