ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ

ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಸೂಚನೆ

Team Udayavani, Mar 18, 2020, 1:38 PM IST

18-March-23

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿಕೊಂಡು ಯಾವುದೇ ಗೊಂದಲಗಳು ಆಗದಂತೆ ಎಚ್ಚರ ವಹಿಸಬೇಕೆಂದು ಶಿಕ್ಷಣ ಇಲಾಖೆ ಅ ಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು.

ಮಂಗಳವಾರ ನಗರದ ಜಿಲ್ಲಾ ಪಂಚಾಯತ್‌ ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ 2020ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ 6,301 ವಿದ್ಯಾರ್ಥಿಗಳು ಮತ್ತು 6,077 ವಿದ್ಯಾರ್ಥಿನಿಯರು ಸೇರಿದಂತೆ ಹೊಸ 12,378 ವಿದ್ಯಾರ್ಥಿಗಳು, ಖಾಸಗಿ ವಿದ್ಯಾರ್ಥಿಗಳು 284, ಪುನರಾವರ್ತಿತ 561 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 13,328
ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಎಲ್ಲಾ 58 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ಭದ್ರತೆಗೆ ಪೊಲೀಸ್‌ ಸಿಬ್ಬಂದಿ ನಿಯೋಜಿಸಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಗುಂಪು-ಗುಂಪಾಗಿ ಸೇರದಂತೆ ಹಾಗೂ ಕೈ ಕುಲುಕದಂತೆ ಸೂಚನೆ ನೀಡಬೇಕು. ಅಲ್ಲದೇ, ಕೊರೊನಾ ಮುಂಜಾಗ್ರತೆ ಕುರಿತ ಕರಪತ್ರ ಹಂಚಿ ಸೋಂಕು ಹರಡದಂತೆ ತಡೆಗಟ್ಟಲು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯೂ ಕಳೆದ ಬಾರಿಗಿಂತ ರಾಜ್ಯದಲ್ಲಿ ಉನ್ನತ ಶ್ರೇಣಿ ಪಡೆಯಬೇಕು. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲೆಯ 58 ಕೇಂದ್ರಗಳಿಗೂ ಸ್ಥಾನಿಕ ಜಾಗೃತ ದಳ, ಪ್ರಶ್ನೆ ಪತ್ರಿಕೆ ಅಭೀಕ್ಷಕರು ಹಾಗೂ ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.

ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಪ್ರಾಥಮಿಕ ಚಿಕಿತ್ಸೆ ನೀಡುವ ಮೆಡಿಕಲ್‌ ಕಿಟ್‌ ಒಳಗೊಂಡಂತೆ ಆರೋಗ್ಯ ಸಹಾಯಕರನ್ನು ನೇಮಿಸಬೇಕೆಂದು ಆರೋಗ್ಯ ಇಲಾಖಾ ಅಧಿ ಕಾರಿಗಳಿಗೆ ಸೂಚಿಸಿದರು. ಯಾರೊಬ್ಬರು ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಒಯ್ಯುವುದು ಸೇರಿದಂತೆ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಉಸ್ತುವಾರಿ ವಹಿಸಲು ಮೊಬೈಲ್‌ ಸ್ವಾಧೀನಾಧಿಕಾರಿಯನ್ನು ನೇಮಿಸಲಾಗಿದೆ ಎಂದರು.

ಸಹ ನಿರ್ದೇಶಕರು ಮತ್ತು ಪದನಿಮಿತ್ತ ಜಂಟಿ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ವಿಭಾಗ ರಾಜೇಂದ್ರ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆ ಭಯವಿಲ್ಲದಂತೆ ಮುಕ್ತ ವಾತವರಣದಲ್ಲಿ ಪರೀಕ್ಷೆ ಬರೆಯುವಂತಾಗಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಗೆ ಬರುವ ವಿದ್ಯಾರ್ಥಿಗನ್ನು ನಗುಮೊಗದಿಂದ ಅವರನ್ನು ಆಹ್ವಾನಿಸಿ ಪಾರದರ್ಶಕವಾಗಿ ಪರೀಕ್ಷೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಶಿವಮೊಗ್ಗ ಡಯತ್‌ ಪ್ರಾಂಶುಪಾಲರಾದ ಸುಮಂಗಲಾ ವಿ.ಕುಚ್ಚಿನಾಡ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಣಾಧಿ ಕಾರಿ ಎಸ್‌.ಪೂವಿತಾ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕಿ ಶೃತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಭರತ್‌, ನೋಡಲ್‌ ಅಧಿ ಕಾರಿ ಜಯಣ್ಣ, ಸುಮಂಗಳಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ನಂಜಯ್ಯ, ಪ್ರೌಢಶಾಲೆ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.