Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Team Udayavani, Dec 20, 2024, 1:33 PM IST
ಚಿಕ್ಕಮಗಳೂರು: ಸಿ.ಟಿ.ರವಿ ಬಂಧನವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ಮತ್ತೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಕರೆ ನೀಡಿರುವ ಚಿಕ್ಕಮಗಳೂರು ನಗರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ.
ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಪೊಲೀಸರ ಕಣ್ಣುತ್ತಪ್ಪಿಸಿ ಅಲ್ಲಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚುವ ಘಟನೆಗಳು ನಡೆಯುತ್ತಿವೆ.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುವ ವೇಳೆ ಹನುಮಂತಪ್ಪ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಬಂದ ಬಿಜೆಪಿ ಕಾರ್ಯಕರ್ತರ ನಡುವೆ ಆಜಾದ್ ಪಾರ್ಕ್ ವೃತ್ತದಲ್ಲಿ ತಳ್ಳಾಟ ನೂಕಾಟ ನಡೆಯಿತು.
ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದರು. ನಗರದ ವಿವಿಧೆಡೆಯಲ್ಲಿ ಟೈರ್ ಗೆ ಬೆಂಕಿ ಹಚ್ಚಿರುವ ಘಟನೆಗಳು ನಡೆದಿದ್ದು ಈ ವೇಳೆ ಪ್ರತಿಭಟನಾ ನಿರತರನ್ನು ಬಂಧಿಸಲಾಯಿತು. ರಾಮನಹಳ್ಳಿಯಲ್ಲಿ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಜಿಲ್ಲೆಯ ಮೂಡಿಗೆರೆ, ನರಸಿಂಹರಾಜಪುರ, ತರೀಕೆರೆ, ಕಡೂರು ತಾಲೂಕಿನಲ್ಲಿ ಪ್ರತಿಭಟನೆ ಕಾವು ಜಾಸ್ತಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.