ಮೋದಿ ಆಡಳಿತ ವೈಖರಿಗೆ ವಿಶ್ವವೇ ಮೆಚ್ಚುಗೆ: ಮಂಡಿಮಠ
Team Udayavani, Apr 14, 2019, 5:50 PM IST
ಚಳ್ಳಕೆರೆ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿಗೆ ಇಡೀ ದೇಶ ಸೇರಿದಂತೆ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದೆ. ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಿಸಲು ಮತದಾರರು ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ ಅವರಿಗೆ ಮತ ನೀಡುವ ಮೂಲಕ ಬೆಂಬಲಿಸಬೇಕೆಂದು ಮಾಜಿ ಶಾಸಕ ಜಿ.ಬಸವರಾಜ ಮಂಡಿಮಠ ಮನವಿ ಮಾಡಿದರು.
ತಾಲೂಕಿನ ದೊಡ್ಡೇರಿ ಜಿಪಂ ಕ್ಷೇತ್ರದ ವ್ಯಾಪ್ತಿಯ ಕಸ್ತೂರಿ ತಿಮ್ಮನಹಳ್ಳಿ, ದೇವರಮರಿಕುಂಟೆ, ದೊಡ್ಡಚೆಲ್ಲೂರು, ಓಬಣ್ಣನಹಳ್ಳಿ, ಚಿಕ್ಕಚೆಲ್ಲೂರು, ಅಡವಿಚಿಕ್ಕೇನಹಳ್ಳಿ ಮುಂತಾದ
ಗ್ರಾಮಗಳಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ ಪರ ಮತಯಾಚಿಸಿ ಅವರು ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಅವರನ್ನು ಗೆಲ್ಲಿಸಿದರೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಿದ್ದಾರೆ. ಮತದಾರರು ಅವರಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಕೋರಿದರು.
ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಜವಾಬ್ದಾರಿ ಮರೆತು ಮಾತನಾಡುತ್ತಿದ್ದಾರೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತಮ್ಮ ಭಾಷಣಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೈಗೊಂಡ ಯೋಜನೆಗಳ ಬಗ್ಗೆ ನಿರ್ಲಕ್ಷ್ಯವಾಗಿ ಮಾತನಾಡುತ್ತಾರೆ. ಆದರೆ ಪ್ರಸ್ತುತ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತದಾರರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟವಾಗಿ ಅರಿವಿದೆ. ಈಗಾಗಲೇ ಬಹುತೇಕ ಮತದಾರರು ಯಾರಿಗೆ ಮತ ನೀಡಬೇಕೆಂಬ ಬಗ್ಗೆ ದೃಢ ಸಂಕಲ್ಪವನ್ನು ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಾಳೆಮಂಡಿ ರಾಮದಾಸ್, ಮಾತೃಶ್ರೀ ಎನ್.ಮಂಜುನಾಥ, ಬಿ.ನಾಗರಾಜು, ಡಿ.ಭರತೇಶ್‌ರೆಡ್ಡಿ, ಭೂಲಿಂಗಪ್ಪ, ವಡೇರಹಳ್ಳಿ ತಿಪ್ಪೇಸ್ವಾಮಿ ಸೇರಿದಂತೆ ಕಾರ್ಯಕರ್ತರು ಮತ ಯಾಚನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.