Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Team Udayavani, Nov 22, 2024, 4:46 PM IST
ಸಾಗರ: ತರಗತಿ ಕೊಠಡಿಯಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ಶುಕ್ರವಾರ ಎಲ್ಬಿ ಕಾಲೇಜಿನ ಬಿಎ ವಿಭಾಗದ ವಿದ್ಯಾರ್ಥಿಗಳು ಕಾಲೇಜಿನ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆಡಳಿತ ಮಂಡಳಿಯ ಪ್ರಮುಖರು ವಿದ್ಯಾರ್ಥಿಗಳನ್ನು ತರಗತಿ ಕೊಠಡಿಗಳಿಗೆ ಕರೆದುಕೊಂಡು ಹೋಗಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತರಗತಿ ಕೊಠಡಿಯಲ್ಲಿ ಅನೇಕ ಲೋಪಗಳು ಇರುವುದು ಕಂಡು ಬಂದಿತು.
ತಾವು ಅನೇಕ ಬಾರಿ ತರಗತಿ ಕೊಠಡಿ ಅವ್ಯವಸ್ಥೆ ಕುರಿತು ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರಾಧ್ಯಾಪಕರ ಗಮನಕ್ಕೆ ತಂದಿದ್ದೇವೆ. ಇತರೆ ವಿಭಾಗಗಳಿಗೆ ಉತ್ತಮ ಸೌಲಭ್ಯ ನೀಡಿದ್ದು, ಬಿಎ ವಿಭಾಗವನ್ನು ತೀರ ಕಡೆಗಣಿಸಲಾಗಿದೆ. ತರಗತಿಯಲ್ಲಿ ಫ್ಯಾನ್ ವ್ಯವಸ್ಥೆ ಇದ್ದರೂ ಸುಸೂತ್ರವಾಗಿಲ್ಲ. ಫ್ಯಾನ್ ಹಾಕಲು ಹೋದರೆ ಶಾಕ್ ಹೊಡೆಯುತ್ತಿದೆ. ತರಗತಿ ಮೇಲ್ಚಾವಣಿ ಹೆಂಚುಗಳೆಲ್ಲಾ ಒಡೆದು ಹೋಗಿದ್ದು ಮಳೆಗಾಲ ಇನ್ನಿತರ ಸಂದರ್ಭದಲ್ಲಿ ಕುಳಿತುಕೊಳ್ಳಲು ಭಯವಾಗುತ್ತದೆ ಎಂದು ವಿದ್ಯಾರ್ಥಿಗಳು ದೂರಿದರು.
ತರಗತಿ ಕೊಠಡಿ ಧೂಳುಮಯವಾಗಿದ್ದು ಕುಳಿತುಕೊಳ್ಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಆಡಳಿತ ಮಂಡಳಿ ಕೇಳಿದಷ್ಟು ಹಣವನ್ನು ನಾವು ಕಟ್ಟಿದ್ದೇವೆ. ಆದರೂ ಸೌಲಭ್ಯ ಕೊಡುತ್ತಿಲ್ಲ. ತಕ್ಷಣ ಬಿಎ ವಿಭಾಗದ ತರಗತಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಮುಂದುವರೆಸುವ ಎಚ್ಚರಿಕೆ ನೀಡಿದರು.
ಆಡಳಿತ ಮಂಡಳಿ ಪರವಾಗಿ ಪ್ರಧಾನ ಕಾರ್ಯದರ್ಶಿ ಡಾ. ಎಚ್.ಎಂ.ಶಿವಕುಮಾರ್ ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿ ಸೋಮವಾರದೊಳಗೆ ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು. ಈ ಸಂದರ್ಭದಲ್ಲಿ ಗಗನ್, ದೀಪಿಕಾ ಇನ್ನಿತರರು ಹಾಜರಿದ್ದರು.
ಇದನ್ನೂ ಓದಿ: Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.