ಶುದ್ಧ ನೀರಿನ ಘಟಕ ನಿರ್ಮಾಣದಲ್ಲಿ ಭಾರೀ ಅವ್ಯವಹಾರ: ತಪ್ಪಿತಸ್ಥರ ವಿರುದ್ಧ ಕ್ರಮ; ಸಿಎಂ
Team Udayavani, Dec 9, 2020, 5:53 PM IST
ವಿಧಾನಸಭೆ: ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣದಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಜಂಟಿ ಸದನ ಸಮಿತಿಯಿಂದ ತನಿಖೆ ನಡೆಸಿ ಎರಡು ತಿಂಗಳಲ್ಲಿ ವರದಿ ಪಡೆದು ಸದನಕ್ಕೆ ಮಂಡಿಸಿ ತಪ್ಪಿತಸ್ತರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ವೆಂಕಟರೆಡ್ಡಿ ಮುದ್ನಾಳ್ ಪ್ರಸ್ತಾಪಿಸಿದ ವಿಚಾರದ ಚರ್ಚೆಯಲ್ಲಿ ಪಾಲ್ಗೊಂಡ ಆಡಳಿತ ಹಾಗೂ ಪ್ರತಿಪಕ್ಷ ಜೆಡಿಎಸ್ ಸದಸ್ಯರು ಘಟಕ ನಿರ್ಮಾಣದಲ್ಲಿ ಭಾರೀ ವ್ಯವಹಾರ ನಡೆದಿದ್ದು ತನಿಖೆಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ತನಿಖೆ ನಡೆಸುವುದಾಗಿ ಪ್ರಕಟಿಸಿದರು.
ನಾನು ಕೆಲವೆಡೆ ಭೇಟಿ ನೀಡಿದಾಗ ಶುದ್ದ ಕುಡಿಯುವ ನೀರಿನ ಘಟಕಗಳು ಹಾಳಾಗಿರುವುದನ್ನು ಕಂಡಿದ್ದೇನೆ. ಎಲ್ಲಿಯೂ ಅವು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಘಟಕ ನಿರ್ಮಾಣಕ್ಕೆ ಒಂದಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೆಚ್ಚ ಮಾಡಿರುವುದು ಕಾಣುತ್ತಿದೆ. ಇದು ದೊಡ್ಡ ಹಗರಣವಾಗಿದ್ದು, ದುಬಾರಿ ಹಣ ವೆಚ್ಚ ಮಾಡಿ ಲೂಟಿ ಮಾಡಲಾಗಿದೆ. ಎರಡು ತಿಂಗಳಲ್ಲಿ ಎಲ್ಲೆಡೆ ಪರಿಶೀಲನೆ ನಡೆಸಿ ಜಂಟಿ ಸದನ ಸಮಿತಿ ವತಿಯಿಂದ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ವೆಂಕಟರೆಡ್ಡಿ ಮುದ್ನಾಳ್, ಯಾದಗಿರಿ ಕ್ಷೇತ್ರದಲ್ಲಿ 29 ಘಟಕಗಳು ತಾತ್ಕಾಲಿಕವಾಗಿ ಸ್ಥಗತಗೊಂಡಿವೆ ಎಂದು ಸಚಿವರು ಉತ್ತರಿಸಿದ್ದಾರೆ. ಆದರೆ 48 ಘಟಕ ಸ್ಥಗಿತಗೊಂಡಿವೆ ಎಂದರು. ಇದಕ್ಕೆ ದನಿಗೂಡಿಸಿದ ಬಿಜೆಪಿಯ ಸಿದ್ದು ಸವದಿ, ಎಲ್ಲೆಡೆ ಘಟಕಗಳು ಕೆಟ್ಟು ನಿಂತಿವೆ. ಮಾರುಕಟ್ಟೆಯಲ್ಲಿ ಮೂರ್‍ನಾಲ್ಕು ಲಕ್ಷ ರೂ. ವೆಚ್ಚಕ್ಕೆ ಯಂತ್ರೋಪಕರಣ ಲಭ್ಯವಿದ್ದು, ಹಿಂದಿನ ಸರ್ಕಾರ 10- 12 ಲಕ್ಷ ರೂ. ವೆಚ್ಚ ಮಾಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಜೆಡಿಎಸ್‌ನ ವೆಂಕಟರಾವ್ ನಾಡಗೌಡ, ಟೆಂಡರ್ ಪಡೆದವರು ಘಟಕಗಳನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ದೂರಿದರು.
ಇದನ್ನೂ ಓದಿ:BJP, BJP…ಪಾಲಿಕೆ, ಪಂಚಾಯ್ತಿ ಚುನಾವಣೆ ಫಲಿತಾಂಶದ ಬಗ್ಗೆ ಜಾವ್ಡೇಕರ್ ಹೇಳಿದ್ದೇನು?
ಸಚಿವರ ಮೌನ ಏಕೆ?
ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್, ಈ ಘಟಕಗಳ ನಿರ್ಮಾಣದಲ್ಲಿ ಭಾರೀ ಹಗರಣವಾಗಿದೆ. 4 ಲಕ್ಷ ರೂ. ವೆಚ್ಚದಲ್ಲಾಗುವ ಘಟಕ ನಿರ್ಮಾಣಕ್ಕೆ ನಾಲ್ಕು ಪಟ್ಟು ಹೆಚ್ಚು ಹಣಕ್ಕೆ ಟೆಂಡರ್ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ ಹಗಲು ದರೋಡೆಯಾಗಿದ್ದು, ಶೇ.99ರಷ್ಟು ಘಟಕಗಳು ಸ್ಥಗಿತಗೊಂಡಿವೆ. ಕೆ.ಎಸ್. ಈಶ್ವರಪ್ಪ ಅವರು ಸಚಿವರಾದಾಗ ಈ ಬಗ್ಗೆ ಮಾತನಾಡಿದ್ದರು. ನಂತರ ಯಾಕೆ ಮೌನವಾಗಿದ್ದಾರೋ ಗೊತ್ತಿಲ್ಲ ಎಂದು ಕಾಲೆಳೆದರು.
ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎಸ್. ಈಶ್ವರಪ್ಪ, ಹಲವೆಡೆ ಘಟಕಗಳು ಹಾಳಾಗಿದ್ದು, ರಿಪೇರಿ ಸಮರ್ಪವಾಗಿಲ್ಲದಿರುವುದು ಗಮನಕ್ಕೆ ಬಂದಿದೆ. ನಾನಂತೂ ಮೌನವಾಗಿಲ್ಲ. ಪ್ರತಿಷ್ಠಿತ ಹಿಪ್ಸಾಸ್ ಸಂಸ್ಥೆಯಿಂದ ಸರ್ವೆ ನಡೆಸಲಾಗಿದೆ. ಶೇ. 70ರಷ್ಟು ಘಟಕ ಕಾರ್ಯ ನಿರ್ವಹಿಸುತ್ತಿದ್ದು, ಶೇ. 4ರಷ್ಟು ಬಂದ್ ಆಗಿವೆ. ಶೇ. 26ರಷ್ಟು ಘಟಕ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ ಎಂಬುದಾಗಿ ಸಂಸ್ಥೆ ವರದಿ ನೀಡಿದೆ. ಮ್ಯಾಕ್ಸ್ ಆಕ್ವಾ ಏಜೆನ್ಸಿಯ ಎಫ್ಎಸ್‌ಡಿ ಮುಟ್ಟುಗೋಲು ಹಾಕಿಕೊಂಡು ಟೆಂಡರ್ ರದ್ಧತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸದನ ಸೂಚಿಸಿದಂತೆ ಮುಂದುವರಿಯುತ್ತೇನೆ ಎಂದು ಹೇಳಿದರು.
ಬಿಜೆಪಿಯ ಆರಗ ಜ್ಞಾನೇಂದ್ರ, ಅಲ್ಪಸಂಖ್ಯಾತರು, ಬಡವರ ಕಾಲೋನಿಗಳಲ್ಲಿ ಘಟಕ ಸ್ಥಾಪನೆಯಾಗಬೇಕಿತ್ತು. ಆದರೆ ಗಂಟು ಹೊಡೆಯಲು ಘಟಕ ನಿರ್ಮಿಸಲಾಗಿದೆ. 4 ಲಕ್ಷ ರೂ. ವೆಚ್ಚದಲ್ಲಾಗುವ ಘಟಕಕ್ಕೆ 15- 20 ಲಕ್ಷ ರೂ. ಖರ್ಚು ಮಾಡಿದ್ದಾರೆ ಎಂದರೆ ಎಷ್ಟು ಗಂಟು ಹೊಡೆದಿದ್ದಾರೆ ಎಂದು ಗೊತ್ತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾಂಗ್ರೆಸ್‌ನ ಯು.ಟಿ. ಖಾದರ್, ಯೋಜನೆಯ ಅನುಷ್ಠಾನದಲ್ಲಿ ಸಮಸ್ಯೆ ಇದೆ. ರಾಜ್ಯದಲ್ಲೇ ಮೊದಲ ಬಾರಿಗೆ ನಮ್ಮ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನದಡಿ ಘಟಕ ನಿಮಾರ್ಣವಾಗಿದ್ದು, ಸಚಿವರನ್ನು ಒಮ್ಮೆ ಪರಿಶೀಲಿಸಲಿ ಎಂದು ಸಲಹೆ ನೀಡಿದರು. ಜೆಡಿಎಸ್‌ನ ರವೀಂದ್ರ ಶೀಕಂಠಯ್ಯ, ಹಗರಣದ ಬಗ್ಗೆ ತನಿಖೆ ನಡೆಸುವುದು ಸ್ವಾಗತಾರ್ಹ. ಜತೆಗೆ ಕೆಟ್ಟು ನಿಂತಿರುವ ಘಟಕಗಳನ್ನು ದುರಸ್ತಿಪಡಿಸಬೇಕು ಎಂದು ಕೋರಿದರು.
ನಂತರ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಅವ್ಯವಹಾರ ನಡೆದಿರುವ ಬಗ್ಗೆ ತನಿಖೆ ನಡೆಸುವ ವಿಚಾರದಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಸದನ ಸೂಚಿಸಿದಂತೆ ತನಿಖೆ ನಡೆಸಲು ಬದ್ಧ ಎಂದು ಹೇಳಿದರು. ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಂಟಿ ಸದನ ಸಮಿತಿಯಿಂದ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳುವ ಮೂಲಕ ಚರ್ಚೆಗೆ ವಿರಾಮ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.