ಸಹಬಾಳ್ವೆಯೇ ಕುಟುಂಬ ವ್ಯವಸ್ಥೆಯ ಮೂಲಮಂತ್ರ

ಇಂದು ವಿಶ್ವ ಕುಟುಂಬ ದಿನ

Team Udayavani, May 15, 2019, 6:20 AM IST

sahabalve

ಆಧುನಿಕ ಜೀವನಕ್ಕೆ ಹೊಂದಿಕೊಂಡಂತೆ ಕುಟುಂಬಗಳು ಸಣ್ಣದಾಗತೊಡಗಿವೆ. ಬಾಲ್ಯದಲ್ಲಿ ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುವ ತಂದೆ-ತಾಯಿಯನ್ನು ವೃದ್ಧಾಪ್ಯದಲ್ಲಿ ಆಶ್ರಮಕ್ಕೆ ದೂಡುವ ಮಕ್ಕಳಿಗೆ ಕುಟುಂಬದ ಮಹತ್ವವನ್ನು ತಿಳಿಸಿಕೊಡುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಮೇ 15ರಂದು ಕುಟುಂಬ ದಿನವನ್ನು ಆಚರಿಸಲಾಗುತ್ತಿದೆ.

ಸಮಾಜ ವ್ಯವಸ್ಥೆಯ ಬಹುಮುಖ್ಯ ಅಂಗ ಕುಟುಂಬ. ಉತ್ತಮ ಕುಟುಂಬದಿಂದಲೇ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ. ಭಾರತೀಯ ಪರಂಪರೆಯಲ್ಲಿ ಕುಟುಂಬಕ್ಕೆ ಅದರದ್ದೇ ಆದ ಪ್ರಾಮುಖ್ಯವಿದೆ. ಅವಿಭಕ್ತ ಕುಟುಂಬಗಳನ್ನು ಹೊಂದಿದ್ದ ಭಾರತೀಯ ಸಂಸ್ಕೃತಿಯೂ ಕೂಡಿ ಬಾಳುವುದನ್ನು ಕಲಿಸಿಕೊಡುತ್ತದೆ. ಇಲ್ಲಿ ಪ್ರೀತಿ, ಒಗ್ಗಟ್ಟುಗಳೇ ಮೂಲಮಂತ್ರ.
ಒಂದು ಮಗು ಸಮಾಜದ ಉತ್ತಮ ಪ್ರಜೆಯಾಗಿ ರೂಪುಗೊಂಡರೆ ಅದರಲ್ಲಿ ಆ ಮಗುವಿನ ಶಕ್ತಿಗಿಂತ ಆತನನ್ನು ಆ ರೀತಿ ರೂಪಿಸಿದ ಕುಟುಂಬದ ಸಂಸ್ಕೃತಿಯನ್ನು ಹೊಗಳುವ ಒಂದು ಕಾಲಘಟ್ಟವಿತ್ತು.

ಆದರೆ ಇಂದು ಕಾಲ ಬದಲಾಗಿದೆ. ಜತೆಗೆ ಜಗತ್ತಿನಾದ್ಯಂತ ಕುಟುಂಬ ರೂಪೀಕರಣದ ಪದ್ಧತಿಯೂ ಬದಲಾಗಿದೆ. ಅವಿಭಕ್ತ ಕುಟುಂಬಗಳು ಅನುಕುಟುಂಬಗಳಾಗಿ ಬದಲಾಗಿವೆ. ಅಜ್ಜ, ಅಜ್ಜಿ, ಚಿಕ್ಕಪ್ಪ, ಚಿಕ್ಕಮ್ಮ, ಮಾವ, ಅತ್ತೆ ಅಪ್ಪ, ಅಮ್ಮ ಮಕ್ಕಳು ಮೊಮ್ಮಕ್ಕಳು ತುಂಬಿತುಳುಕುತ್ತಿದ್ದ ಮನೆಗಳಲ್ಲಿ ಈಗ ಕೇವಲ ಗಂಡ, ಹೆಂಡತಿ, ಮಕ್ಕಳು ಮಾತ್ರ ಕಾಣಸಿಗುತ್ತಾರೆ. ಕುಟುಂಬದಲ್ಲಿ ಜನಸಂಖ್ಯೆ ಕಡಿಮೆಯಾಗುತ್ತಾ ಹೋದಂತೆ ಅಲ್ಲಿ ಭಾವನೆಗಳೂ ಬೆಲೆ ಕಳೆದು ಕೊಳ್ಳಲಾರಂಭಿಸುತ್ತವೆ. ಹೆತ್ತವರ, ಮಕ್ಕಳ ತರಾತುರಿಯ ಜೀವನದ ನಡುವೆ ಮುಖಕ್ಕೆ ಮುಖ ಕೊಟ್ಟು ಮಾತನಾಡುವಷ್ಟು ಸಮಯವಿಲ್ಲದೆ ಕೇವಲ ಯಂತ್ರಗಳಂತೆ ಬದುಕುವ ಇಂದಿನ ವಿಭಕ್ತ ಕುಟುಂಬಕ್ಕೆ ಕುಟುಂಬ ದ ಮಹತ್ವವನ್ನು ತಿಳಿಸುವ ಸಲುವಾಗಿ ಕುಟುಂಬ ದಿನವನ್ನು ಮೇ 15ರಂದು ಆಚರಿಸಲಾಗುತ್ತದೆ.

ಇತಿಹಾಸ, ಆಚರಣೆಯ ಉದ್ದೇಶ
1993-94ರಲ್ಲಿ ನಡೆದ ಯುನೈಟೆಡ್‌ ನೇಶನ್‌ ಅಸೆಂಬ್ಲಿಯಲ್ಲಿ ಪ್ರತಿ ವರ್ಷ ಮೇ 15ರಂದು ಕುಟುಂಬ ದಿನವನ್ನಾಗಿ ಆಚರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಅಂತಾರಾಷ್ಟ್ರೀಯ ಸಮುದಾಯಗಳನ್ನು ಕುಟುಂಬದೊಂದಿಗೆ ಜೋಡಿಸುವ ಮತ್ತು ಕುಟುಂಬ ವ್ಯವಸ್ಥೆಯ ಉದ್ದೇಶ ಹಾಗೂ ಮಹತ್ವವನ್ನು ಜಗತ್ತಿನೆಲ್ಲೆಡೆ ಆಚರಿಸುವ ಸಲುವಾಗಿ ಈ ದಿನದ ಆಚರಣೆಗೆ ಮಹತ್ವ ನೀಡಲು ನಿರ್ಧರಿಸಲಾಯಿತು.

ವರ್ಷದ ಥೀಮ್‌
ಕುಟುಂಬಗಳು ಮತ್ತು ಹವಾಮಾನ ಬದಲಾವಣೆಯ ನಿಯಂತ್ರಣ ಎಂಬ ಮಹತ್ವದ ಉದ್ದೇಶವನ್ನಿರಿಸಿಕೊಂಡು ಯು.ಎನ್‌. ಈ ವರ್ಷ ಕುಟುಂಬ ದಿನವನ್ನು ಆಚರಿಸುತ್ತಿದೆ.

ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿಯೂ ಕುಟುಂಬ ತುಂಬಾ ಪ್ರಧಾನವಾದ ಭಾಗ. ನೋವು ನಲಿವುಗಳೆರಡನ್ನೂ ಹಂಚಿಕೊಂಡು ಸೋಲು ಗೆಲುವುಗಳಿಗೆ ಜತೆಯಾಗುವ ಕುಟುಂಬ ಇದ್ದಾಗ ಮಾತ್ರ ವ್ಯಕ್ತಿ ಪರಿಪೂರ್ಣನಾಗುತ್ತಾನೆ. ಇದ್ದ ಕುಟುಂಬವನ್ನು ದೂರ ಮಾಡಿಕೊಳ್ಳದೆ ದೂರ ಇರುವ ಕುಟುಂಬವನ್ನು ಮತ್ತೆ ಜೋಡಿಸಿಕೊಂಡು ಈ ಸಲದ ಕುಟುಂಬ ದಿನವನ್ನು ಸಂಭ್ರಮದಿಂದ ಆಚರಿಸಬೇಕಿದೆ.

ಕುಟುಂಬ ದಿನದ ಚಿಹ್ನೆಯ ವೈಶಿಷ್ಟ
ಅಂತಾರಾಷ್ಟ್ರೀಯ ಕುಟುಂಬ ದಿನದ ಚಿಹ್ನೆ ಬಹಳ ವೈಶಿಷ್ಟéವನ್ನು ಒಳಗೊಂಡಿದೆ. ಚಿಹ್ನೆಯು ಹಸುರು ಬಣ್ಣದ ವೃತ್ತ ಹಾಗೂ ಅದರಲ್ಲಿ ಕೆಂಪು ಬಣ್ಣದಲ್ಲಿ ಚಿತ್ರಗಳನ್ನು ಒಳಗೊಂಡಿದೆ. ಒಂದು ಮನೆ ಹಾಗೂ ಹೃದಯದ ಸರಳವಾದ ಚಿತ್ರವನ್ನೊಳಗೊಂಡ ಈ ಚಿಹ್ನೆ ಕುಟುಂಬ ಸಮಾಜದ ಮೂಲ ಕೇಂದ್ರ ಹಾಗೂ ಕುಟುಂಬದಲ್ಲಿ ಎಲ್ಲ ವಯಸ್ಸಿನವರಿಗೂ ರಕ್ಷಣೆ ದೊರೆಯುತ್ತದೆ ಎಂಬ ಸಂದೇಶವನ್ನು ನೀಡುತ್ತದೆ.

ಟಾಪ್ ನ್ಯೂಸ್

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.