Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್ ಟೀಕೆ
Team Udayavani, Dec 21, 2024, 12:59 AM IST
ಮಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಜಂಗಲ್ ರಾಜ್ ನಿರ್ಮಾಣವಾಗಿದೆ. ಕಾಂಗ್ರೆಸ್ ಗೂಂಡಾಗಳಿಗೆ ಮಣೆ ಹಾಕುತ್ತಿದೆ ಎಂಬುದು ಬೆಳಗಾವಿ ಅಧಿವೇಶನದ ವೇಳೆ ಮತ್ತೊಮ್ಮೆ ಸ್ಪಷ್ಟವಾಗಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತ ನಾಡಿ, ಸಂವಿಧಾನದ ಘನತೆ ಗೌರವದ ಬಗ್ಗೆ ಮಾತನಾಡುವ ಕಾಂಗ್ರೆಸ್ ದಿಲ್ಲಿ ಮತ್ತು ಕರ್ನಾಟಕದಲ್ಲಿ ಸಂವಿಧಾನದ ಕಗ್ಗೊಲೆ ಮಾಡಿದೆ. ಲೋಕಸಭೆಯಲ್ಲಿ ರಾಹುಲ್ ಗಾಂಧಿ ವರ್ತನೆ ಮತ್ತು ಸಂಸದರ ಮೇಲಿನ ಹಲ್ಲೆ ಖಂಡನೀಯ.
ರಾಹುಲ್‌ವಿರುದ್ಧ ತತ್‌ಕ್ಷಣ ಕಠಿನ ಕ್ರಮ ಕೈಗೊಳ್ಳಬೇಕು. ಸಿಟಿ ರವಿ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧವೂಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸದನದ ಒಳಗೆ ನಡೆದ ವಿಷಯಗಳ ಕುರಿತಂತೆ ಸಭಾಪತಿ ಯವರು ನಿಯಮಾನುಸಾರ ಕ್ರಮ ಕೈಗೊಳ್ಳುತ್ತಾರೆ. ಆದರೆ ಇಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸಿ.ಟಿ.ರವಿ ತಮ್ಮ ಮೇಲಾದ ಹಲ್ಲೆಗೆ ದೂರು ನೀಡಿದರೂ ಯಾರನ್ನೂ ಬಂಧಿಸಿಲ್ಲ. ಜನಪ್ರತಿನಿಧಿಗಳ ಸ್ಥಿತಿಯೇ ಹೀಗಾದರೆ ಹೇಗೆ? ಗೃಹಸಚಿವರು ಪೊಲೀಸರನ್ನು ಕೂಲಿಯಾಳುಗಳಂತೆ ಬಳಸುತ್ತಿರುವುದು ಖಂಡನೀಯ. ರಾಜ್ಯದಲ್ಲಿ ಸಿದ್ದರಾಮ್ಯನವರಿಂದಾಗಿ ಗೂಂಡಾ ರಾಜ್ಯವಾಗುತ್ತಿದೆ ಎಂದು ಅವರು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ
Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.