ಭ್ರಷ್ಟಾಚಾರ ಆರೋಪ: ಮಾಜಿ ಪಿಎಂ ಜೈಲಲ್ಲಿ-ವಿಪಕ್ಷ ಬಹಿಷ್ಕಾರ ನಡುವೆಯೇ ಇಂದು ಬಾಂಗ್ಲಾ ಚುನಾವಣೆ
Team Udayavani, Jan 7, 2024, 12:31 AM IST
ಢಾಕಾ: ಬಾಂಗ್ಲಾದೇಶದಲ್ಲಿ ರವಿವಾರ ಸಾರ್ವತ್ರಿಕ ಚುನಾವಣೆ ನಡೆಯಲಿದೆ. 11.96 ಕೋಟಿ ನೋಂದಾಯಿತ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ದೇಶಾದ್ಯಂತ 42,000ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಜ.7ರಂದು ಬೆಳಗ್ಗೆ 8 ಗಂಟೆಯಿಂದ 5 ಗಂಟೆ ವರೆಗೆ ಮತದಾನ ನಡೆಯಲಿದೆ. ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 27 ರಾಜಕೀಯ ಪಕ್ಷಗಳ 1,500ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. ಅಲ್ಲದೆ, 436 ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಜ.8ರಂದು ಫಲಿತಾಂಶ ಹೊರಬೀಳಲಿದೆ. ಭಾರತದ ಮೂವರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶಿ ವೀಕ್ಷಕರು ಬಾಂಗ್ಲಾದೇಶದ 12ನೇ ಸಾರ್ವತ್ರಿಕ ಚುನಾವಣೆಯ ಮೇಲ್ವಿಚಾರಣೆ ನಡೆಸಲಿದ್ದಾರೆ. ಮಾಜಿ ಪ್ರಧಾನಿ ಮತ್ತು ಪ್ರತಿಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ(ಬಿಎನ್ಪಿ) ನಾಯಕಿ ಖಾಲಿದಾ ಜಿಯಾರನ್ನು ಹಾಲಿ ಸರಕಾರ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬಂಧಿಸಿದೆ. ಹೀಗಾಗಿ, ಅವರ ಪಕ್ಷ ಸಂಸತ್ ಚುನಾವಣೆ ಯನ್ನು ಬಹಿಷ್ಕರಿಸಿದೆ. ಈ ಹಿನ್ನೆಲೆಯಲ್ಲಿ ಅವಾಮಿ ಲೀಗ್ ನಾಲ್ಕನೇ ಬಾರಿಗೆ ಗದ್ದುಗೆಗೆ ಏರುವುದು ಬಹುತೇಕ ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.