ನ.4ರಿಂದ ಭಾಲ್ಕಿಯಲ್ಲಿ ಸಿದ್ದೇಶ‍್ವರ ಶ್ರೀಗಳ ಪ್ರವಚನ


Team Udayavani, Oct 30, 2021, 11:45 AM IST

9siddeshwara

ಭಾಲ್ಕಿ: ಸಿದ್ದೇಶ್ವರ ಶ್ರೀಗಳ ಪ್ರವಚನ ಕೇಳುವ ಸೌಭಾಗ್ಯ ತಾಲೂಕಿನ ಜನತೆಗೆ ಮತ್ತೂಮ್ಮೆ ಒಲಿದು ಬಂದಿದೆ. ನ.4ರಿಂದ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಶ್ರೀಗಳು ತಿಂಗಳ ಕಾಲ ಆಧ್ಯಾತ್ಮಿಕ ಪ್ರವಚನ ನಡೆಸಿ ಕೊಡಲಿದ್ದಾರೆ. ಅಂತಹ ಶ್ರೀಗಳ ಪ್ರವಚನ ಆಲಿಸಲು ಪೂರಕ ವಾತಾವರಣ ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಪ್ರವಚನದ ಸ್ಥಳ ಪರಿಶೀಲನೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರು ನಡೆದಾಡುವ ವಿಶ್ವವಿದ್ಯಾಲಯ ಮತ್ತು ಜ್ಞಾನದ ಕಣಜ ಆಗಿದ್ದಾರೆ. ಅವರ ಪ್ರವಚನ ಆಲಿಸಿ ಲಕ್ಷಾಂತರ ಜನ ಬದಲಾಗಿ ತಮ್ಮ ಜೀವನವನ್ನು ಪಾವನವಾಗಿಸಿಕೊಂಡಿದ್ದಾರೆ. ಅಂತಹ ಮಹಾಪುರುಷರು ನಮ್ಮ ಭಾಗದಲ್ಲಿ ಪ್ರವಚನ ನಡೆಸಿ ಕೊಡಲು ಬರುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆ ತರಿಸಿದೆ ಎಂದರು.

ಪ್ರತಿದಿನ ಬೆಳಗ್ಗೆ 6.30ರಿಂದ 7.30ರ ವರೆಗೆ ಶ್ರೀಗಳ ಪ್ರವಚನ ನಡೆಯಲಿದ್ದು, ಪ್ರವಚನ ಆಲಿಸಲು ಜಿಲ್ಲೆಯ ಮೂಲೆ ಮೂಲೆಯಿಂದ ಸಾವಿರಾರೂ ಸಂಖ್ಯೆಯಲ್ಲಿ ಜನರು ಹರಿದು ಬರಲಿದ್ದಾರೆ. ಪ್ರವಚನ ಸ್ಥಳದಲ್ಲಿ ಶಾಂತತೆ, ಶಿಸ್ತು, ಸ್ವತ್ಛತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರವಚನದ ಅವಧಿಯಲ್ಲಿ ಚನ್ನಬಸವಾಶ್ರಮ ಎದುರಿನ ರಸ್ತೆಯಲ್ಲಿ ಬ್ಯಾರಿಕೇಡ್‌ ಅಳವಡಿಸಿ ಮಾರ್ಗ ಬದಲಿಸಿ ಶಾಂತತೆ ಕಾಪಾಡಬೇಕು. ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜತೆಗೆ ಪಟ್ಟಣದ ರಸ್ತೆ, ಚರಂಡಿ ಸ್ವತ್ಛತೆ, ಅಲ್ಲಲ್ಲಿ ಮೊಬೈಲ್‌ ಶೌಚಗೃಹ ಅಳವಡಿಸುವುದು, ಕುಡಿವ ನೀರಿನ ವ್ಯವಸ್ಥೆ ಕಲ್ಪಿಸುವುದು, ವಿದ್ಯುತ್‌ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಸಿದ್ದೇಶ್ವರ ಸ್ವಾಮೀಜಿ ಅವರ ನಡೆ-ನುಡಿ ಜಗತ್ತಿಗೆ ಮಾದರಿ ಆಗಿದೆ. ಅವರ ಪ್ರವಚನದಿಂದ ಸಾಕಷ್ಟು ಜನ ಉದ್ಧಾರ ಆಗಿದ್ದಾರೆ. ಅವರು ಪ್ರವಚನ ನಡೆಸಿಕೊಡಲು ನಮ್ಮಲ್ಲಿಗೆ ಬರುತ್ತಿರುವುದು ಹರ್ಷ ತಂದಿದೆ. ಶ್ರೀಗಳ ಪ್ರವಚನ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಇಂದೇ ಪುನೀತ್ ಅಂತ್ಯಕ್ರಿಯೆ ಸಾಧ್ಯತೆ : ಸಚಿವರಿಂದ ಸ್ಥಳ ಪರಿಶೀಲನೆ

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಕೀರ್ತಿ ಚಾಲಕ್‌, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್‌, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಪ್ರಮುಖರಾದ ಹಣಮಂತರಾವ ಚವ್ಹಾಣ, ಶಶಿಧರ ಕೋಸಂಬೆ, ಟಿಂಕು ರಾಜಭವನ, ರಾಜಕುಮಾರ ಮೋರೆ, ಕಾಶಿನಾಥ ಲದ್ದೆ, ಬಸವರಾಜ ಮರೆ, ಜೈಪಾಲ ಬೋರಾಳೆ, ಪ್ರಶಾಂತ ಕೊಟಗೀರಾ, ದೀಪಕ ಠಮಕೆ ಇದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.